ಎಲ್ಲ ಅಕ್ರಮ ಕಟ್ಟಡಗಳ ತೆರವಿಗೆ ಸಾರ್ವಜನಿಕರ ಆಗ್ರಹ


Team Udayavani, Feb 22, 2017, 4:43 PM IST

2102kota1e.jpg

ಕೋಟ: ಸಾಸ್ತಾನದ ಗುಂಡ್ಮಿ ಟೋಲ್‌ಗೇಟ್‌ ಸಮೀಪ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಸಂದರ್ಭದಲ್ಲಿ ವಶಕ್ಕೆ ಪಡೆಯಲಾದ ಜಾಗದಲ್ಲಿ ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ಮೂರು ಗೂಡಂಗಡಿಗಳನ್ನು ಕುಂದಾಪುರ ಸಹಾಯಕ ಕಮಿಷನರ್‌ ಅವರ ಆದೇಶದ ಮೇರೆಗೆ, ಬ್ರಹ್ಮಾವರ ವಿಶೇಷ ತಹಶೀಲ್ದಾರರ ಉಪಸ್ಥಿತಿಯಲ್ಲಿ  ಫೆ. 21ರಂದು ತೆರವುಗೊಳಿಸಲಾಯಿತು.

ಇಲ್ಲಿನ ಸ್ಥಳೀಯ ನಿವಾಸಿಗಳಾದ ಗೋಪಾಲ  ಶ್ರೀಯಾನ್‌, ಸೋಮಶೇಖರ,   ಮಾಲಿಂಗ ಅವರು ಹತ್ತಾರು ವರ್ಷಗಳಿಂದ ಈ ಜಾಗದಲ್ಲಿ ಗೂಡಂಗಡಿ ನಡೆಸುತ್ತಿದ್ದು, ಪ್ರಸ್ತುತ ಈ ಸ್ಥಳ ರಾಷ್ಟ್ರೀಯ ಹೆದ್ದಾರಿಗೆ ಸೇರಿದೆ ಹಾಗೂ ಜಾಗದ ನಿಜವಾದ ಮಾಲಕರಿಗೆ ಪರಿಹಾರಧನ ನೀಡಲಾಗಿದೆ. ಆದ್ದರಿಂದ ಜಾಗದ ಮಾಲಕರು ಕುಂದಾಪುರ ಸಹಾಯಕ ಕಮಿಷನರ್‌ ಅವರಿಗೆ ಸಲ್ಲಿಸಿದ ಮನವಿಯ ಮೇರೆಗೆ  ಅಕ್ರಮ ಅಂಗಡಿಗಳನ್ನು ತೆರವುಗೊಳಿಸುವಂತೆ ಕುಂದಾಪುರ ಸಹಾಯಕ ಕಮಿಷನರ್‌ ಅವರು ಕಂದಾಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಅನಂತರ ಎರಡು ಬಾರಿ ಸಂಬಂಧಪಟ್ಟ ಅಂಗಡಿ ಮಾಲಕರಿಗೆ ಈ ಕುರಿತು ಸೂಚನೆ ನೀಡಲಾಗಿತ್ತು. ಆದರೆ ಇದುವರೆಗೆ ಅಂಗಡಿಗಳನ್ನು ತೆರವುಗೊಳಿಸದ ಕಾರಣ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಬ್ರಹ್ಮಾವರ ವಿಶೇಷ ತಹಶೀಲ್ದಾರ ಪ್ರದೀಪ್‌ ಕುರುಡೇಕರ್‌ ಅವರು ಪತ್ರಿಕೆಗೆ ತಿಳಿಸಿದರು.

ಸೂಚನೆ ನೀಡಿಲ್ಲ  ಎಂದು 
ತೆರವಿಗೆ ಪ್ರತಿರೋಧ

ನಾನು ಹತ್ತಾರು ವರ್ಷಗಳಿಂದ ಇಲ್ಲಿ ವ್ಯವಹಾರ ನಡೆಸ್ತುತ್ತಿದ್ದೇನೆ ಹಾಗೂ ಸಾಲಿಗ್ರಾಮ ಪಟ್ಟಣ ಪಂಚಾಯತ್‌ನಿಂದ ಬೀದಿ ವ್ಯಾಪಾರಿ ಎನ್ನುವ ಕಾರ್ಡ್‌ ಕೂಡ ಪಡೆದಿದ್ದೇನೆ. ಇದುವರೆಗೆ ಅಂಗಡಿ ತೆರವುಗೊಳಿಸುವಂತೆ ನನಗೆ ಯಾವುದೇ ನೊಟೀಸು ನೀಡಿಲ್ಲ. ಈಗ ಏಕಾ-ಏಕಿ ಕ್ರಮಕ್ಕೆ  ಮುಂದಾಗಿರುವುದು ಅನ್ಯಾಯ, ಬಡಪಾಯಿಯಾದ ನನಗೆ ಇದರಿಂದ ಅನ್ಯಾಯವಾಗುತ್ತಿದೆ ಎಂದು ಅಂಗಡಿ ಮಾಲಕ ಗೋಪಾಲ ಶ್ರೀಯಾನ್‌ ತೆರವು ಸಂದರ್ಭ ಪ್ರತಿರೋಧ ವ್ಯಕ್ತಪಡಿಸಿದರು. ಆದರೆ ಅಕ್ರಮ ಕಟ್ಟಡಗಳ ತೆರವಿಗೆ ನೊಟೀಸು ನೀಡುವ ಕ್ರಮವಿಲ್ಲ, ಮೌಖೀಕವಾಗಿ ಹಲವು ಬಾರಿ ತಿಳಿಸಲಾಗಿದೆ ಎಂದು ವಿಶೇಷ ತಹಶೀಲ್ದಾರರು ತಿಳಿಸಿ ಅಂಗಡಿ ತೆರವು ನಡೆಸಿದರು. ಸಾಲಿಗ್ರಾಮ ಪಟ್ಟಣ ಪಂಚಾಯತ್‌ಸದಸ್ಯೆ ಸುಲತಾ ಹೆಗ್ಡೆ, ರಾಜು ಪೂಜಾರಿ, ದಿನೇಶ ಬಂಗೇರ, ಐರೋಡಿ ಗ್ರಾಮ ಪಂಚಾಯತ್‌ ಮಾಜಿ ಅಧ್ಯಕ್ಷ ವಿಟuಲ ಪೂಜಾರಿ  ಮುಂತಾದವರು ತೆರವು ಕಾರ್ಯದ ಕುರಿತು ತಹಶೀಲ್ದಾರರಿಂದ ಮಾಹಿತಿ ಪಡೆದರು.

ಕೋಟದ ಕಂದಾಯ ಅಧಿಕಾರಿ ಚಂದ್ರಹಾಸ್‌ ಬಂಗೇರ, ವಿ.ಎ. ಶರತ್‌ ಶೆಟ್ಟಿ, ಅವಿನಾಶ್‌, ಸರ್ವೆ ಅಧಿಕಾರಿ ಸತೀಶ್‌ ಹಾಗೂ ಕೋಟ ಪೊಲೀಸರು ಉಪಸ್ಥಿತರಿದ್ದರು.

ಎಲ್ಲರಿಗೂ ಒಂದೇ ಕಾನೂನು ಇರಲಿ
ರಾಷ್ಟ್ರೀಯ ಹೆದ್ದಾರಿಯ ಚತುಷ್ಪಥ ಸಂದರ್ಭ ಜಿಲ್ಲೆಯಲ್ಲಿ ಅನೇಕ ಸ್ಥಳವನ್ನು ಪರಿಹಾರ ನೀಡಿ ವಶಕ್ಕೆ ಪಡೆಯಲಾಗಿದೆ. ಆದರೆ ಚತುಷ್ಪಥ ಕಾಮಗಾರಿ ಪೂರ್ಣಗೊಂಡು ಹಲವು ತಿಂಗಳು ಕಳೆದರೂ  ವಶಪಡಿಸಿಕೊಂಡ ಜಾಗದಲ್ಲಿನ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸಲು ಸಂಬಂಧಪಟ್ಟ ಇಲಾಖೆ ಇದುವರೆಗೆ ಮುಂದಾಗಿಲ್ಲ. ಹೀಗಾಗಿ ಹಲವು ಕಡೆ ಸಾರ್ವಜನಿಕರಿಗೆ ಇದರಿಂದ ಸಮಸ್ಯೆಯಾಗುತ್ತಿದೆ. 

ದೊಡ್ಡ-ದೊಡ್ಡ ಕಟ್ಟಡಗಳ ಮೇಲೆ ಕ್ರಮಕೈಗೊಳ್ಳದೆ, ಸಾಸ್ತಾನದಲ್ಲಿ ಮೂರು ಮಂದಿ ಬಡ ಬೀದಿ ವ್ಯಾಪಾರಿಗಳನ್ನು ತೆರವುಗೊಳಿಸುತ್ತಿರುವುದು ಸರಿಯಲ್ಲ. ಸಹಾಯಕ ಕಮಿಷನರ್‌ ಅವರು ಕಾನೂನು ಪ್ರಕಾರವೇ ಈ ಕ್ರಮಕೈಗೊಂಡಿದಲ್ಲಿ  ಶೀಘ್ರ ಹೆದ್ದಾರಿ ಪಕ್ಕದಲ್ಲಿರುವ ಎಲ್ಲ ಅನಧಿಕೃತ ಕಟ್ಟಡಗಳನ್ನು ತೆರವಿಗೆ ಆದೇಶ ನೀಡಬೇಕು ಎಂದು ಸಾಲಿಗ್ರಾಮ ಪ.ಪಂ.ಸದಸ್ಯೆ ಸುಲತಾ ಹೆಗ್ಡೆ ಮತ್ತು ಐರೋಡಿ ಗ್ರಾ.ಪಂ. ಅಧ್ಯಕ್ಷ  ಮೊಸೆಸ್‌ ರೋಡಿಗ್ರಸ್‌ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

13

ಕಾಪು ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನೂತನ ಭಂಡಿ ರಥ, ರಜತ ಗರುಡ ವಾಹನ, ಶೇಷ ವಾಹನ ಸಮರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

accident

Udupi: ಬೈಕ್‌ ಢಿಕ್ಕಿ; ವ್ಯಕ್ತಿಗೆ ಗಾಯ; ಪ್ರಕರಣ ದಾಖಲು

2

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ

complaint

Udupi: ಕಾರ್ಮಿಕನ ಬೈಕ್‌ ಕಳ್ಳತನ; ಪ್ರಕರಣ ದಾಖಲು

sand

Karkala: ಪರವಾನಿಗೆ ಇಲ್ಲದೆ ಮರಳು ಲೂಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1

Kasaragod Crime News: ಅವಳಿ ಪಾಸ್‌ಪೋರ್ಟ್‌; ಕೇಸು ದಾಖಲು

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Australian Open:  ಹಿಂದೆ ಸರಿದ ಸಿಮೋನಾ ಹಾಲೆಪ್‌

Australian Open: ಹಿಂದೆ ಸರಿದ ಸಿಮೋನಾ ಹಾಲೆಪ್‌

5

Kasaragod: ಚಂದ್ರಗಿರಿ ಸೇತುವೆಯಿಂದ ಹೊಳೆಗೆ ಹಾರಿದ ಯುವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.