ಪದವು: ಅಪಾಯಕಾರಿ ಸ್ಥಿತಿಯಲ್ಲಿದೆ ಹೆಚ್‌ಟಿ ಲೈನ್
Team Udayavani, May 1, 2019, 6:00 AM IST
ಕಾರ್ಕಳ: ಇಲ್ಲಿನ ಪದವು ಬಳಿ ಹೈಟೆನ್ಷನ್ ವಿದ್ಯುತ್ ತಂತಿ ತೀರಾ ತಗ್ಗಿನಲ್ಲಿದ್ದು ಅಪಾಯಕಾರಿಯಾಗಿದೆ.ಕಾರ್ಕಳ -ಉಡುಪಿ ರಸ್ತೆಯ ನಿಟ್ಟೆ ಗ್ರಾಮ ಗುಂಡ್ಯಡ್ಕ ಪದವು ಎಂಬಲ್ಲಿ ಮುಖ್ಯರಸ್ತೆಗೆ ಅಡ್ಡಲಾಗಿ ಮೋರಿ ಅಳವಡಿಸುವ ಸಂದರ್ಭ ರಸ್ತೆಯನ್ನು ಗುತ್ತಿಗೆದಾರರು ಏರಿಸಿದ್ದರು. ಈ ವೇಳೆ ವಿದ್ಯುತ್ ಕಂಬವನ್ನು ಹಾಗೆಯೇ ಬಿಡಲಾಗಿದ್ದು, ಈಗ ಸಮಸ್ಯೆ ಎದುರಾಗಿದೆ.
ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ರಸ್ತೆಯನ್ನು ಏರಿಸಲಾಗಿದ್ದು, ಕಂಬವನ್ನು ಮೇಲೇರಿಸುವ ನಿಟ್ಟಿನಲ್ಲಿ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ.
ಗುತ್ತಿಗೆದಾರರು, ಲೋಕೋಪಯೋಗಿ ಇಲಾಖೆ, ಮೆಸ್ಕಾಂ ಇಲಾಖೆಯ ಒಟ್ಟು ನಿರ್ಲಕ್ಷ್ಯ ಇಲ್ಲಿ ಕಂಡು ಬರುತ್ತಿದ್ದು, ಸಂಭಾವ್ಯ ಅನಾಹುತ ತಪ್ಪಿಸುವ ನಿಟ್ಟಿನಲ್ಲಿ ಕೂಡಲೇ ಕಾರ್ಯಪ್ರವೃತ್ತರಾಗಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಶಾಸಕರ ಊರು
ಇಲ್ಲಿಂದ ಅನತಿ ದೂರದಲ್ಲಿ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರ ಮನೆಯಿದೆ. ಶಾಸಕರ ಮನೆ ಬಳಿಯೇ ಈ ರೀತಿಯಾದಲ್ಲಿ ಅಧಿಕಾರಿಗಳು ಉಳಿದೆಡೆ ಯಾವ ರೀತಿಯ ಕಾಳಜಿ ವಹಿಸಿಯಾರು? ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ತಕ್ಷಣವೇ ಕ್ರಮ
ಲೋಕೋಪಯೋಗಿ ಇಲಾಖೆಯವರು ತಮ್ಮ ಗಮನಕ್ಕೆ ತಾರದೇ ರಸ್ತೆಯನ್ನು ಎತ್ತರಿಸಿದ್ದಾರೆ. ಹೀಗಾಗಿ ಸಮಸ್ಯೆ ತಲೆದೋರಿದ್ದು, ವಿದ್ಯುತ್ ಕಂಬವನ್ನು ಏರಿಸುವ ನಿಟ್ಟಿನಲ್ಲಿ ಅಥವಾ ಶಿಫ್ಟ್ ಮಾಡುವ ನಿಟ್ಟಿನಲ್ಲಿ ಸಂಬಂಧಪಟ್ಟವರಿಗೆ ತಿಳಿಸಿ ತಕ್ಷಣವೇ ಕ್ರಮ ಕೈಗೊಳ್ಳಲಾಗುವುದು.
-ನಾರಾಯಣ ನಾಯ್ಕ,
ಮೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್, ಕಾರ್ಕಳ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ
Ajekar: ಬಾಲಕೃಷ್ಣ ಪೂಜಾರಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಉಲ್ಲೇಖ
Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ
ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ
Udupi: ಗೀತಾರ್ಥ ಚಿಂತನೆ-84: ಮಧುವಾದದ್ದನ್ನು ನಾಶಪಡಿಸುವವ ಮಧುಸೂದನ
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.