ಸಚಿವ ಪ್ರಮೋದ್ ಮಾನನಷ್ಟ ಕೇಸ್ ದಾಖಲಿಸಲಿ; ಅಬ್ರಾಹಂ ತಿರುಗೇಟು
Team Udayavani, Mar 24, 2018, 1:59 PM IST
ಉಡುಪಿ: ‘ಸಚಿವ ಪ್ರಮೋದ್ ಮಧ್ವರಾಜ್ ಕಡಿಮೆ ಮೌಲ್ಯದ ಆಸ್ತಿಗೆ ಹೆಚ್ಚು ಸಾಲ ಪಡೆದಿರುವುದಕ್ಕೆ ನನ್ನ ಬಳಿ ದಾಖಲೆ ಇದೆ.ನಾನು ಕ್ಷಮೆ ಯಾಚಿಸುವುದಿಲ್ಲ’ ಎಂದು ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ತಿರುಗೇಟು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅಬ್ರಾಹಂ ‘ ನನ್ನ ಮೇಲೆ ಪ್ರಮೋದ್ ಮಾನನಷ್ಟ ಮೊಕದ್ದಮೆ ದಾಖಲಿಸಲಿ. ಇಲ್ಲದಿದ್ದರೆ ನಾನೇ ದಾಖಲಿಸುತ್ತೇನೆ. ನಾನು ಕಂದಾಯ ಇಲಾಖೆಯಿಂದ ಪಡೆದ ದಾಖಲೆಗಳಿವೆ, ಯಾರೂ ಬೇಕಾದರೂ ಅವುಗಳನ್ನು ನೋಡಬಹುದು. ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದರೆ ಕೋರ್ಟ್ಗೆ ಅವರಾಗಿಯೇ ದಾಖಲೆಗಳನ್ನು ನೀಡಬೇಕಾಗುತ್ತದೆ ‘ ಎಂದರು.
‘ಟಿ.ಜೆ. ಅಬ್ರಹಾಂ ಅವರು ಬಹಿರಂಗವಾಗಿ ಕ್ಷಮೆ ಯಾಚಿಸಬೇಕು. ಇಲ್ಲದಿದ್ದರೆ ಅವರ ವಿರುದ್ಧ 10 ಕೋ.ರೂ. ಮಾನನಷ್ಟ ಪ್ರಕರಣ ಹೂಡಲಾಗುವುದು’ ಎಂದು ಸಚಿವ ಪ್ರಮೋದ್ ಮಧ್ವರಾಜ್ ಅವರು ಉಡುಪಿಯಲ್ಲಿ ಗುರುವಾರ ಮಾಧ್ಯಮಗಳಿಗೆ ತಿಳಿಸಿದ್ದರು.
ವಕೀಲ ಎಂ. ಶಾಂತಾರಾಮ್ ಶೆಟ್ಟಿ ಅವರ ಮೂಲಕ ಮಾ. 21ರಂದು ನೋಟಿಸು ಕಳುಹಿಸಲಾಗಿದ್ದು, 3 ದಿನಗಳ ಒಳಗೆ ಅವರು ಪತ್ರಿಕಾಗೋಷ್ಠಿ ನಡೆಸಿ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ
Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.