ಬ್ರಹ್ಮಾವರದ ಸಾಧಕಿ ಗೌರಿ ಕೊರಗ ಅವರಿಗೆ ವಾಲ್ಮೀಕಿ ಪ್ರಶಸ್ತಿ
Team Udayavani, Oct 20, 2021, 5:37 AM IST
ಬ್ರಹ್ಮಾವರ/ಬೆಂಗಳೂರು: ರಾಜ್ಯ ಸರಕಾರ ನೀಡುವ ವಾಲ್ಮೀಕಿ ಪ್ರಶಸ್ತಿ ಪುರಸ್ಕೃತರ ಪಟ್ಟಿ ಘೋಷಣೆಯಾಗಿದೆ.
ಕೊರಗ ಜನಾಂಗದ ಅಭ್ಯುದಯಕ್ಕೆ ಅನೇಕ ಕಾರ್ಯಕ್ರಮಗಳನ್ನು ರೂಪಿಸಿ, ಚಳವಳಿಗಳ ಮೂಲಕ ಸರಕಾರದ ಗಮನ ಸೆಳೆದು ಸಮುದಾಯದ ಅಭಿವೃದ್ಧಿಗೆ ಶ್ರಮಿಸಿದ ಕೆಂಜೂರು ಕಲ್ಲುಗುಡ್ಡೆಯ ಗೌರಿ ಕೊರಗ ಅವರಿಗೆ 2020ನೇ ಸಾಲಿನ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಯನ್ನು ಬುಧವಾರ ಪ್ರದಾನ ಮಾಡಲಾಗುತ್ತದೆ.
ಅ. 20ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರಶಸ್ತಿಯು 20 ಗ್ರಾಂ ಚಿನ್ನದ ಪದಕ ಮತ್ತು 5 ಲಕ್ಷ ರೂ. ಒಳಗೊಂಡಿದೆ.
2000ರಲ್ಲಿ ಸಮುದಾಯದವರಿಗೆ ಭೂಮಿ ಮಂಜೂರಾತಿಗಾಗಿ ಭೂಮಿ ಚಳವಳಿ ಪ್ರಾರಂಭಿಸಿದ್ದರು. ಅಜಲು ಪದ್ಧತಿ ನಿರ್ಮೂಲನೆಗಾಗಿ ಅಜಲು ಚಳವಳಿ ಹಮ್ಮಿಕೊಂಡಿ ದ್ದರು. ಮಹಿಳಾ ಸಶಕ್ತೀಕರಣಕ್ಕಾಗಿ ಸ್ವ ಸಹಾಯ ಸಂಘಟನೆ ಪ್ರಾರಂಭಿಸಿದರು. ಸಮುದಾಯದ ಮಕ್ಕಳು ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸದಂತೆ ಶ್ರಮಿಸಿದ್ದರು.
ಕೊರಗ ಸಮುದಾಯದ ಜನಸಂಖ್ಯೆ ಕಡಿಮೆಯಾಗುತ್ತಿರುವ ಹಿನ್ನೆಲೆ ಯಲ್ಲಿ ಅವರ ಆರೋಗ್ಯ ಸುಧಾರಣೆಗೆ ಸರಕಾರದಿಂದ ಪೌಷ್ಟಿಕಾಂಶದ ಆಹಾರ ದೊರೆಯುವಲ್ಲಿ ಶ್ರಮಿಸಿದ್ದರು.
ಇದನ್ನೂ ಓದಿ:ಬಾಂಗ್ಲಾ ಹಿಂದುಗಳ ರಕ್ಷಣೆಗೆ ಸಿಎಎ ಬೇಕು: ಕಾಂಗ್ರೆಸ್ ನಾಯಕ ಮಿಲಿಂದ್ ದೇವ್ರಾ!
ಕರ್ನಾಟಕ, ಕೇರಳ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟಅಧ್ಯಕ್ಷರಾಗಿ, ರಾಜ್ಯ ಬುಡಕಟ್ಟು ಅರಣ್ಯ ಕಾಯ್ದೆ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. 38ನೇ ಕಳ್ತೂರು ಗ್ರಾ.ಪಂ. ಸದಸ್ಯರಾಗಿದ್ದರು. ಗೌರಿ ಕೊರಗ ತಮಗೆ ಮಂಜೂರಾದ 1ಎಕ್ರೆ ಭೂಮಿಯಲ್ಲಿ ಅಡಿಕೆ, ತೆಂಗು, ಬಾಳೆ, ಗೇರು ಕೃಷಿ ಮಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
MUST WATCH
ಹೊಸ ಸೇರ್ಪಡೆ
China Badminton: ಚಿರಾಗ್- ಸಾತ್ವಿಕ್ ಸೆಮಿಫೈನಲ್‌ಗೆ
Kasragodu: ನರ್ಸಿಂಗ್ ವಿದ್ಯಾರ್ಥಿನಿ ಸಾವು : ಕ್ರೈಂ ಬ್ರ್ಯಾಂಚ್ ತನಿಖೆ
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.