ತಂದೆಯನ್ನು ನೋಡಿ ಮಗನಿಗೆ ಹೆಣ್ಣು ಕೊಟ್ಟಿದ್ದು 2004 ರಲ್ಲಿ : ಬಿಜೆಪಿ ವ್ಯಂಗ್ಯ
Team Udayavani, Apr 6, 2019, 6:42 AM IST
ಶಿರ್ವ: ಉಡುಪಿ ಜಿಲ್ಲೆಯ ಮತದಾರರು ತಂದೆಯನ್ನು ನೋಡಿ ಮಗನಿಗೆ ಹೆಣ್ಣು ಕೊಟ್ಟ ರೀತಿಯಲ್ಲಿ ಮತದಾನ ಮಾಡಿ ಲೋಕಸಭಾ ಅಭ್ಯರ್ಥಿಯನ್ನು ಗೆಲ್ಲಿಸಿದ್ದು 2004 ಲೋಕಸಭಾ ಚುನಾವಣೆಯಲ್ಲಿ ಎಂದು ಬಿಜೆಪಿ ನೆನಪಿಸಿದೆ.
ಲೋಕಸಭಾ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಅವರ ಧೂರ್ತತನದ ಪತ್ರಿಕಾ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಅವರು ಮಹಾನ್ ಮುತ್ಸದ್ಧಿ ಅಟಲ್ ಬಿಹಾರಿ ವಾಜಪೇಯಿಯವರ 1999 – 2004 ರ ಅವಧಿಯ ಆಳ್ವಿಕೆಯನ್ನು ಅನುಭವಿಸಿದ ಜಿಲ್ಲಾ ಮತದಾರರು ವಾಜಪೇಯಿಯವರನ್ನು ಮತ್ತೂಮ್ಮೆ ಪ್ರಧಾನಿಯನ್ನಾಗಿ ಕಾಣುವುದಕ್ಕಾಗಿ 1994ರಿಂದ ರಾಜಕೀಯ ಅಜ್ಞಾತವಾಸದಲ್ಲಿದ್ದ ಕಾಂಗ್ರೆಸ್ ಮೂಲದ ಮಹಿಳಾ ರಾಜಕಾರಣಿಯೋರ್ವರನ್ನು ಬಿಜೆಪಿಯಿಂದ ಭರ್ಜರಿಯಾಗಿ ಗೆಲ್ಲಿಸುವ ಮೂಲಕ ತಂದೆಯನ್ನು ನೋಡಿ ಮಗನಿಗೆ ಹೆಣ್ಣು ಕೊಡುವ ಗಾದೆಗೆ ದೃಷ್ಠಾಂತವಾದರು ಎಂದು ಶಿರ್ವ ಬಿಜೆಪಿ ಶಕ್ತಿಕೇಂದ್ರದ ವ್ಯಾಪ್ತಿಯ ಕಾರ್ಯಕರ್ತರ ಸಭೆಯಲ್ಲಿ ವ್ಯಂಗ್ಯವಾಡಿದರು.
2004ರಲ್ಲಿ ಗೆದ್ದ ಉಡುಪಿ ಲೋಕಸಭಾ ಕ್ಷೇತ್ರದ ಸಂಸದರು ಜನ ಪ್ರತಿನಿಧಿಯೋರ್ವರ ನಿಷೀಯತೆಗೆ ಹೊಸ ವ್ಯಾಖ್ಯೆ ಬರೆದರಲ್ಲದೆ, ಮನಮೋಹನ್ ಸಿಂಗ್ ಸರಕಾರದ ವಿರುದ್ಧವಾಗಿ ಮತ ಚಲಾಯಿಸಿ ಯುಪಿಎ – 1 ಸರಕಾರವನ್ನು ಉಳಿಸುವಲ್ಲಿ ಕಾಂಗ್ರೆಸ್‌ನೊಂದಿಗೆ ಕೈ ಜೋಡಿಸಿದ್ದರು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಮುಖಂಡರಾದ ಗಿರಿಧರ ಪ್ರಭು, ರಾಜೇಶ್ ನಾಯ್ಕ, ಸುಂದರ ಪ್ರಭು, ಮತ್ತಿತರರು ಸಭೆಯನ್ನುದ್ದೇಶಿಸಿ ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
MUST WATCH
ಹೊಸ ಸೇರ್ಪಡೆ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.