ಜಿಲ್ಲೆಯಲ್ಲಿ 20 ಲಕ್ಷ ಗಿಡ ನೆಡುವ ಗುರಿ: ಡಾ| ಜಯಮಾಲಾ


Team Udayavani, Jun 12, 2019, 6:10 AM IST

jayamala

ಬ್ರಹ್ಮಾವರ: ಪರಿಸರ ಸಂರಕ್ಷಣೆಯ ಉದ್ದೇಶದಿಂದ ಜಿಲ್ಲೆಯಲ್ಲಿ ಈ ವರ್ಷ 20 ಲಕ್ಷ ಗಿಡ ನೆಡುವ ಗುರಿ ಹೊಂದಲಾಗಿದೆ ಎಂದು ಸಚಿವೆ ಡಾ| ಜಯಮಾಲಾ ಹೇಳಿದರು.

ಮಂಗಳವಾರ ಬ್ರಹ್ಮಾವರ ಬಂಟರ ಭವನದಲ್ಲಿ ಜಿಲ್ಲಾಡಳಿತ, ಜಿ.ಪಂ., ತಾ.ಪಂ. ಉಡುಪಿ, ವಾರಂಬಳ್ಳಿ ಗ್ರಾ.ಪಂ.ನ ಸಹಯೋಗದಲ್ಲಿ ನಡೆದ ಸ್ವತ್ಛಮೇವ ಜಯತೇ ಮತ್ತು ಜಲಾಮೃತ ಆಂದೋಲನ 2019 ಉದ್ಘಾಟಿಸಿ ಅವರು ಮಾತನಾಡಿದರು.

ಮನುಕುಲದ ಉಳಿವಿಗಾಗಿ, ಪ್ರಾಣಿ ಪಕ್ಷಿ ಸಂಕುಲ, ಜಲಚರಗಳ ಉಳಿವಿಗಾಗಿ ಪರಿಸರ ಸಂರಕ್ಷಿಸಬೇಕಿದೆ. ಪರಿಸರ ಸಂರÒಕಣೆಯ ಕಾರ್ಯದಲ್ಲಿ ಪ್ರತಿಯೊಬ್ಬ ನಾಗರಿಕರು ಕೈ ಜೋಡಿಸಬೇಕಾಗಿದೆ ಎಂದರು.

ಮಳೆ ನೀರು ಸಂರಕ್ಷಣೆ
ಪ್ರಸ್ತುತ ಇರುವ ಜಲ ಮೂಲ ಸಂರಕ್ಷಿಸಿಕೊಂಡು ನೀರಿನ ಸದ್ಬಳಕೆ ನಡೆಯಬೇಕು. ಎಲ್ಲ ಸರಕಾರಿ ಕಚೇರಿಗಳು ಮತ್ತು ಖಾಸಗಿ ಕಟ್ಟಡ, ಮನೆಗಳಲ್ಲಿ ಸಹ ಮಳೆನೀರು ಕೊಯ್ಲು ವ್ಯವಸ್ಥೆ ಅಳವಡಿಸಿಕೊಳ್ಳುವುದರಿಂದ ನೀರಿನ ಕೊರತೆ ತಪ್ಪಿಸಬಹುದು. ಸಾರ್ವಜನಿಕರಲ್ಲಿ ಜಲ ಸಂರಕ್ಷಣೆ, ನೀರಿನ ಸದ್ಬಳಕೆ, ಹಸುರೀಕರಣದ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಡಾ| ಜಯಮಾಲಾ ಹೇಳಿದರು.

ಸ್ವತ್ಛತೆ ಮುಖ್ಯ
ಸ್ವತ್ಛತೆ ಇದ್ದರೆ ರೋಗ ಬರುವುದಿಲ್ಲ. ಸ್ವತ್ಛತೆಯಿಂದ ಆರೋಗ್ಯಯುತ ಸಮಾಜ ನಿರ್ಮಾಣ ಸಾಧ್ಯ. ಆದ್ದರಿಂದ ಮನೆಯಿಂದ ಆರಂಭಗೊಂಡು ಎಲ್ಲೆಡೆ ಸ್ವತ್ಛತೆಗೆ ಆದ್ಯತೆ ನೀಡುವಂತೆ ತಿಳಿಸಿದ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯಲ್ಲಿ ನಡೆಯುತ್ತಿರುವ ತ್ಯಾಜ್ಯ ವಿಲೇವಾರಿ ಕಾರ್ಯಕ್ರಮದಲ್ಲಿ ಎಸ್‌.ಎಲ್‌.ಆರ್‌.ಎಂ. ಘಟಕದ ಸದಸ್ಯರು ನಿರ್ವಸುತ್ತಿರುವ ಕಾರ್ಯವನ್ನು ಶ್ಲಾಘಿಸಿದರು.

ನೀರಿನ ಅರಿವು
ಪ್ರಾಸ್ತಾವಿಕವಾಗಿ ಮಾತನಾಡಿದ ಜಿ.ಪಂ. ಮುಖ್ಯ ಯೋಜನಾ ಧಿಕಾರಿ ಶ್ರೀನಿವಾಸ ರಾವ್‌ ಜಿಲ್ಲೆಯಲ್ಲಿ ನೀರಿನ ಮಹತ್ವ ಕುರಿತು ಅರಿವು ಮೂಡಿಸಿ, ಸಾರ್ವಜನಿಕರನ್ನು ಜಲಸಾಕ್ಷರರನ್ನಾಗಿ ಮಾಡುವ ಉದ್ದೇಶ ಹೊಂದಿದೆ. ಪ್ರತಿ ಗ್ರಾ.ಪಂ.ನಲ್ಲಿ 500 ಗಿಡ ನೆಡಲಾಗುವುದು, ಸ್ವತ್ಛತೆಯ ಕುರಿತಂತೆ ಅರಿವು ಮೂಡಿಸಲು ಜಿಲ್ಲೆಯಾದ್ಯಂತ ಸ್ವತ್ಛತಾ ರಥ ಸಂಚರಿಸಲಿದೆ. ಜಿಲ್ಲೆಯ ಎಲ್ಲ ಶಾಲೆಗಳಲ್ಲಿ ಸ್ವತ್ಛತೆಯ ಕುರಿತಂತೆ ಅರಿವು ಮೂಡಿಸಲು 150 ಮಂದಿ ಗೈಡ್‌ಗಳಿಗೆ ತರಬೇತಿ ನೀಡಿದ್ದು, ಒಂದು ತಿಂಗಳ ಕಾಲ ನಿರಂತರ ಕಾರ್ಯಕ್ರಮ ನಡೆಯಲಿದ್ದು, ವಿಶೇಷ ಗ್ರಾಮ ಸಭೆ ಸಹ ನಡೆಯಲಿದೆ ಎಂದರು.

ಕಸದಿಂದ ರಸ
ಜಿಲ್ಲೆಯಲ್ಲಿ ಎಸ್‌.ಎಲ್‌.ಆರ್‌.ಎಂ. ಘಟಕ ಆರಂಭವಾದಾಗಿನಿಂದ ಇದುವರೆವಿಗೆ 2.5 ಸಾವಿರ ಟನ್‌ ಒಣ ತ್ಯಾಜ್ಯ ಮತ್ತು 3.5 ಸಾವಿರ ಟನ್‌ ಹಸಿ ತ್ಯಾಜ್ಯ ಸಂಗ್ರಹಿಸಿದ್ದು, ಗ್ರಾ.ಪಂ.ಗಳಿಗೆ 35ರಿಂದ 40 ಲಕ್ಷ ರೂ. ಆದಾಯ ದೊರೆತಿದೆ. ರಾಜ್ಯಕ್ಕೆ ಇದು ಮಾದರಿ ಅನುಷ್ಠಾನ ಕಾರ್ಯಕ್ರಮವಾಗಿದೆ ಎಂದು ಶ್ರೀನಿವಾಸ ರಾವ್‌ ಹೇಳಿದರು.

ಜಿ.ಪಂ. ಅಧ್ಯಕ್ಷ ದಿನಕರ ಬಾಬು ಸ್ವತ್ಛತಾ ರಥಕ್ಕೆ ಚಾಲನೆ ನೀಡಿದರು. ಉಪಾಧ್ಯಕ್ಷೆ ಶೀಲಾ ಶೆಟ್ಟಿ ಹಸುರೀಕರಣಕ್ಕೆ ಚಾಲನೆ ನೀಡಿದರು. ತಾ.ಪಂ. ಅಧ್ಯಕ್ಷೆ ನಳಿನಿ ಪ್ರದೀಪ್‌ ರಾವ್‌ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಿದರು.

ಕಾರ್ಯಕ್ರಮದಲ್ಲಿ ಜಿ.ಪಂ. ಸದಸ್ಯರಾದ ಜನಾರ್ದನ ತೋನ್ಸೆ, ಮೈರ್ಮಾಡಿ ಸುಧಾಕರ ಶೆಟ್ಟಿ, ಶಿಲ್ಪಾ ಸುವರ್ಣ, ವಾರಂಬಳ್ಳಿ ಗ್ರಾ.ಪಂ. ಅಧ್ಯಕ್ಷ ನವೀನ್‌ಚಂದ್ರ ನಾಯಕ್‌, ಉಪಾಧ್ಯಕ್ಷೆ ಗಾಯತ್ರಿ, ತಾ.ಪಂ. ಸದಸ್ಯೆ ಕುಸುಮಾ ಪೂಜಾರ್ತಿ, ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿ ಕಾರಿ ಸಿಂಧೂ ಬಿ. ರೂಪೇಶ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಿಶಾ ಜೇಮ್ಸ್‌, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಕೆ. ರಾಜು , ಜಿ.ಪಂ. ಉಪ ಕಾರ್ಯದರ್ಶಿ ನಾಗೇಶ್‌ ರಾಯ್ಕರ್‌, ಸಿಡಿಪಿಓ ವೀಣಾ ಮೊದಲಾದವರು ಉಪಸ್ಥಿತರಿದ್ದರು.

ಪ.ಪಂ.ಗೆ ಮನವಿ
ತ್ಯಾಜ್ಯ ವಿಲೇವಾರಿ, ಒಳಚರಂಡಿ ವ್ಯವಸ್ಥೆ, ಅಭಿವೃದ್ಧಿ ದೃಷ್ಟಿಯಿಂದ ಬ್ರಹ್ಮಾವರ ನಗರದ ಗ್ರಾ.ಪಂ.ಗಳನ್ನು ಸೇರಿಸಿ ಪಟ್ಟಣ ಪಂಚಾಯತ್‌ ರಚಿಸುವಂತೆ ಪಂಚಾಯತ್‌ ಸದಸ್ಯ ರಾಜೇಶ್‌ ಶೆಟ್ಟಿ ಬಿರ್ತಿ ಮನವಿ ಮಾಡಿದರು.

ವಾರಂಬಳ್ಳಿ ಗ್ರಾ.ಪಂ. ಸದಸ್ಯ ರಾಜೇಶ್‌ ಶೆಟ್ಟಿ ಬಿರ್ತಿ ಸ್ವಾಗತಿಸಿ, ಪಿಡಿಓ ಮಹೇಶ್‌ ಕಾರ್ಯಕ್ರಮ ನಿರೂಪಿಸಿದರು.

ಹಲವು ಯೋಜನೆ
ಪರಿಸರ ಸಂರಕ್ಷಣೆ, ಜಲ ಸಂರಕ್ಷಣೆ ಉದ್ದೇಶದಿಂದ ರಾಜ್ಯದಲ್ಲಿ 20,000 ಚೆಕ್‌ ಡ್ಯಾಂಗಳ ನಿರ್ಮಣ, 14,000 ಕೆರೆ, ಕಟ್ಟೆ , ಕಲ್ಯಾಣಿ, ಗೋ ಕಟ್ಟೆಗಳ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಲಾಗಿದೆ. ಬಾವಿ, ಕೆರೆ ಮುಂತಾದ ಎಲ್ಲ ಬಗೆಯ ಜಲ ಮೂಲಗಳ ಹೂಳು ತೆಗೆಯುವ ಬಗ್ಗೆ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಡಾ| ಜಯಮಾಲಾ ಹೇಳಿದರು.

ಟಾಪ್ ನ್ಯೂಸ್

Maharstra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್

Maharstra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್

Aaram Aravinda Swamy Movie Review

Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫ‌ನ್‌ರೈಡ್‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

2-karkala

Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-karkala

Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Maharstra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್

Maharstra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್

Aaram Aravinda Swamy Movie Review

Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫ‌ನ್‌ರೈಡ್‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

2-karkala

Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.