ಸಿಬಂದಿಗೆ ರಜೆ ಇಲ್ಲ; ಪ್ರವಾಸಿಗರ ಮಾಹಿತಿ ಕಡ್ಡಾಯ
ಉಡುಪಿಯಲ್ಲಿ ಕೊರೊನಾ ನಿಯಂತ್ರಣ ಸಭೆ
Team Udayavani, Mar 18, 2020, 12:02 AM IST
ಉಡುಪಿ: ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಕೊರೊನಾ ನಿಯಂತ್ರಣ ಸಭೆಯಲ್ಲಿ ಮಾತನಾಡಿದರು.
ಉಡುಪಿ: ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರಕಾರದ ಸೂಚನೆಯಂತೆ ಹಲವು ಕ್ರಮಗಳನ್ನು ಕೈಗೊಂಡಿದ್ದು, ಯಾವುದೇ ಅಧಿಕಾರಿ/ಸಿಬಂದಿಗೆ ಈ ಅವಧಿಯಲ್ಲಿ ರಜೆ ಮಂಜೂರು ಮಾಡಬಾರದು. ಜಿಲ್ಲಾಧಿಕಾರಿ, ಎಸ್‌ಪಿ, ಸಿಇಒ ಅವರ ಅನುಮತಿ ಇಲ್ಲದೆ ಕೇಂದ್ರಸ್ಥಾನ ಬಿಟ್ಟು ತೆರಳಿದರೆ ವಿಪತ್ತು ನಿರ್ವಹಣಾ ಕಾಯ್ದೆ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಕೊರೊನಾ ನಿಯಂತ್ರಣ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಎಲ್ಲ ವಸತಿಗೃಹಗಳಲ್ಲಿರುವ ಪ್ರವಾಸಿಗರ ವಿವರಗಳನ್ನು ಪಡೆಯುವಂತೆ ಮತ್ತು ಫ್ಲ್ಯಾಟ್‌ಗಳಿಗೆ ಹೊಸದಾಗಿ ಬರುವವರ ಮಾಹಿತಿ ಸಂಗ್ರಹಿಸಿ ಸ್ವಯಂ ಹೇಳಿಕೆ ಪಡೆಯುವಂತೆ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರಿಗೆ ಮತ್ತು ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಿದರು.
ಮಾಸ್ಕ್ ಅಧಿಕ ಬೆಲೆಗೆ ಮಾರಿದರೆ ಕ್ರಮ
ಮಾಸ್ಕ್ಗಳ ಕೊರತೆ ಸೃಷ್ಟಿಸುವುದು ಮತ್ತು ಅವುಗಳನ್ನು ಅಧಿಕ ಬೆಲೆಗೆ ಮಾರಾಟ ಮಾಡುವುದು ಕಂಡುಬಂದಲ್ಲಿ ಅವರವಿರುದ್ಧ ಕಠಿನ ಕ್ರಮ ಕೈಗೊಳ್ಳಲಾಗುವುದು. ಎಲ್ಲ ಖಾಸಗಿ ಆಸ್ಪತ್ರೆ ಹಾಗೂ ತಾಲೂಕು ಸರಕಾರಿ ಆಸ್ಪತ್ರೆಗಳಲ್ಲಿ 2 ಬೆಡ್‌ಗಳನ್ನು ಕಾದಿರಿಸಬೇಕು. ಜಿಲ್ಲೆಯ ಖಾಸಗಿ ವೈದ್ಯರು, ಖಾಸಗಿ ಆಸ್ಪತ್ರೆಗಳು, ನರ್ಸಿಂಗ್ ಹೋಂಗಳು ಕೊರೊನಾ ಸೋಂಕು ಲಕ್ಷಣಗಳಿರುವ ಸ್ಥಳೀಯ ವ್ಯಕ್ತಿಗಳು ತಮ್ಮಲ್ಲಿಗೆ ಬಂದರೂ ಕೂಡಲೇ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದರು.
ಮಾಲ್‌ಗಳನ್ನು ಮುಚ್ಚಲು ಸೂಚನೆ
ಸಿನೆಮಾ ಮಂದಿರಗಳು, ಮಲ್ಟಿಪ್ಲೆಕ್ಸ್, ನಾಟಕಗಳು, ಯಕ್ಷಗಾನ, ರಂಗಮಂದಿರ, ಪಬ್‌ಗಳು, ಕ್ಲಬ್‌ಗಳು ಹಾಗೂ ನೈಟ್‌ಕ್ಲಬ್‌ಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳಬೇಕು. ನಗರದ 3 ಮಾಲ್‌ಗಳನ್ನು ಮುಚ್ಚಬೇಕು. ಈ ಪೈಕಿ ಬಿಗ್ ಬಜಾರ್‌ನ ದಿನಸಿ ಮತ್ತು ತರಕಾರಿ ವಿಭಾಗ, ಸಿಟಿ ಸೆಂಟರ್‌ನ ದಿನಸಿ ಮಳಿಗೆ ಹಾಗೂ ಕೆಳಗಿನ ಮಹಡಿಯಲ್ಲಿನ ಗ್ಯಾಸ್ ಏಜೆನ್ಸಿ ಹಾಗೂ ಅದರೊಂದಿಗಿನ 5 ಪ್ರತ್ಯೇಕ ಅಂಗಡಿಗಳನ್ನು ಮಾತ್ರ ತೆರೆಯುವಂತೆ ಸೂಚಿಸಿದರು.
100ಕ್ಕಿಂತ ಅಧಿಕ ಜನ ಸೇರುವಂತಿಲ್ಲ
ಮದುವೆ, ನಿಶ್ಚಿತಾರ್ಥ ಇತ್ಯಾದಿ ಕಾರ್ಯಕ್ರಮಗಳು ಪೂರ್ವ ನಿಗದಿಯಾಗಿದ್ದಲ್ಲಿ ಅಂತಹ ಕಾರ್ಯಕ್ರಮಗಳಲ್ಲಿ 100ಕ್ಕಿಂತ ಅಧಿಕ ಜನರು ಸೇರದಂತೆ ನೋಡಿಕೊಳ್ಳಲು ಮತ್ತು ಹೊಸದಾಗಿ ಮದುವೆ, ನಿಶ್ಚಿತಾರ್ಥ ಕಾರ್ಯಕ್ರಮಗಳಿಗೆ ಸಭಾಂಗಣಗಳನ್ನು ಕಾದಿರಿಸದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.
ಧಾರ್ಮಿಕ ಕೇಂದ್ರಗಳಿಗೂ ಸೂಚನೆ
ಧಾರ್ಮಿಕ ಕೇಂದ್ರಗಳಲ್ಲಿ ದೈನಂದಿನ ಪೂಜಾದಿಗಳ ಹೊರತು ಜನ ಸೇರುವಂತಹ ಯಾವುದೇ ಕಾರ್ಯ
ಕ್ರಮಗಳನ್ನು ನಡೆಸಬಾರದು. ಈಗಾಗಲೇ ನಿಗದಿಯಾದ ಧಾರ್ಮಿಕ ಕಾರ್ಯಕ್ರಮಗಳಿದ್ದಲ್ಲಿ ಆದಷ್ಟು ಕಡಿಮೆ ಸಂಖ್ಯೆಯ ಜನರು ಭಾಗವಹಿಸಬೇಕು. ಯಕ್ಷಗಾನ ಮೇಳಗಳು ಹರಕೆ ಆಟಗಳನ್ನು ನಡೆಸುವಂತಿಲ್ಲ. ಈ ಬಗ್ಗೆ ಸಂಬಂಧಿಸಿದ ದೇವಾಲಯಗಳಿಗೆ ಪತ್ರ ಬರೆಯಬೇಕು ಎಂದು ಜಿಲ್ಲಾಧಿಕಾರಿಗಳು ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಕೊರೊನಾ ನಿಯಂತ್ರಣ ಕುರಿತಂತೆ ಎಲ್ಲ ನಗರ ಸ್ಥಳೀಯ ಸಂಸ್ಥೆಗಳು ಮತ್ತು ಪಂಚಾಯತ್ ಮಟ್ಟದಲ್ಲಿ ಸಭೆಗಳನ್ನು ನಡೆಸಿ ಅಗತ್ಯ ಕ್ರಮ ಕೈಗೊಳ್ಳುವುದರ ಜತೆಗೆ ಕಾಯಿಲೆಗೆ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ವ್ಯಾಪಕ ಪ್ರಚಾರ ಕಾರ್ಯಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.
ಸಿಇಒ ಪ್ರೀತಿ ಗೆಹಲೋತ್, ಎಸ್‌ಪಿ ಎನ್. ವಿಷ್ಣುವರ್ಧನ್, ಎಡಿಸಿ ಸದಾಶಿವ ಪ್ರಭು, ಡಿಎಚ್‌ಒ ಡಾ| ಸುಧೀರ್‌ಚಂದ್ರ ಸೂಡ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಕ್ರೀಡಾಕೂಟ, ಶಿಬಿರ ಇಲ್ಲ
ಯಾವುದೇ ಕ್ರೀಡಾಕೂಟ ಆಯೋಜಿಸದಂತೆ ಮತ್ತು ಅವುಗಳ ಆಯೋಜನೆಗೆ ಅನುಮತಿ ನೀಡದಂತೆ ಕ್ರೀಡಾ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಬೇಸಗೆ ಶಿಬಿರಗಳನ್ನು ಆಯೋ
ಜಿಸಬಾರದು. ಶಾಲೆ, ಕಾಲೇಜು, ವಿ.ವಿ.ಗಳು, ವಾಣಿಜ್ಯ ಶಾಲೆಗಳು, ಟ್ಯುಟೋರಿಯಲ್ಸ್ ಮತ್ತು ಕೋಚಿಂಗ್ ಕ್ಲಾಸ್‌ಗಳನ್ನು ಕಡ್ಡಾಯವಾಗಿ ಮುಚ್ಚುವಂತೆ ಮತ್ತು ಜನರು ಹೆಚ್ಚಾಗಿ ಬಳಸುವ ಸ್ವಿಮ್ಮಿಂಗ್ ಪೂಲ್, ಜಿಮ್, ಫಿಟ್‌ನೆಸ್ ಸೆಂಟರ್‌ಗಳನ್ನು ಮುಚ್ಚುವಂತೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
US Election 2024: ಟ್ರಂಪ್,ಕಮಲಾ ಮಧ್ಯೆ ತೀವ್ರ ಪೈಪೋಟಿ
Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.