Lok Sabha Election; ಪ್ರಮೋದ್‌ಗೆ ಟಿಕೆಟ್: ಮೀನುಗಾರರ ಸಂಘದ ಆಗ್ರಹ
Team Udayavani, Jan 27, 2024, 12:05 AM IST
ಉಡುಪಿ: ಲೋಕಸಭಾ ಚುನಾವಣೆಗೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮೀನುಗಾರ ಸಮಾಜದ ನಾಯಕ ಪ್ರಮೋದ್ ಮಧ್ವರಾಜ್ ಅವರನ್ನು ಆಯ್ಕೆ ಮಾಡಬೇಕು ಎಂದು ಅಖಿಲ ಭಾರತೀಯ ಮೀನುಗಾರರ ಸಂಘ ಆಗ್ರಹಿಸಿದೆ.
ಪ್ರಮೋದ್ 12 ವರ್ಷಗಳಿಂದ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾಗಿ, ಕರ್ನಾಟಕ ಕರಾವಳಿ ಮೀನುಗಾರರ ಕ್ರಿಯಾ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. 6 ವರ್ಷಗಳಿಂದ ರಾಷ್ಟ್ರೀಯ ಮೀನುಗಾರರ ವೇದಿಕೆಯ ಕಾರ್ಯದರ್ಶಿಯಾಗಿ ಸಮಾಜದ ಆರ್ಥಿಕ ಪ್ರಗತಿಗೆ ಭವಿಷ್ಯದ ಯೋಜನೆ ಮತ್ತು ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿ¨ªಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ಅ.ಭಾ. ಮೀನುಗಾರರ ಸಂಘದ ಕಾರ್ಯದರ್ಶಿ ಕಿಶೋರ್ ಡಿ. ಸುವರ್ಣ ಹೇಳಿದರು.
ರಾಷ್ಟ್ರೀಯ ಮಟ್ಟದಲ್ಲಿ ಮೀನುಗಾರರ ಸಮಸ್ಯೆಗಳ ನಿವಾರಣೆ ಮತ್ತು ಮೀನುಗಾರಿಕೆಯ ಸರ್ವಾಂಗೀಣ ಅಭಿವೃದ್ಧಿಗೆ ಮೀನುಗಾರರ ಪ್ರತಿನಿಧಿಯನ್ನು ಹೊಂದುವುದು ಬಹಳ ಮುಖ್ಯ ಎಂದರು.
ಪ್ರಸ್ತುತ ಸಂಸದೆ ಶೋಭಾ ಕರಂದ್ಲಾಜೆ ರಾಜ್ಯದ ಯಾವ ಕ್ಷೇತ್ರದಲ್ಲಿಯೂ ಸ್ಪರ್ಧಿಸಬಹುದು. ನಾವು ರಾಜ್ಯದಲ್ಲಿ ಒಂದು ಕ್ಷೇತ್ರವನ್ನು ಮಾತ್ರ ಕೇಳುತ್ತಿದ್ದೇವೆ. ಹೀಗಾಗಿ ಶೋಭಾ ಅವರು ಉಡುಪಿ ಚಿಕ್ಕಮಗಳೂರು ಕ್ಷೇತ್ರವನ್ನು ನಮ್ಮೆಲ್ಲ ಬೇಡಿಕೆಗೆ ಸ್ಪಂದಿಸಿ ತ್ಯಾಗ ಮಾಡಬೇಕು ಎಂದು ಆಗ್ರಹಿಸಿದರು.
ಆದಿಉಡುಪಿ-ಮಲ್ಪೆಯ 3.5 ಕಿ.ಮೀ. ರಾ.ಹೆ.ಯಲ್ಲಿ ಸ್ವಾಧೀನಗೊಂಡಿರುವ ಭೂಮಿಗೆ ಸೂಕ್ತ ಪರಿಹಾರ ನೀಡ ಬೇಕು. ಜಿಲ್ಲೆಗೆ ಏರ್‌ಪೋರ್ಟ್ ನಿರ್ಮಾಣ, ಉಡುಪಿ- ಚಿಕ್ಕಮಗಳೂರನ್ನು ಆಕರ್ಷಕ ಪ್ರವಾಸಿ ತಾಣವನ್ನಾಗಿಸುವುದು, ಮಲ್ಪೆ-ಇಂದ್ರಾಳಿ ಗೂಡ್ಸ್ ರೈಲ್ವೇ ಯೋಜನೆಯನ್ನು ಕಾರ್ಯರೂಪಕ್ಕೆ ತರುವುದು, 14 ಕನ್ಸೂಮರ್ ಮೀನುಗಾರರ ಡೀಸೆಲ್ ಮಾರಾಟ ಸೊಸೈಟಿಗಳ ಸಮಸ್ಯೆ ಪರಿಹಾರ, ಅಂತಾರಾಜ್ಯ ಮೀನುಗಾರರ ಸಮಸ್ಯೆ ಪರಿಹಾರಕ್ಕೆ ಏಕರೂಪ ಕಾನೂನು ಜಾರಿಯಾಗಲು ಸಮನ್ವಯ ಸಮಿತಿ ರಚಿಸುವುದು ಸಹಿತ ಹಲವಾರು ಬೇಡಿಕೆಗಳಿದ್ದು, ಇವುಗಳು ಈಡೇರಬೇಕಿದ್ದರೆ ಪ್ರಮೋದರಿಂದ ಮಾತ್ರ ಸಾಧ್ಯ ಎಂದರು.
ಮೀನು ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಸಾಧು ಸಾಲ್ಯಾನ್, ಅ.ಕ. ಮೀನುಗಾರರ ಕ್ರಿಯಾಸಮಿತಿ ಕಾರ್ಯಾಧ್ಯಕ್ಷ ಜಗನ್ನಾಥ ಕಡೆಕಾರ್, ಮಲ್ಪೆ ಮೀನುಗಾರರ ಸಂಘದ ಪ್ರ.ಕಾರ್ಯದರ್ಶಿ ಜಗನ್ನಾಥ ಅಮೀನ್, ಅ.ಕ. ಪರ್ಸಿನ್ ಮೀನುಗಾರರ ಸಂಘದ ಪ್ರಧಾನ ಕಾರ್ಯದರ್ಶಿ ಕೃಷ್ಣ ಸುವರ್ಣ, ಮಲ್ಪೆ ಆಳ ಸಮುದ್ರ ಮೀನುಗಾರರ ಸಂಘದ ಅಧ್ಯಕ್ಷ ಸುಭಾಷ್ ಎಸ್. ಮೆಂಡನ್, ಮಲ್ಪೆ ಪರ್ಸಿನ್ ಮೀನುಗಾರರ ಸಂಘದ ಅಧ್ಯಕ್ಷ ನಾಗರಾಜ್ ಸುವರ್ಣ, 370 ಟ್ರಾಲ್‌ಬೋಟ್ ಮೀನುಗಾರರ ಸಂಘದ ಅಧ್ಯಕ್ಷ ಮೋಹನ್ ಕುಂದರ್, ಆಳಸಮುದ್ರ ತಾಂಡೇಲರ ಸಂಘದ ಅಧ್ಯಕ್ಷ ರವಿರಾಜ್ ಸುವರ್ಣ, ಸಾಮಾಜಿಕ ಕಾರ್ಯಕರ್ತ ಯೋಗೀಶ್ ಸಾಲ್ಯಾನ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್
Gangavathi: ಕ್ಲಿಫ್ ಜಂಪಿಂಗ್ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.