ರಂಗಕಲೆ ಆಸಕ್ತಿ ಬೆಳೆಯಬೇಕು: ಡಾ| ಶಾಂತಾರಾಮ್
Team Udayavani, Mar 16, 2018, 2:42 PM IST
ಕುಂದಾಪುರ : ಯುವಜನರು ರಂಗಕಲೆಗಳ ಕುರಿತು ಆಸಕ್ತಿ ಬೆಳೆಸಿಕೊಳ್ಳುವ ಕಾರ್ಯ ಆಗಬೇಕಿದೆ. ರಂಗ ಅಧ್ಯಯನ ಕೇಂದ್ರದಿಂದ ಈ ಕಾರ್ಯ ನಡೆಯಬೇಕು ಎಂದು ಮಣಿಪಾಲದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಆಡಳಿತಾಧಿಕಾರಿ, ಕುಂದಾಪುರದ ರಂಗ ಅಧ್ಯಯನ ಕೇಂದ್ರದ ಡಾ| ಎಚ್. ಶಾಂತಾರಾಮ್ ಹೇಳಿದರು.
ಅವರು ಗುರುವಾರ ಭಂಡಾರ್‌ಕಾರ್ ಕಾಲೇಜಿನ ರಂಗ ಅಧ್ಯಯನ ಕೇಂದ್ರದ ಪದ್ಮಾವತಿ ಭಂಡಾರ್‌ಕಾರ್ ರಂಗಮಂದಿರದಲ್ಲಿ ರಂಗ ಅಧ್ಯಯನ ಕೇಂದ್ರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಹಾಗೂ ದಕ್ಷಿಣ ವಲಯ ಸಾಂಸ್ಕೃತಿಕ ಕೇಂದ್ರ ತಂಜಾವೂರಿನ ಸಂಯುಕ್ತ ಆಶ್ರಯದಲ್ಲಿ ಮಾ. 15ರಿಂದ 22ರ ವರೆಗೆ ನಡೆಯಲಿರುವ ಭಾರತೀಯ ರಂಗ ಮಹೋತ್ಸವದ ಉದ್ಘಾಟನ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಾಟಕದೊಂದಿಗೆ ಇತರ ರಂಗ ಕಲೆಗಳಿಗೂ ಉತ್ತೇಜನ ನೀಡಬೇಕು. ಅವುಗಳಿಗೂ ಸರಿಯಾದ ವೇದಿಕೆ ನಿರ್ಮಿಸಿಕೊಡುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಬೇಕು. ಎಲ್ಲ ಕೆಲಸಗಳಿಗೂ ಸರಕಾರವನ್ನೇ ಅವಲಂಬಿಸುವುದು ಸರಿಯಲ್ಲ ಎಂದವರು ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿದ ರಂಗಕರ್ಮಿ ಗೋಪಾಲಕೃಷ್ಣ ನಾಯರಿ ಮಾತನಾಡಿ, ವಿದ್ಯುನ್ಮಾನ ಯುಗದಲ್ಲಿ ರಂಗದ ಬಗೆಗಿನ ಆಸಕ್ತಿ ಕಳೆಗುಂದುತ್ತಿದ್ದು, ಈ ಕಾಲೇಜಿನಿಂದ ವಿದ್ಯಾರ್ಥಿಗಳಿಗೆ ಉಚಿತ ನಾಟಕ ತರಬೇತಿಯಂತಹ ಕಾರ್ಯಗಳು ನಡೆಯುವುದು ಉತ್ತಮ ಬೆಳವಣಿಗೆ. ಈಗಿನ ಆಳುವ ವರ್ಗಕ್ಕೆ ಇಂದ್ರಿಯಗಳೇ ಕಳೆದುಹೋಗಿವೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸಿಗಬೇಕಾದವರಿಗೆ ಸರಿಯಾದ ಅನುದಾನ ಸಿಗುತ್ತಿಲ್ಲ ಎಂದರು.
ರಂಗ ಅಧ್ಯಯನ ಕೇಂದ್ರದ ವಿಶ್ವಸ್ತರಾದ ಕೆ. ಶಾಂತಾರಾಮ್ ಪ್ರಭು, ದೇವದಾಸ್ ಕಾಮತ್, ರಾಜೇಂದ್ರ ತೋಳಾರ್, ರಂಗ ಅಧ್ಯಯನ ಕೇಂದ್ರದ ಸಂಚಾಲಕ ವಸಂತ ಬನ್ನಾಡಿ ಉಪಸ್ಥಿತರಿದ್ದರು. ರಂಗ ಅಧ್ಯಯನ ಕೇಂದ್ರದ ಕಾರ್ಯದರ್ಶಿ, ಕಾಲೇಜಿನ ಪ್ರಾಂಶುಪಾಲ ಡಾ| ಎನ್.ಪಿ. ನಾರಾಯಣ ಶೆಟ್ಟಿ ಸ್ವಾಗತಿಸಿದರು. ಅಧ್ಯಾಪಕ ಕುಮಾರ್ ವಂದಿಸಿದರು. ಉಪನ್ಯಾಸಕಿ ಪಾರ್ವತಿ ಜಿ. ಐತಾಳ್ ಕಾರ್ಯಕ್ರಮ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malpe: ಬೀಚ್‌ನಲ್ಲಿ ಮತ್ತೆ ಆರಂಭವಾಗಿದೆ ಫ್ಲೋಟಿಂಗ್ ಬ್ರಿಡ್ಜ್, ಪ್ರವಾಸಿಗರ ಸ್ಪಂದನೆ
Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ
Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್ ಶೆಟ್ಟಿ
Ajekar Case: ನ್ಯಾಯಾಂಗ ಬಂಧನ ವಿಸ್ತರಣೆ
Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ
MUST WATCH
ಹೊಸ ಸೇರ್ಪಡೆ
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್ ಪಠಾಣಗೋ?
King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!
Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.