ಸಕಾಲ ಸೇವೆ, ಯೋಜನೆ ಹೊರಗೆ ವಿತರಿಸಿದರೆ ಮೊಕದ್ದಮೆ: ಎಡಿಸಿ
Team Udayavani, Sep 19, 2019, 5:56 AM IST
ಉಡುಪಿ: ಸಾರ್ವಜನಿಕರಿಗೆ ಸಕಾಲದಲ್ಲಿ ಯೋಜನೆಯಲ್ಲಿ ಅಳವಡಿಸಿರುವ ಸೇವೆಗಳನ್ನು ಸಕಾಲ ತಂತ್ರಾಂಶದ ಮೂಲಕವೇ ಸ್ವೀಕರಿಸಿ, ಸೇವೆಗಳನ್ನು ಒದಗಿಸಬೇಕು. ಸಕಾಲ ತಂತ್ರಾಂಶವನ್ನು ಬೈಪಾಸ್ ಮಾಡಿ ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸಿದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಸಕಾಲ ಸೇವೆಗಳ ಅಧಿನಿಯಮದ ಸಮರ್ಪಕ ಅನುಷ್ಠಾನದ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಸರಕಾರವು ಸಾರ್ವಜನಿಕರಿಗೆ ಶೀಘ್ರದಲ್ಲಿ ಅಗತ್ಯ ಸೇವೆಗಳು ದೊರೆಯುವ ಉದ್ದೇಶದಿಂದ ಸಕಾಲ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಯಿಂದ ಪಡೆಯುವ ದಾಖಲೆಗಳಿಗೆ ಅಧಿಕೃತ ಮಾನ್ಯತೆ ಸಹ ಇರುವುದರಿಂದ, ಸಾರ್ವಜನಿಕರಿಗೆ ಸಕಾಲ ತಂತ್ರಾಂಶದ ಮೂಲಕವೇ ನಿಗದಿಪಡಿಸಿರುವ ಸೇವೆಗಳನ್ನು ಒಗದಿಸಬೇಕು. ನಿಗದಿಪಡಿಸಿದ ಸೇವೆಗಳನ್ನು ಸಕಾಲ ತಂತ್ರಾಂಶದ ಮೂಲಕ ನೀಡದೇ ಬೈಪಾಸ್ ಮಾಡುವ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ಅವರು ತಿಳಿಸಿದರು.
ಸಕಾಲ ವ್ಯಾಪ್ತಿಯಲ್ಲಿ ಬಹುತೇಕ ಎಲ್ಲಾ ಇಲಾಖೆಗಳ ಸೇವೆಗಳು ಲಭ್ಯವಿದ್ದು, ಸಕಾಲ ತಂತ್ರಾಂಶದ ಮೂಲಕ ಈ ಸೇವೆಗಳನ್ನು ಒದಗಿಸದೇ ಇದ್ದಲ್ಲಿ ಅಂತಹ ಇಲಾಖೆಯ ಪ್ರಗತಿ ಶೂನ್ಯ ದಾಖಲಾಗಲಿದ್ದು, ಆಗಸ್ಟ್ ತಿಂಗಳಲ್ಲಿ ಜಿಲ್ಲೆಯ 98 ಗ್ರಾ.ಪಂ.ಗಳು ಸಕಾಲ ತಂತ್ರಾಂಶದ ಮೂಲಕ ಯಾವುದೇ ಸೇವೆ ನೀಡದ ಕಾರಣ ಶೂನ್ಯ ಪ್ರಗತಿಯಾಗಿದ್ದು, ಅಂತಹ ಪಂಚಾಯತ್‌ಗಳಿಗೆ ನೋಟೀಸ್ ನೀಡಲಾಗಿದೆ.
ರಾಜ್ಯ ಮಟ್ಟದಲ್ಲಿ ಯಾವುದೇ ಯೋಜನೆಯ ಪ್ರಗತಿ ಪರಿಶೀಲನೆ ಸಂದರ್ಭದಲ್ಲಿ, ಉಡುಪಿ ಜಿಲ್ಲೆ ರಾಜ್ಯಕ್ಕೆ ಮಾದರಿಯಾಗಿದೆ. ಆದರೆ ಸಕಾಲ ಅರ್ಜಿ ಪ್ರಗತಿಯಲ್ಲಿ ಕೆಲವು ತಿಂಗಳಿಂದ ಅಗ್ರಸ್ಥಾನ ಪಡೆಯುವಲ್ಲಿ ವಿಫಲವಾಗಿದೆ.
ರಾಜ್ಯದ ಸಕಾಲ ಮಿಶನ್ ಅಧಿಕಾರಿಗಳು ರಾಜ್ಯದ್ಯಾಂತ ಎಲ್ಲ ಕಚೇರಿಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಅವರು ಭೇಟಿ ನೀಡಿ ಪರಿಶೀಲನೆ ನಡೆಸುವ ವೇಳೆ, ಯಾವುದೇ ಇಲಾಖೆಯಲ್ಲಿ ಸಕಾಲ ಸೇವೆಯನ್ನು ಒದಗಿಸುವಲ್ಲಿ ಲೋಪ ಕಂಡುಬರಬಾರದು ಎಂದು ಎಡಿಸಿ ಹೇಳಿದರು. ಸಭೆಯಲ್ಲಿ ಜಿಲ್ಲೆಯ ಎಲ್ಲ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.