“ಗಾಂಧೀಜಿ ತಣ್ತೀಗಳನ್ನು ಜನರಿಗೆ ತಿಳಿಸುವ ಉದ್ದೇಶ’
ಕೊಲ್ಲೂರು, ಮೂದೂರು, ಮಾರಣಕಟ್ಟೆಯಲ್ಲಿ ಗಾಂಧಿ ಸಂಕಲ್ಪ ಪಾದಯಾತ್ರೆ
Team Udayavani, Oct 20, 2019, 5:54 AM IST
ಕೊಲ್ಲೂರು: ಮಹಾತ್ಮಾ ಗಾಂಧಿ ಜಯಂತಿಯ 150ನೇ ವರ್ಷದ ಅಂಗವಾಗಿ ಸ್ವದೇಶಿ, ಸ್ವರಾಜ್, ಸ್ವಾವಲಂಬಿ ಮತ್ತು ಸ್ವಚ್ಛ ಭಾರತ ಸಾಕಾರಕ್ಕಾಗಿ ಸಂಸದ ಬಿ.ವೈ. ರಾಘವೇಂದ್ರ ಅವರ ನೇತೃತ್ವದಲ್ಲಿ ಕೊಲ್ಲೂರು, ಜಡ್ಕಲ್-ಮೂದೂರು, ಮಾರಣಕಟ್ಟೆಯಲ್ಲಿ ಗಾಂಧಿ ಸಂಕಲ್ಪದ ಪಾದಯಾತ್ರೆ ನಡೆಯಿತು.
ಕೊಲ್ಲೂರು ದೇಗುಲದಿಂದ ಬಸ್ ನಿಲ್ದಾಣದ ವರೆಗೆ ಪಾದಯಾತ್ರೆ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸದರು, ಅಂತರಾತ್ಮ ಒಪ್ಪದ ಸುಖ, ಚಾರಿತ್ರ್ಯವಿಲ್ಲದ ಜ್ಞಾನ, ನೈತಿಕತೆ ಇಲ್ಲದ ವ್ಯಾಪಾರ, ಮನುಷ್ಯತ್ವ ಇಲ್ಲದ ಜೀವನ, ತ್ಯಾಗವಿಲ್ಲದ ಧರ್ಮ, ತಣ್ತೀಗಳಿಲ್ಲದ ರಾಜನೀತಿ ಇವುಗಳನ್ನು ಗಾಂಧಿ ಒಪ್ಪುತ್ತಿರಲಿಲ್ಲ. ಅವರ ತತ್ವವನ್ನು ಜನರಿಗೆ ತಿಳಿಸುವ ಉದ್ದೇಶದಿಂದ ಪಾದ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದರು.
ಪ್ರಾಮಾಣಿಕ ಪ್ರಯತ್ನ
ಸ್ವತ್ಛತೆಗೆ ಆದ್ಯತೆ ನೀಡುವುದರೊಡನೆ ಪರಿಸರ ನೈರ್ಮಲ್ಯದ ಬಗ್ಗೆ ಹೆಚ್ಚಿನ ಗಮನಹರಿಸಬೇಕು. ಪ್ಲಾಸ್ಟಿಕ್ ಮುಕ್ತ ಸಮಾಜ ನಿರ್ಮಾಣ ಮಾಡುವುದರೊಂದಿಗೆ ಬೈಂದೂರಿನ ಸಮಗ್ರ ಅಭಿವೃದ್ಧಿಗೆ ಪೂರಕ ವ್ಯವಸ್ಥೆ ಒದಗಿಸು ವಲ್ಲಿ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಅವರ ಸಹಕಾರ ದೊಡನೆ ಪ್ರಾಮಾಣಿಕ ವಾಗಿ ಶ್ರಮಿಸುತ್ತಿದ್ದೇನೆ ಎಂದರು.
ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ ಮಾತನಾಡಿ, ಮಹಾತ್ಮಾ ಗಾಂಧಿ ಅವರ ಜೀವನ ಚರಿತ್ರೆ ಆದರ್ಶಪ್ರಾಯ ಜೀವನಕ್ಕೆ ದಾರಿದೀಪ ಎಂದರು.
ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿ ಶ್ರಮಿಸುತ್ತಿದ್ದೇನೆ. ಎಲ್ಲ ವರ್ಗದವರ ಬೇಡಿಕೆ ಈಡೇರಿಸುವಲ್ಲಿ ಕಂಕಣಬದ್ಧ ನಾಗಿದ್ದೇನೆ. 250 ಕೋಟಿ ರೂ. ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಳ್ಳ ಲಾಗಿದ್ದು ಮುಂದಿನ ದಿನಗಳಲ್ಲಿ ರಸ್ತೆ, ಸಂಪರ್ಕ ಕುಡಿಯುವ ನೀರಿನ ವ್ಯವಸ್ಥೆಗೆ ಪ್ರಥಮ ಆದ್ಯತೆ ನೀಡಲಾಗುವುದು ಎಂದರು.
ಬೈಂದೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು, ಪ್ರಧಾನ ಕಾರ್ಯದರ್ಶಿ ದೀಪಕ್ ಕುಮಾರ್ ಶೆಟ್ಟಿ, ಬಾಲಚಂದ್ರ ಭಟ್, ಜಿ.ಪಂ. ಸದಸ್ಯರಾದ ಬಾಬು ಹೆಗ್ಡೆ, ಸುರೇಶ ಬಟ್ವಾಡಿ, ಶೋಭಾ ಪುತ್ರನ್, ತಾ.ಪಂ. ಸದಸ್ಯರು, ಮಹಿಳಾ ಮೋರ್ಚಾ ಅಧ್ಯಕ್ಷೆ ಪ್ರಿಯದರ್ಶಿನಿ ದೇವಾಡಿಗ, ಡಾ| ಅತುಲ್ ಕುಮಾರ್ ಶೆಟ್ಟಿ, ಜಡ್ಕಲ್ ಗ್ರಾ.ಪಂ. ಅಧ್ಯಕ್ಷ ಅನಂತ ಮೂರ್ತಿ, ತಾ.ಪಂ. ಅಧ್ಯಕ್ಷೆ ಶ್ಯಾಮಲಾ ಕುಂದರ್, ಸದಾಶಿವ ಪಡುವರಿ, ಶರತ್ ಕುಮಾರ್ ಶೆಟ್ಟಿ ಕಡೆR, ತಂಗಪ್ಪನ್, ಚಂದ್ರಯ್ಯ ಆಚಾರ್ ಕಳೀ, ಚಿತ್ತೂರು ಪಂಚಾಯತ್ ಅಧ್ಯಕ್ಷ ಸಂತೋಷ ಮಡಿವಾಳ, ಆಶೋಕ್ ಶೆಟ್ಟಿ ಹೆಮ್ಮಾಡಿ, ಇನ್ನಿತರ ಬಿಜೆಪಿ ಪ್ರಮುಖರು, ಕಾರ್ಯಕರ್ತರು, ವಿವಿಧ ಮೋರ್ಚಾ ಅಧ್ಯಕ್ಷರು ಪದಾ ಧಿಕಾರಿಗಳು ಉಪಸ್ಥಿತರಿದ್ದರು.
ಬಿಎಸ್ಸೆನ್ನೆಲ್ ಟವರ್ ಸಮಸ್ಯೆಗೆ ಶೀಘ್ರ ಪರಿಹಾರ
ಜಡ್ಕಲ್ ಗ್ರಾ.ಪಂ. ವ್ಯಾಪ್ತಿಯಲ್ಲಿ ನಡೆದ ಸಂಕಲ್ಪ ಯಾತ್ರೆಯಲ್ಲಿ ಸಂಸದ ಬಿ.ವೈ. ರಾಘವೇಂದ್ರ ಭಾಗವಹಿಸಿದರು. ಬಳಿಕ ಬ್ರಹ್ಮಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆದ ಸಭೆಯಲ್ಲಿ ಮಾತನಾಡಿ, ಬಿಎಸ್ಸೆನ್ನೆಲ್ ಟವರ್ ಸಮಸ್ಯೆಯನ್ನು ಶೀಘ್ರ ಬಗೆಹರಿಸಲಾಗುವುದು. ರಾಜ್ಯ ಸರಕಾರವು ಈ ಭಾಗದ ಜನರ ಬೇಡಿಕೆ ಈಡೇರಿಸುವುದರಲ್ಲಿ ಬದ್ಧವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.