ಒತ್ತಿನೆಣೆ ಗುಡ್ಡ ಕುಸಿತ ಐದು ತಾಸಿಗೂ ಅಧಿಕ ಹೆದ್ದಾರಿ ಬಂದ್
Team Udayavani, Jun 8, 2017, 1:49 PM IST
ಬೈಂದೂರು: ಬೈಂದೂರು ಸಮೀಪದ ಒತ್ತಿನೆಣೆಯಲ್ಲಿ ಬುಧವಾರ ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ ಮೇಲೆ ಗುಡ್ಡ ಕುಸಿದ ಪರಿಣಾಮ ಐದು ಗಂಟೆಗೂ ಅಧಿಕ ಕಾಲ ರಸ್ತೆ ತಡೆ ಉಂಟಾಗಿ ಸಂಚಾರ ಸ್ಥಗಿತವಾಯಿತು.
ರಸ್ತೆ ನಿರ್ಮಾಣದ ಉದ್ದೇಶದಿಂದ ಒತ್ತಿನೆಣೆ ಗುಡ್ಡದಲ್ಲಿ ಭಾರೀ ಪ್ರಮಾಣದ ಕಣಿವೆ ನಿರ್ಮಿಸಲಾಗಿದೆ. ಈ ಭಾಗದಲ್ಲಿ ನೀರಿನ ಒರತೆ ಅಧಿಕವಾಗಿರುವ ಜತೆಗೆ ಜೇಡಿ ಮಣ್ಣಿನಿಂದಾವೃತವಾಗಿದೆ. ಮಳೆಗಾಲ ಪ್ರಾರಂಭವಾಗುತ್ತಿದ್ದಂತೆ ಗುಡ್ಡದ ಒಂದೊಂದೇ ಭಾಗಗಳು ಕುಸಿಯಲಾರಂಭಿಸಿವೆ.
ಬುಧವಾರ ಮುಂಜಾನೆ ವೇಳೆ ಹೆದ್ದಾರಿ ಬದಿಯಿಂದ ಗುಡ್ಡ ಕುಸಿದು ಬಿದ್ದು ರಸ್ತೆ ಸಂಪೂರ್ಣ ಮಣ್ಣಿನಿಂದಾವೃತವಾಯಿತು. ಬಳಿಕ ಬದಲಿ ರಸ್ತೆ ನಿರ್ಮಾಣ ಮಾಡಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.
ತಪ್ಪಿದ ಭಾರೀ ಅನಾಹುತ
ಒತ್ತಿನೆಣೆ ಗುಡ್ಡ ಕುಸಿಯುವ ಸಾಧ್ಯತೆ ಕುರಿತು ಆರಕ್ಷಕ ಇಲಾಖೆ ಈ ಹಿಂದೆಯೇ ಜಿಲ್ಲಾಡಳಿತಕ್ಕೆ ವರದಿ ನೀಡಿತ್ತು. ಗುಡ್ಡ ಜರಿಯುವ ಸಾಧ್ಯತೆ ಬಗ್ಗೆ ಸ್ಥಳೀಯರೂ ಭೀತಿ ವ್ಯಕ್ತಪಡಿಸಿದ್ದರು. ಆದರೆ ಕಾಮಗಾರಿ ನಿರ್ವಹಿಸುವ ಐಆರ್‌ಬಿ ಕಂಪೆನಿಯು ಸಾರ್ವಜನಿಕರಿಗೆ ತೊಂದರೆಯಾಗದಂತೆ ಕೆಲಸ ಮುಂದುವರಿಸುತ್ತೇವೆ ಎಂದು ಭರವಸೆ ನೀಡಿತ್ತು. ಘಟನೆ ಸಂದರ್ಭ ಯಾವುದೇ ವಾಹದ ಸಂಚಾರ ಇಲ್ಲದ್ದರಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.
ಅಪಾಯಕಾರಿ ಪರ್ಯಾಯ ರಸ್ತೆ
ಇದೀಗ ಬದಲಿ ರಸ್ತೆ ನಿರ್ಮಿಸಿರುವ ಭಾಗದಲ್ಲಿ ನೀರಿನ ಹರಿವು ಅಧಿಕವಾಗಿರುವ ಕಾರಣ ರಸ್ತೆಯ ಒಳಭಾಗ ಕೊಚ್ಚಿ ಹೋಗಿದ್ದು ರಸ್ತೆ ಕುಸಿದು ಹೋಗುವ ಅಪಾಯವಿದೆ. ಸಾರ್ವಜನಿಕರು ಆಡಳಿತ ವ್ಯವಸ್ಥೆ ವಿರುದ್ಧ ರಸ್ತೆತಡೆ ನಡೆಸಿದರೆ ಇಲಾಖೆ ಕಾನೂನು ಕ್ರಮ ಕೈಗೊಳ್ಳುತ್ತದೆ. ಆದರೆ ಹೆದ್ದಾರಿ ಕಾಮಗಾರಿ ನಿರತ ಐ.ಆರ್.ಬಿ.ಕಂಪೆನಿ ನಿಯಮ ಗಾಳಿಗೆ ತೂರಿದೆ ಎಂದು ಸಾರ್ವ ಜನಿಕರು ಆರೋಪಿಸಿದ್ದಾರೆ.
ಎಸಿ ಭೇಟಿ
ಸ್ಥಳಕ್ಕೆ ಭೇಟಿ ನೀಡಿರುವ ಉಪವಿಭಾಗಾಧಿಕಾರಿ ಶಿಲ್ಪಾನಾಗ್ ಅವರು ಘಟನೆಯ ಕುರಿತು ಪ್ರತಿಕ್ರಿಯಿಸಿ,ಸಾರ್ವಜನಿಕರಿಗೆ ತೊಂದರೆ ಹಾಗೂ ನಿರ್ಲಕ್ಷ é ಆರೋಪದಡಿಯಲ್ಲಿ ಕಂಪೆನಿ ವಿರುದ್ಧª ಪ್ರಕರಣ ದಾಖಲಿಸಲಾಗುತ್ತದೆ ಎಂದರು. ಮುಂದಿನ ದಿನಗಳಲ್ಲಿ ಬದಲಿ ಮಾರ್ಗವಾದ ಮಧ್ದೋಡಿ- ದೊಂಬೆ ಮಾರ್ಗವನ್ನು ಸಿದ್ಧಪಡಿಸಿ ಇಟ್ಟುಕೊಳ್ಳುವಂತೆ ಶಿಲ್ಪಾ ನಾಗ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Waqf Report: ಅಮಿತ್ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್ ರಿಜಿಜು ಮೂಲಕ ಸಲ್ಲಿಕೆ
Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ
ಮಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ
Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ
Train; ಗೋಮಟೇಶ್ವರ ಎಕ್ಸ್‌ಪ್ರೆಸ್ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.