ಸೌಹಾರ್ದದಿಂದ ಭವ್ಯ ರಾಮಮಂದಿರ ನಿರ್ಮಾಣ
Team Udayavani, Dec 7, 2017, 8:50 AM IST
ಉಡುಪಿ: ಸಂಘರ್ಷದ ಬದಲಾಗಿ ಶಾಂತಿ – ಸೌಹಾರ್ದದಿಂದ ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣವಾಗಲಿದೆ ಎಂದು ರಾಮಮಂದಿರ ನಿರ್ಮಾಣ ಕುರಿತು ಸಂಧಾನಕಾರ ಶ್ರೀ ರವಿಶಂಕರ್ ಗುರೂಜಿ ಹೇಳಿದ್ದಾರೆ.
ಬುಧವಾರ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅನಂತರ ಪೇಜಾವರ ಶ್ರೀಗಳೊಂದಿಗೆ ಮಾತುಕತೆ ನಡೆಸಿದ ಬಳಿಕ ಅವರು ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.
ಸಹಮತದ ಆಶಯ
ಎರಡು ಸಮುದಾಯಗಳ ಮೈತ್ರಿಯ ಪ್ರತೀಕವಾಗಿ ಮಂದಿರ ನಿರ್ಮಾಣವಾಗಲಿದೆ. ಸಂಧಾನಕಾರರಾಗಿ ನಾನು ಮುಸ್ಲಿಂ ಬಾಂಧವರು ಸೇರಿದಂತೆ ಯಾರೊಂದಿಗೆಲ್ಲ ಮಾತುಕತೆ ನಡೆಸಿದ್ದೇನೆಯೋ ಅವರೆಲ್ಲರೂ ಸಹಮತ ವ್ಯಕ್ತ ಪಡಿಸಿದ್ದಾರೆ. ಯಾರೂ ವಿರೋಧ ಸೂಚಿಸಿಲ್ಲ. ಸೌಹಾರ್ದಯುತವಾಗಿಯೇ ಮಂದಿರ ನಿರ್ಮಿಸುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ ಎಂದು ಅವರು ತಿಳಿಸಿದರು.
“ಧರ್ಮಸಂಸದ್’ ನಿರ್ಣಯದ ಕುರಿತಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ರವಿಶಂಕರ್ ಗುರೂಜಿ ಅವರು, “ಸಂತರು ಮತ್ತು ಆರ್‌ಎಸ್‌ಎಸ್‌ನವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಸ್ವತಂತ್ರರು. ಪೇಜಾವರ ಶ್ರೀಗಳು ಕೂಡ ಸೌಹಾರ್ದದ ಮಾತುಗಳನ್ನೇ ಆಡಿದ್ದಾರೆ’ ಎಂದು ಹೇಳಿದರು.
ಭಿನ್ನಾಭಿಪ್ರಾಯವಿಲ್ಲ
ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಮಾತನಾಡಿ, “ರಾಮ ಮಂದಿರ ನಿರ್ಮಾಣ ಕುರಿತಾಗಿ ಭಿನ್ನಾಭಿ ಪ್ರಾಯವಿಲ್ಲ. ನಂಬಿಕೆಯನ್ನು ಅಲುಗಾಡಿಸುವ ಪ್ರಯತ್ನ ಫಲ ನೀಡುವುದಿಲ್ಲ. 1992ರಲ್ಲಿ ಬಾಬರಿ ಮಸೀದಿ ಕಟ್ಟಡದ ಮೇಲೆ ಹಾನಿ ಮಾಡುವ ಕುರಿತು ಸರ್ವೋಚ್ಚ ಸಮಿತಿ ಸಭೆಯಲ್ಲಿ ತೀರ್ಮಾನ ವಾಗಿರಲಿಲ್ಲ. ಶಾಂತಿ ಯುತ ವಾಗಿ, ಸಾಂಕೇತಿಕವಾಗಿ ರಾಮ ಮಂದಿರ ಸ್ಥಳದಲ್ಲಿ ಕರಸೇವೆ ಮಾಡಲು ತೀರ್ಮಾನ ವಾಗಿತ್ತು. ಆದರೆ ಅಲ್ಲಿ ಕಲ್ಲು ತೂರಾಟ ನಡೆಯಿತು. ನಾವು ಪ್ರಚೋ ದನೆ ನೀಡಿರಲಿಲ್ಲ. ಬದಲಾಗಿ ಕಲ್ಲು ತೂರಾಟ ಮಾಡು ವವರನ್ನು ತಡೆ ಯಲು ಪ್ರಾಮಾಣಿಕವಾಗಿ ಪ್ರಯತ್ನಿ ಸಿದ್ದೆವು’ ಎಂದು ನುಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕರಾವಳಿಯಲ್ಲಿ ಕಾಶ್ಮೀರಿ ಕೇಸರಿ ಬೆಳೆದ ಟೆಕ್ಕಿಗಳು; ಹೊಸ ಪ್ರಯೋಗದಲ್ಲಿ ಮೊದಲ ಯಶಸ್ಸು !
Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ
ಆನ್‌ಲೈನ್‌ನಲ್ಲಿ ಅಧಿಕ ಲಾಭಾಂಶದ ಆಮಿಷ: ಬ್ಯಾಂಕ್ ಮ್ಯಾನೇಜರ್‌ಗೆ ಲಕ್ಷಾಂತರ ರೂ. ವಂಚನೆ
Udupi: ಹೂಡೆ ಬೀಚ್‌ನಲ್ಲಿ ಪ್ರವಾಸಿಗರ ಮೇಲೆ ಸ್ಥಳೀಯರಿಂದ ಹಲ್ಲೆ
Hiriydaka: ಒಟಿಪಿ ನೀಡಿ 5 ಲಕ್ಷ ರೂ. ಕಳೆದುಕೊಂಡ ಯುವತಿ
MUST WATCH
ಹೊಸ ಸೇರ್ಪಡೆ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Super App: ರೈಲು ಬುಕಿಂಗ್, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.