Udupi: ಟಿಕೆಟ್ ರಹಿತ ಪ್ರಯಾಣ; ಇಬ್ಬರು ಅಪ್ರಾಪ್ತರು ವಶಕ್ಕೆ
Team Udayavani, Sep 14, 2024, 8:32 PM IST
ಸಾಂದರ್ಭಿಕ ಚಿತ್ರ
ಉಡುಪಿ: ರೈಲಿನಲ್ಲಿ ಪ್ರಯಾಣಚೀಟಿ ಇಲ್ಲದೆ, ದಿವ್ಯಾಂಗರಿಗೆ ಮೀಸಲಿಟ್ಟಿದ್ದ ಭೋಗಿಯಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ಬಾಲಕ-ಬಾಲಕಿಯನ್ನು ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಯಾಣಚೀಟಿ ತಪಾಸಣಾಧಿಕಾರಿ ಕೆ. ವಾಸುದೇವ್ ಪೈ ವಶಕ್ಕೆ ಪಡೆದುಕೊಂಡ ಘಟನೆ ಶುಕ್ರವಾರ ಇಂದ್ರಾಳಿಯ ರೈಲು ನಿಲ್ದಾಣದಲ್ಲಿ ನಡೆದಿದೆ.
ಮಕ್ಕಳನ್ನು ಕಾನೂನು ಪ್ರಕ್ರಿಯೆ ನಡೆಸಲು ರೈಲ್ವೇ ಆರ್.ಪಿ.ಎಫ್.ಸುಧೀರ್ ಶೆಟ್ಟಿ ಅವರ ಸಮ್ಮುಖದಲ್ಲಿ ಹಾಜರುಪಡಿಸಿದರು. ಬೆಂಗಳೂರು ಮೂಲದ ಇಬ್ಬರೂ ಸಹೋದರ, ಸಹೋದರಿಯರಾಗಿದ್ದರು. ಹೆತ್ತವರಿಗೆ ತಿಳಿಸದೆ ಮನೆಬಿಟ್ಟು ಬಂದಿದ್ದಾರೆ ಎನ್ನಲಾಗಿದೆ.
ವಿಚಾರಣೆ ಪ್ರಕ್ರಿಯೆಗಳು ಮುಗಿದ ಬಳಿಕ ರೈಲ್ವೇ ಪೊಲೀಸರು ಹೆತ್ತವರಿಗೆ ಮಾಹಿತಿ ನೀಡಿದ್ದು, ಮಕ್ಕಳನ್ನು ನಿಟ್ಟೂರಿನಲ್ಲಿರುವ ಮಕ್ಕಳ ಕಲ್ಯಾಣ ಸಮಿತಿಗೆ ಮಕ್ಕಳ ರಕ್ಷಣಾ ಘಟಕಕ್ಕೆ ಒಪ್ಪಿಸಿದ್ದಾರೆ. ಕಾರ್ಯಾಚರಣೆಗೆ ಸಮಾಜಸೇವಕ ನಿತ್ಯಾನಂದ ಒಳಕಾಡು ನೆರವಾದರು. ಕಾನೂನು ಪ್ರಕ್ರಿಯೆ ಸಂದರ್ಭ ತನಿಖಾಧಿಕಾರಿ ಜಿನಾ ಪಿಂಟೋ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.