ತೆಕ್ಕಟ್ಟೆ: ಕಾರಿಗೆ ಟ್ಯಾಂಕರ್‌ ಲಾರಿ ಢಿಕ್ಕಿ ; ನಾಲ್ವರು ವಿದ್ಯಾರ್ಥಿಗಳು ಪಾರು !


Team Udayavani, Jan 28, 2023, 6:14 PM IST

ತೆಕ್ಕಟ್ಟೆ: ಕಾರಿಗೆ ಟ್ಯಾಂಕರ್‌ ಲಾರಿ ಢಿಕ್ಕಿ ; ನಾಲ್ವರು ವಿದ್ಯಾರ್ಥಿಗಳು ಪಾರು !

ತೆಕ್ಕಟ್ಟೆ : ಇಲ್ಲಿನ ರಾ.ಹೆ.66 ಪ್ರಮುಖ ಸರ್ಕಲ್‌ನಲ್ಲಿ ಕಾರಿಗೆ ಟ್ಯಾಂಕರ್‌ ಲಾರಿ ಢಿಕ್ಕಿಯಾಗಿ ನಾಲ್ವರು ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾದ ಘಟನೆ ಜ.28 ರಂದು ಸಂಜೆ ಗಂಟೆ 4.25ರ ಸುಮಾರಿಗೆ ಸಂಭವಿಸಿದೆ

ಘಟನೆ: ಮಣಿಪಾಲದಲ್ಲಿ ಎಂಜಿನಿಯರ್‌ ಮುಗಿಸಿದ್ದ ಗುಹಾಹಟಿ ಮೂಲದ ನಾಲ್ವರು ವಿದ್ಯಾರ್ಥಿಗಳ ತಂಡ ಬಾಡಿಗೆ ಟೊಯೊಟಾ ಇಟಿಯಾಸ್‌ ಕಾರಿನಲ್ಲಿ ಜಿಲ್ಲೆಯ ದೇಗುಲ ದರ್ಶನಕ್ಕಾಗಿ ಆಗಮಿಸಿದ್ದು, ತೆಕ್ಕಟ್ಟೆ ಮಲ್ಯಾಡಿಯ ಗ್ರಾಮೀಣ ಸಂಪರ್ಕ ರಸ್ತೆಯಿಂದ ರಾ.ಹೆ.66 ಪ್ರಮುಖ ಮಾರ್ಗಕ್ಕೆ ಕಾರು ಚಾಲಕ ಯಾವುದೇ ಸೂಚನೆ ನೀಡದೆ ಏಕಾಏಕಿ ರಸ್ತೆಗೆ ಪ್ರವೇಶಿಸಿರುವುದರಿಂದ ಕುಂದಾಪುರದಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಟ್ಯಾಂಕರ್‌ ಲಾರಿಗೆ ನೇರವಾಗಿ ಬಂದು ಢಿಕ್ಕಿ ಹೊಡೆದಿದೆ. ಪರಿಣಾಮ ಕಾರಿನ ಬಲಭಾಗ ಸಂಪೂರ್ಣ ಜಖಂಗೊಂಡಿದೆ. ನಾಲ್ವರು ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು ಮುರುಡೇಶ್ವರ ದೇಗುಲ ದರ್ಶನಕ್ಕೆ ತೆರಳುತ್ತಿದ್ದರು ಎಂದು ಹೇಳಲಾಗಿದೆ.

ನಾಲ್ವರು ವಿದ್ಯಾರ್ಥಿಗಳ ಪ್ರಾಣ ಉಳಿಸಿದ ಟ್ಯಾಂಕರ್‌ ಲಾರಿ ಚಾಲಕ !
ಕಾರು ಅತೀ ವೇಗದಿಂದ ರಾ.ಹೆ.66 ಪ್ರವೇಶಿಸುತ್ತಿರುವುದನ್ನು ಅರಿತ ಟ್ಯಾಂಕರ್‌ ಲಾರಿ ಚಾಲಕ ವಾಹನ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದು , ಅದೃಷ್ಟವಶಾತ್‌ ಸಂಭವನೀಯ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಲಾರಿ ಚಾಲಕನ ಸಮಯಪ್ರಜ್ಞೆಗೆ ಸಾರ್ವಜನಿಕ ವಲಯದಲ್ಲಿ ಭಾರೀ ಪ್ರಶಂಸೆ ವ್ಯಕ್ತವಾಗಿದೆ.

ಅಪಘಾತಕ್ಕೆ ಆಹ್ವಾನಿಸುತ್ತಿದೆ ಅವೈಜ್ಞಾನಿಕ ಸರ್ಕಲ್‌ !
ಇತ್ತೀಚಿನ ದಿನಗಳಲ್ಲಿ ತೆಕ್ಕಟ್ಟೆ ರಾ.ಹೆ.66 ರ ಪ್ರಮುಖ ಸರ್ಕಲ್‌ ಅಪಘಾತ ವಲಯವಾಗಿ ಪರಿವರ್ತಿತವಾಗಿದ್ದು , ರಸ್ತೆಯ ಎರಡು ಕಡೆಗಳಲ್ಲಿರುವ ಅವೈಜ್ಞಾನಿಕ ಬಸ್‌ ತಂಗುದಾಣಗಳು ರಸ್ತೆ ನಿಯಮಗಳಿಗೆ ವಿರುದ್ಧವಾಗಿದ್ದು, ಬಸ್‌ ತಂಗುದಾಣಗಳಲ್ಲಿ ಬಸ್‌ ಚಾಲಕರು ರಸ್ತೆಯ ಮೇಲೆಯೇ ನಿಲ್ಲಿಸಿ, ಪ್ರಯಾಣಿಕರನ್ನು ಕರೆದೊಯ್ಯುವುದು ಒಂದೆಡೆಯಾದರೆ ಮತ್ತೊಂದೆಡೆಯಲ್ಲಿ ಗ್ರಾಮೀಣ ಭಾಗಗಳಲ್ಲಿ ರಾ.ಹೆ.66 ನ್ನು ಆವರಿಸಿರುವ ಖಾಸಗಿ ಜಾಹೀರಾತು ನಾಮಫಲಕಗಳ ದರ್ಬಾರ್‌ಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಪರಿಣಾಮ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರಿಗೆ ಗೊಂದಲ ಏರ್ಪಟ್ಟು ಇಂತಹ ಅವಘಡಗಳಿಗೆ ಕಾರಣವಾಗುತ್ತಿದ್ದು ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Kundapura: ಮನೆಗೆ ನುಗ್ಗಿ ಚಿನ್ನಾಭರಣ ಕಳವು

POlice

Brahmavar: ಬೆಳ್ಮಾರು; ಕೋಳಿ ಅಂಕಕ್ಕೆ ದಾಳಿ

dw

Kundapura: ಮಲಗಿದಲ್ಲೇ ವ್ಯಕ್ತಿ ಸಾವು

4

Karkala: ಅಸ್ವಸ್ಥಗೊಂಡು ವ್ಯಕ್ತಿ ಸಾವು

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

13

Kundapura: ಮನೆಗೆ ನುಗ್ಗಿ ಚಿನ್ನಾಭರಣ ಕಳವು

POlice

Brahmavar: ಬೆಳ್ಮಾರು; ಕೋಳಿ ಅಂಕಕ್ಕೆ ದಾಳಿ

dw

Kundapura: ಮಲಗಿದಲ್ಲೇ ವ್ಯಕ್ತಿ ಸಾವು

death

Puttur: ಎಲೆಕ್ಟ್ರಿಕ್‌ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.