ಹೋಲ್‌ಸೇಲ್ ಅಂಗಡಿಗೆ ನುಗ್ಗಿದ ಕಳ್ಳರು: 12 ಲಕ್ಷ ನಗದು ಲೂಟಿ
Team Udayavani, Oct 9, 2019, 12:59 PM IST
ಉಡುಪಿ: ನಗರದ ಹೃದಯ ಭಾಗದ ಹೋಲ್‌ಸೇಲ್ ಅಂಗಡಿಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ನಗದು ದೊಚಿದ ಘಟನೆ ಇಂದು ಬೆಳಕಿಗೆ ಬಂದಿದೆ.
ಉಡುಪಿ ಮೈತ್ರಿ ಕಾಂಪ್ಲೆಕ್ಸ್‌ನ ತಳಮಹಡಿಯಲ್ಲಿ ಗುಟ್ಕಾ, ಸಿಗರೇಟ್ ಮಾರಾಟ ಮಾಡುವ ರಮಾ ಎಂಟರ್‌ಪ್ರೈಸ್ (ಮಹಾದೇವಿ) ಹೋಲ್ ಸೇಲ್ ಅಂಗಡಿಯ ಶಟರ್ ಮುರಿದು ಕಳ್ಳರು ಡ್ರಾವರ್ ಅಲ್ಲಿದ್ದ 12 ಲಕ್ಷ ನಗದು ದೋಚಿ ಪರಾರಿಯಾಗಿದ್ದಾರೆ.
ಕಳೆದ ಮೂರು ದಿನದಿಂದ ಬ್ಯಾಂಕ್ ರಜೆ ಇದ್ದ ಕಾರಣ ನಗದನ್ನು ಅಂಗಡಿ ಮಾಲಿಕ ರವೀಂದ್ರ ನಾಯಕ್ ಅವರು ಅಂಗಡಿಯಲ್ಲೇ ಇಟ್ಟಿದ್ದರು. ಈ ವಿಷಯ ತಿಳಿದವರೇ ಈ ಕೃತ್ಯ ನಡೆಸಿರುವ ಸಾಧ್ಯತೆ ಇದೆಯೆಂದು ಪೊಲೀಸರು ಸಂಶಯ ವ್ಯಕ್ತ ಪಡಿಸಿದ್ದಾರೆ.
ನಗದು ಇಟ್ಟಿರುವ ಡ್ರಾವರನ್ನೇ ತೆಗೆದು ದೋಚಿರುವುದು ನೋಡಿದರೆ ಇದು ತಿಳಿದವರೇ ನಡೆಸಿರುವ ಕೃತ್ಯವೆಂದು ಸ್ಥಳೀಯರು ಮಾತನಾಡಿಕೊಳ್ಳುತ್ತಿದ್ದಾರೆ.
ಕಳವಿಗಾಗಿ ಕಬ್ಬಿಣದ ಸರಳುಗಳನ್ನು ಹೊಸದಾಗಿ ಖರೀದಿ ಮಾಡಿದ್ದ ಕಳ್ಳರು ಅದನ್ನು ಗೋಣಿ ಚೀಲದಲ್ಲಿ ಸುತ್ತಿ ತಂದಿದ್ದು ಅಂಗಡಿಯ ಶಟರನ್ನು ಮುರಿದು ಒಳಹೋಗಿದ್ದರು. ಮತ್ತು ಹಣವಿದ್ದ ಡ್ರಾವರನ್ನೇ ಮಾತ್ರ ಮೀಟಿ ತೆಗೆದು ಹಣದೊಂದಿಗೆ ಪರಾರಿಯಾಗಿದ್ದಾರೆ.
ಅಂಗಡಿಯಲ್ಲಿ 2 ಸಿಸಿ ಕ್ಯಾಮರವಿದ್ದರೂ ಅದು ಕೆಟ್ಟು ಹೋಗಿದ್ದು ಹತ್ತಿರದ ಕೃಷ್ಣ ಕೃಪಾ ,ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಇರುವ ಅಂಗಡಿಗಳ ಸಿಸಿ ಟಿವಿಗಳ ಪೊಲೀಸರು ಪರಿಶೀಲಿಸಿದ್ದಾರೆ.
ಸ್ಥಳಕ್ಕೆ ಉಡುಪಿ ಎಸ್ಪಿ ನಿಶಾ ಜೆಮ್ಸ್, ವೃತ್ತ ನಿರೀಕ್ಷಕ ಮಂಜುನಾಥ್, ಠಾಣಾಧಿಕಾರಿ ಅನಂತ ಪದ್ಮಾನಾಭ, ಬೆರಳಚ್ಚು ತಜ್ಞರು ಆಗಮಿಸಿದ್ದು ಪರೀಶಿಲನೆ ನಡೆಸುತ್ತಿದ್ದಾರೆ.
ನಗರದ ಮಧ್ಯೆ ಭಾಗದಲ್ಲಿ ಈ ರೀತಿ ಕಳವು ನಡೆದಿರುವುದು ಪೊಲೀಸರ ನೈಟ್ ಬೀಟ್ ವ್ಯವಸ್ಥೆ ಯಾವ ರೀತಿ ಇದೆಂದು ತಿಳಿದು ಬರುತ್ತದೆಂದು ಜನರು ಮಾತನಾಡಿ ಕೊಳ್ಳುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.