ಕರಂದ್ಲಾಜೆ ಸಾಧನೆಗಳ ಬಗ್ಗೆ ಮಾತನಾಡುವ ನೈತಿಕ ಹಕ್ಕು ಪ್ರಮೋದ್‌ಗಿಲ್ಲ: ಬಿಜೆಪಿ


Team Udayavani, Mar 29, 2019, 6:31 AM IST

BJP-meeting

ಉಡುಪಿ: ಸಂಸದೆ ಶೋಭಾ ಕರಂದ್ಲಾಜೆಯವರು ಇಡೀ ರಾಜ್ಯ ಹೆಮ್ಮೆ ಪಡುವಂತಹಭಿವೃದ್ಧಿ ಕಾರ್ಯಕ್ರಮಗಳನ್ನು ಕ್ಷೇತ್ರದಲ್ಲಿ ಅನುಷ್ಠಾನಕ್ಕೆ ತಂದಿದ್ದಾರೆ. ಅವರು ತಂದ ಅನುದಾನಗಳಿಗೆ ದಾಖಲೆಗಳಿವೆ. ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಂತೆ 2 ಸಾವಿರ ಚಿಲ್ಲರೆ ಕೋ.ರೂ.ಅನುದಾನಗಳನ್ನು ಕ್ಷೇತ್ರಕ್ಕೆ ತಂದಿದ್ದೇನೆಂದು ಸುಳ್ಳು ಹೇಳಿಲ್ಲ. ಬ್ಯಾನರ್‌, ಫ್ಲೆಕ್ಸ್‌ ಹಾಕಿಕೊಂಡು ಪ್ರಚಾರ ಮಾಡಿಕೊಂಡಿಲ್ಲ. ಭ್ರಷ್ಟಾಚಾರ ನಡೆಸಿಲ್ಲ, ಭ್ರಷ್ಟಚಾರಿಗಳನ್ನೂ ಪೋಷಿಸಿಲ್ಲ ಎಂದು ನಗರ ಬಿಜೆಪಿ ಅಧ್ಯಕ್ಷ ಪ್ರಭಾಕರ ಪೂಜಾರಿ ಲೇವಡಿ ಮಾಡಿದರು.

ನಗರ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕರಂದ್ಲಾಜೆಯವರು ಒಂದು ಸಂಸದೀಯ ಅವಧಿಯಲ್ಲಿ ಕ್ಷೇತ್ರಕ್ಕೆ ಹಲವಾರು ಪ್ರಥಮಗಳ ಯೋಜನೆಗಳನ್ನು ಪರಿಚಯಿಸಿದ್ದು, ರಾಜ್ಯ ವಲಯದಲ್ಲಿಯೇ ವಿಶೇಷವಾಗಿ ಶ್ಲಾಘನೆಗೊಳಪಟ್ಟಿದೆ. ಸಂಸತ್‌ನಲ್ಲಿ ಅವರ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತವಾಗಿದ್ದು, ವಿಶ್ಲೇಷಣೆಯೊಂದರಲ್ಲಿ 53 ಮಹಿಳಾ ಸಂಸದರ ಪೈಕಿ ಪ್ರಪ್ರಥಮ ಸಾಧಕರಾಗಿ ಅವರು ನಿಲ್ಲುತ್ತಾರೆ. ಅವರು ಇದನ್ನು ಎಲ್ಲೂ ಪ್ರಚಾರ ಮಾಡಿಲ್ಲ. ಅವರ ಸಾಧನೆ ಬಗ್ಗೆ ಮಾತನಾಡುವ ನೈತಿಕ ಹಕ್ಕು ಪ್ರಮೋದರಿಗಿಲ್ಲ ಎಂದು ಹೇಳಿದರು.

ಕಾರ್ಯಕರ್ತರ ಮೇಲೆ ಉಕ್ಕಿದ ಪ್ರೇಮ
ಪ್ರಮೋದ್‌ ಅವರಿಗೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ ಬಳಿಕ ಕಾರ್ಯಕರ್ತರನ್ನು ಕಡೆಗಣಿಸಿ ಸೋತೆನೆಂದು ಮತ್ತೆ ಕಾರ್ಯಕರ್ತರನ್ನು ಓಲೈಸಲು ಆರಂಭಿಸಿದ್ದಾರೆ. ಅಂದು ಸೋತಾಗ ಉಲ್ಲೇಖವಾಗದ ಕಾರ್ಯಕರ್ತರ ಮೇಲಿನ ಪ್ರೇಮ ಇದ್ದಕಿದ್ದಂತೆ ಅವರಿಗೆ ಈಗ ಏಕೆ ಉಕ್ಕಿ ಹರಿಯುತ್ತಿದೆ ಎಂದು ಪ್ರಭಾಕರ ಪೂಜಾರಿ ಪ್ರಶ್ನಿಸಿದರು.

ಬಿಜೆಪಿ ಬಾಗಿಲಲ್ಲಿ ನಿಂತವರು
ಅಧಿಕಾರದಾಹದಿಂದ ಯಾವುದೇ ಪಕ್ಷವಾದರೂ ಸರಿಯೇ ಎನ್ನುವ ಮನೋಭಾವ ಹೊಂದಿರುವ ಪ್ರಮೋದ್‌ ಅಂತಿಮ ಕ್ಷಣದವರೆಗೂ ಬಿಜೆಪಿ ಬಾಗಿಲಲ್ಲಿ ನಿಂತು, ಅಲ್ಲಿ ಪ್ರವೇಶ ದೊರಕದಿದ್ದಾಗ ಕೊನೆಯ ಕ್ಷಣದಲ್ಲಿ ಜೆಡಿಎಸ್‌ಗೆ ಸೇರಿ ಈಗ ಎರಡೂ ಪಕ್ಷವನ್ನು ನಿರ್ನಾಮಗೊಳಿಸಲು ಪೀಠಿಕೆ ಹಾಕಿದ್ದಾರೆ ಎಂದರು.

ಪಂ.ಗಳಿಗೆ ಹೇರಳ ಅನುದಾನ
ಶೋಭಾ ಕರಂದ್ಲಾಜೆಯವರು ಸಂಸದೆಯಾಗಿ ಜಿ.ಪಂ., ತಾ.ಪಂ., ಗ್ರಾ.ಪಂ.ಗಳಿಗೆ ಹೇರಳ ಅನುದಾನಗಳನ್ನು ತಂದಿದ್ದು, ಈ ಅವಧಿಯಲ್ಲಿ ದಾಖಲೆ ಪ್ರಮಾಣದಲ್ಲಿ ಸಂಸದರ ನಿಧಿ ಬಳಕೆಯಾಗಿದೆ. ಯಾವುದೇ ಪಂ. ಸದಸ್ಯನ ಅರ್ಜಿ ತಿರಸ್ಕೃತಗೊಂಡ ದಾಖಲೆಗಳಿಲ್ಲ. ಇದು ಸಂಸದೆಯವರ ಕಾರ್ಯತತ್ಪರತೆ, ಜನಪರ ಕಾಳಜಿಯನ್ನು ಸೂಚಿಸುತ್ತದೆ ಎಂದು ಜಿ.ಪಂ. ಅಧ್ಯಕ್ಷ ದಿನಕರ ಬಾಬು ಹೇಳಿದರು. ನಗರ ಬಿಜೆಪಿ ಮಾಜಿ ಅಧ್ಯಕ್ಷ ರಾಘವೇಂದ್ರ ಕಿಣಿ, ಉಪಾಧ್ಯಕ್ಷ ಟಿ.ಜಿ. ಹೆಗ್ಡೆ, ಸತೀಶ್‌ ಶೆಟ್ಟಿ, ನಗರಸಭಾ ಸದಸ್ಯ ಗಿರಿಧರ ಆಚಾರ್ಯ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

kejriwal-2

Distribution of money ಆರೋಪ: ಬಿಜೆಪಿ ಅಭ್ಯರ್ಥಿ ಸ್ಪರ್ಧೆ ನಿರ್ಬಂಧಕ್ಕೆ ಕೇಜ್ರಿ ಮನವಿ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನKaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

robbers

Pakistan; ಡಕಾಯಿತರಿಂದ 3 ಹಿಂದೂ ಯುವಕರ ಅಪಹರಣ

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

naksal (2)

ಸುಕ್ಮಾ ಎನ್‌ಕೌಂಟರ್‌: ಮೂವರು ನಕ್ಸಲರ ಹ*ತ್ಯೆ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.