ಕರಾವಳಿ ಜಿಲ್ಲೆಯಲ್ಲಿ ಮೊದಲ ಬಾರಿಗೆ ಕಳೆ ತೆಗೆಯುವ ಯಂತ್ರಗಳ ಸದ್ದು

Team Udayavani, Jul 10, 2018, 6:00 AM IST

0907tke1-1imp.jpg

ತೆಕ್ಕಟ್ಟೆ :  ಕರಾವಳಿ ಭಾಗದಲ್ಲಿ ಭಾಗಶಃ ನಾಟಿ ಕಾರ್ಯ ಪೂರ್ಣಗೊಂಡಿದ್ದು ಗ್ರಾಮೀಣ ಭಾಗದಲ್ಲಿ ಎದುರಾದ ಕೃಷಿ ಕೂಲಿಕಾರ್ಮಿಕರ ಸಮಸ್ಯೆಯಿಂದಾಗಿ ಮೊದಲ ಬಾರಿಗೆ ಮಾನವ ಶಕ್ತಿಯನ್ನು ಬಳಸದೆ ಯಾಂತ್ರಿಕೃತವಾಗಿ ಕಳೆ ತೆಗೆಯುವ ಯಂತ್ರಗಳು  ಕರಾವಳಿ ಜಿಲ್ಲೆಯಲ್ಲಿ ಸದ್ದು ಮಾಡುತ್ತಿವೆ.

ಗಂಟೆಗೆ 70 ಸೆಂಟ್ಸ್‌ ವಿಸ್ತೀರ್ಣದ ಕಳೆ ತೆಗೆಯುವುದು
ಈ ಕಳೆ ತೆಗೆಯುವ ಯಂತ್ರ ( ಪವರ್‌ ವೀಡರ್‌) ದ ಬೆಲೆ ರೂ.29 ಸಾವಿರ ಮೌಲ್ಯವನ್ನು ಹೊಂದಿದೆ. ಪೆಟ್ರೋಲ್‌ ಚಾಲಿತ ಪವರ್‌ ಮೆಶಿನ್‌ಗಳನ್ನು ಅಳವಡಿಸಲಾಗಿದ್ದು ಪ್ರತಿ ಗಂಟೆಗೆ ಸರಿ ಸುಮಾರು 70 ಸೆಂಟ್ಸ್‌ ವಿಸ್ತೀರ್ಣದ ಕೃಷಿ ಭೂಮಿಯಲ್ಲಿ ಬೆಳೆದಿರುವ ಕಳೆ ತೆಗೆಯ ಬಲ್ಲ ಸಾಮರ್ಥ್ಯವನ್ನು ಹೊಂದಿದೆ. ಸುಮಾರು 9 ಇಂಚು ಅಂತರದಲ್ಲಿ ಸಾಲು ನಾಟಿ ಅಥವಾ ಮುಂಗಾರು ಮಳೆಯ ಆಗಮನಕ್ಕೂ ಮುನ್ನ ಬೀಜ ಬಿತ್ತನೆ ಮಾಡಿರುವ ಕೃಷಿ ಭೂಮಿಗಳಲ್ಲಿ ಸಸಿಗಳ ನಡುವಿನ ಅಂತರದಲ್ಲಿ ಬೆಳೆದಿರುವ ಕಳೆ ಗಿಡಗಳ ಬೇರು ಸಹಿತ ತೆಗೆಯಬಲ್ಲದು .

ಗಂಟೆಗೆ ರೂ.400 ಬಾಡಿಗೆ
ಕರಾವಳಿಯ ಪರಿಸರದ ಹೊಯ್ಗೆ ಕೃಷಿ ಭೂಮಿಗೆ ಉಪಯುಕ್ತವಾಗುವ ರೀತಿಯಲ್ಲಿ ಈ ಪವರ್‌ ವೀಡರ್‌ನ್ನು ಆವಿಷ್ಕರಿಸಲಾಗಿದೆ. ಕೃಷಿ ಭೂಮಿಯ ವಾಸ್ತವ ಸ್ಥಿತಿಯನ್ನು ಅಧ್ಯಯನ ಮಾಡಿ ಅನಂತರ ಯಂತ್ರದ ವೇಗವನ್ನು ನಿರ್ಧರಿಸಿ ಕಳೆ ತೆಗೆಯಲಾಗುವುದು. ಮಾನವ ಶಕ್ತಿಯ ಬಳಕೆ ಕಡಿಮೆಯಾಗುವುದಾದರೂ ಕೂಡಾ ಯಂತ್ರಗಳ ಕಾರ್ಯನಿರ್ವಹಣೆಗೆ ಎರಡು ಮಂದಿ ಅನಿವಾರ್ಯತೆ ಇದೆ ಎನ್ನುವುದು ಭರತ್‌ ಗಾಣಿಗ ಬಾರಿಕೆರೆ ಅವರ ಅಭಿಪ್ರಾಯ.

ಕೃಷಿ ಚಟುವಟಿಕೆಗೆ ಮೂಲವಾಗಿ ಬೇಕಾಗುವ ಗೊಬ್ಬರ, ಸಸಿ(ಅಗೆ), ಉಳುವೆ ಯಂತ್ರ, ನಾಟಿ ಹಾಗೂ ಕಳೆ ತೆಗೆಯುವ ಕಾರ್ಯದ ಸಂಪೂರ್ಣ ಜವಾಬ್ದಾರಿಯನ್ನು ಬಾಡಿಗೆ ಆಧಾರದ ಮೇಲೆ ನಿರ್ವಹಿಸುತ್ತಾರೆ.
ಸಂಪರ್ಕ: ಕಾಳಿದಾಸ್‌ 9448657112

ಕೃಷಿಯಲ್ಲಿ ಹೊಸತನ 
ಕಾಲಕ್ಕೆ ತಕ್ಕಂತೆ ಕೃಷಿ ಪದ್ಧªತಿಯನ್ನು ಮುಂದು ವರಿಸಿಕೊಂಡು ಹೋಗಬೇಕಾದ ಅನಿವಾರ್ಯ ಇದೆ. ಪ್ರಸ್ತುತ ಸಾಲು ನಾಟಿ ಹಾಗೂ ಬಿತ್ತನೆ ಪದ್ಧತಿಯಿಂದಾಗಿ ಅಗೆ (ಸಸಿ) ತೆಳುವಾಗಿ ನೆಡುವುದರಿಂದ ಇಳುವರಿ ಹೆಚ್ಚಾಗುತ್ತಿದೆ. ಆವಿಷ್ಕೃತಗೊಂಡಿರುವ ಈ ಪವರ್‌ ವೀಡರ್‌ ಬೆಲೆ ದುಬಾರಿಯಾಗಿರುವುದರಿಂದ ಗ್ರಾಮೀಣ ರೈತರು ಈ ಯಂತ್ರವನ್ನು ಖರೀದಿಸುವುದು ಕಷ್ಟ ಸಾಧ್ಯ.
– ರಾಮಚಂದ್ರ ಭಟ್‌ ಶಾನಾಡಿ , 
ಹಿರಿಯ ಸಾವಯವ ಕೃಷಿಕರು

35 ಮಂದಿ ತಂಡ
ಕಳೆದ ಎಂಟು ವರ್ಷಗಳಿಂದಲೂ  ಯಾಂತ್ರಿಕ ಕೃಷಿ ಚಟುವಟಿಕೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದು, ಕಳೆದ ಒಂದುವರೆ ತಿಂಗಳಿನಿಂದ ಸರಿ ಸುಮಾರು 50 ಎಕರೆಗೂ ಅಧಿಕ ವಿಸ್ತೀರ್ಣದ ಕೃಷಿ ಭೂಮಿ ನಾಟಿ ಕಾರ್ಯವನ್ನು ಮುಗಿಸಿದ್ದೇವೆ. ಅಲ್ಲದೆ 23 ಎಕರೆಗೂ ಅಧಿಕ ವಿಸ್ತೀರ್ಣದ ಕೃಷಿ ಭೂಮಿ ಬಾಡಿಗೆ ಆಧಾರದ ಮೇಲೆ ಪಡೆದುಕೊಂಡು ಸಂಪೂರ್ಣವಾಗಿ ಸುಮಾರು 35 ಮಂದಿ ತಂಡ ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿದ್ದೇವೆ.
ಕಾಳಿದಾಸ್‌ ಸಾಗರ, 
ಯಂತ್ರಗಳ ಮಾಲಕರು 

– ಟಿ.ಲೋಕೇಶ್‌ ಆಚಾರ್ಯ ತೆಕ್ಕಟ್ಟೆ

ಟಾಪ್ ನ್ಯೂಸ್

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Strict laws are there to protect women, not to misuse them: Supreme Court

laws: ಕಠಿಣ ಕಾಯ್ದೆ ‌ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Strict laws are there to protect women, not to misuse them: Supreme Court

laws: ಕಠಿಣ ಕಾಯ್ದೆ ‌ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.