ಕಾಪು ಸುಗ್ಗಿ ಮಾರಿಪೂಜೆ ಸಂಪನ್ನ


Team Udayavani, Mar 23, 2017, 12:43 PM IST

mari-pooja.jpg

ಕಾಪು: ಕಾಪು ಶ್ರೀ ಹಳೇ ಮಾರಿಗುಡಿ ದೇವಸ್ಥಾನ, ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಮತ್ತು ಕಾಪು ಶ್ರೀ ಮೂರನೇ ಮಾರಿಗುಡಿ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ಪ್ರಾರಂಭಗೊಂಡಿದ್ದ ಕಾಲಾವಧಿ ಸುಗ್ಗಿ ಮಾರಿಪೂಜೆಯು ಬುಧವಾರ ಸಂಜೆ ಸಂಪನ್ನಗೊಂಡಿತು.

ಕಾಪುವಿನ ಮೂರು ಮಾರಿಗುಡಿಗಳಲ್ಲಿ ಏಕಕಾಲಕ್ಕೆ ಜರಗಿದ ಸುಗ್ಗಿ ಮಾರಿಪೂಜೆಯಲ್ಲಿ ಎರಡೂವರೆ ಲಕ್ಷಕ್ಕೂ ಅಧಿಕ ಸಂಖ್ಯೆಯ ಭಕ್ತರು ಭಾಗವಹಿಸಿ ಮಾರಿಯಮ್ಮ ದೇವಿಯ ದರ್ಶನ ಪಡೆದರು. ಮತ್ತು ವಿವಿಧ ಹರಕೆ, ಸೇವೆಗಳನ್ನು ಸಮರ್ಪಿಸಿದರು.

50,000ಕ್ಕೂ ಅಧಿಕ ಗದ್ದಿಗೆ  ಪೂಜೆ ಸೇವೆ
ಗದ್ದಿಗೆಯೇ ಪ್ರಧಾನವಾಗಿರುವ ಕಾಪುವಿನ ಮಾರಿಗುಡಿಗಳಲ್ಲಿ ಸುಗ್ಗಿ ಮಾರಿಪೂಜೆಯ ಸಂದರ್ಭ 50,000ಕ್ಕೂ ಹೆಚ್ಚು ಗದ್ದಿಗೆ ಪೂಜೆ ಸೇವೆ, 20,000ಕ್ಕೂ ಹೆಚ್ಚು ಕುಂಕುಮಾರ್ಚನೆ ಮತ್ತು 20,000ಕ್ಕೂ ಹೆಚ್ಚು ಹೂವಿನ ಪೂಜೆ ಸೇವೆಯನ್ನು ಸಮರ್ಪಿಸಿದರು.

ಎರಡೂವರೆ ಲಕ್ಷ  ಕೋಳಿ, 700 ಕುರಿ-ಆಡು ಮಾರಾಟ
ಸುಗ್ಗಿ ಮಾರಿಪೂಜೆಯ ಪ್ರಯುಕ್ತ ಕುರಿ, ಆಡು ಮತ್ತು ಕೋಳಿಗಳನ್ನು ಮಾರಾಟ ಮಾಡಲು ಮತ್ತು ರಕ್ತಾಹಾರ ನೀಡಲು ಪ್ರತ್ಯೇಕ ಸ್ಥಳವನ್ನು ನಿಗದಿಪಡಿಸಲಾಗಿತ್ತು. ದಾಖಲೆ ಸಂಖ್ಯೆಧಿಯಲ್ಲಿ 700ಕ್ಕೂ ಅಧಿಕ ಕುರಿ-ಆಡುಗಳು ಮತ್ತು ಎರಡೂವರೆ ಲಕ್ಷಕ್ಕೂ ಅಧಿಕ ಕೋಳಿಗಳು ಮಾರಾಟಗೊಂಡಿವೆ ಎಂದು ಮೂಲಗಳು ತಿಳಿಸಿವೆ.

ಸುಗ್ಗಿ ಮಾರಿಪೂಜೆಯು ತುಳುನಾಡಿನ ಪ್ರಮುಖ ಏಳು ಜಾತ್ರೆಗಳಲ್ಲಿ ಒಂದು ಎಂಬ ಪ್ರಸಿದ್ಧಿ ಪಡೆದಿದ್ದು, ಈ ಬಾರಿಯ ಸುಗ್ಗಿ ಮಾರಿಪೂಜೆಯ ಸಂದರ್ಭ 8 ಕೋ.ರೂ.ಗಳಷ್ಟು ಹಣಕಾಸಿನ ವ್ಯವಹಾರ ನಡೆದಿದೆ ಎಂದು ಅಂದಾಜಿಸಲಾಗಿದೆ.  ಮಾರಿಗುಡಿಗಳಲ್ಲಿ ಹರಕೆ – ಸೇವೆ ಸಲ್ಲಿಕೆ, ಹಣ್ಣುಕಾಯಿ – ಹೂ ಮಾರಾಟ, ವಿವಿಧ ಸೊತ್ತುಗಳ ಮಾರಾಟ, ಕುರಿ – ಆಡು ಮತ್ತು ಕೋಳಿಗಳ ಮಾರಾಟದಿಂದಾಗಿ ಭಾರೀ ಆರ್ಥಿಕ ವ್ಯವಹಾರ ಸಂಚಯನವಾಗಿದೆ.

ಬಿಗಿ ಬಂದೋಬಸ್ತ್
ಈ ಬಾರಿಯ ಸುಗ್ಗಿ ಮಾರಿಪೂಜೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಸಿಸಿ ಕೆಮರಾ ಸಹಿತವಾಗಿ ಬಿಗು ಪೊಲೀಸ್‌ ಬಂದೋಬಸ್ತ್ ಕಲ್ಪಿಸಲಾಗಿದ್ದು, ಭಕ್ತರು ಆತಂಕರಹಿತರಾಗಿ ದೇವರ ದರ್ಶನ ಮಾಡುವಂತಾಯಿತು.

ಗಮನ ಸೆಳೆದ ಸ್ವತ್ಛತಾ ವ್ಯವಸ್ಥೆ
ಕಾಪು ಸುಗ್ಗಿ ಮಾರಿಪೂಜೆಯ ಸಂದರ್ಭದಲ್ಲಿ ಪುರಸಭೆಯ ಮುಖ್ಯಾಧಿಕಾರಿ ರಾಯಪ್ಪ ಅವರ ನೇತೃತ್ವದಲ್ಲಿ  ಸ್ವತ್ಛತೆ ಕಾಪಾಡಲು ವಿಶೇಷ ವ್ಯವಸ್ಥೆ  ಕಲ್ಪಿಸಲಾಗಿದ್ದು, ಇದರಲ್ಲಿ ಯಶಸ್ವಿಯೂ ಆಗಿದ್ದಾರೆ. ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಅಲ್ಲಲ್ಲಿ ಫಲಕಗಳನ್ನು ಅಳವಡಿಸಲಾಗಿದ್ದು, ಜತೆಗೆ 50ಕ್ಕೂ ಅಧಿಕ ಕಸದ ಡ್ರಮ್‌ಗಳನ್ನೂ ಇರಿಸಲಾಗಿತ್ತು. ಪುರಸಭೆಯ ಮುಖ್ಯಾಧಿಕಾರಿ ರಾಯಪ್ಪ ಅವರ ಈ ಕ್ರಮಕ್ಕೆ ಸಾರ್ವಜನಿಕರಿಂದ ಮತ್ತು ವ್ಯಾಪಾರಸ್ಥರಿಂದ ಶ್ಲಾಘನೆ ವ್ಯಕ್ತವಾಗಿದೆ.

ಟಾಪ್ ನ್ಯೂಸ್

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

3(2

Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ

9-kishor

BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್‌ ರಾಯಭಾರಿ

2

Uppinangady: ನೇಜಿಕಾರ್‌ ಅಕ್ಷರ ಕರಾವಳಿ ಕಟ್ಟಡ ಇನ್ನು ನೆನಪಷ್ಟೆ

8-ather

EV ದ್ವಿಚಕ್ರ ವಾಹನ ಮಾರಾಟ: ಏಥರ್‌ ಸಂಸ್ಥೆ ಪಾಲು ಶೇ.25

1(1

Sullia: ಮುಳುಗಿದ ಅಂಗನವಾಡಿಗೆ ಹೊಸ ಜಾಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.