“ಅಪರಾಧ ತಡೆಗಟ್ಟಲು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಿ’
Team Udayavani, Mar 28, 2019, 6:30 AM IST
ಮಲ್ಪೆ: ಮೂಡಬೆಟ್ಟು ಯುವಕ ಮಂಡಲ ಮತ್ತು ನವಸುಮ ರಂಗಮಂಚ ಕೊಡವೂರು ಇದರ ಜಂಟಿ ಆಶ್ರಯದಲ್ಲಿ ಪೊಲೀಸ್ ಜನಸಂಪರ್ಕ ಸಭೆ ಮಾ. 24ರಂದು ಮೂಡಬೆಟ್ಟು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿತು.
ಮಲ್ಪೆ ಪೊಲೀಸ್ ಠಾಣೆಯ ಪ್ರೊಬೆಷನರಿ ಉಪ ನಿರೀಕ್ಷಕಿ ಸುಮಾ ಆಚಾರ್ಯ ಮಾತನಾಡಿ, ಅಪರಾಧ ತಡೆಯಬೇಕಾದರೆ ಪೊಲೀಸ್ ಇಲಾಖೆಯೊಂದಿಗೆ ಗ್ರಾಮಸ್ಥರ ಸಹಕಾರ ಅಗತ್ಯ. ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ, ಅಪರಾಧ ಹಾಗೂ ಕಾನೂನುಬಾಹಿರ ಚಟುವಟಿಕೆಯಲ್ಲಿ ತೊಡಗಿರುವ ಬಗ್ಗೆ ಸುಳಿವು ಸಿಕ್ಕಲ್ಲಿ ಠಾಣೆಗೆ ಮಾಹಿತಿ ನೀಡಿದರೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಸಾಧ್ಯ. ಆಂಗಡಿ ಮುಂಗಟ್ಟುಗಳಲ್ಲಿ ಸಿಸಿಟಿವಿಗಳನ್ನು ಅಳವಡಿಸಿಕೊಂಡಲ್ಲಿ ಕಳ್ಳತನ ತಡೆಯಲು ಸಾಧ್ಯವಾಗಬಹುದು, ಈಗಾಗಲೇ ಚುನಾವಣ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಕಾನೂನು ಉಲ್ಲಂಘನೆ ಮಾಡಬಾರದು ಎಂದರು.
ಯುವಕ ಮಂಡಲದ ಅಧ್ಯಕ್ಷ ಜಗದೀಶ್ ಅಮೀನ್ ಅಧ್ಯಕ್ಷತೆ ವಹಿಸಿದ್ದರು. ಪೊಲೀಸ್ ಸಹಾಯಕ ಉಪ ನಿರೀಕ್ಷಕರಾದ ಜನಾರ್ದನ್, ಸುಧಾಕರ, ನಗರಸಭಾ ಸದಸ್ಯ ಶ್ರೀಶ ಕೊಡವೂರು ಆದಿವುಡುಪಿ ಮಸೀದಿಯ ಮುಖ್ಯಸ್ಥ ಪೀರು ಸಾಹೇಬ್, ಕಲ್ಮಾಡಿ ಸ್ಟೆಲ್ಲಾ ಮೇರೀಸ್ ಚರ್ಚ್‌ನ ಸಂಜಯ ಮೆಲ್ವಿನ್ ಅಂದ್ರಾದೆ, ಶಾಲಾ ಮುಖ್ಯೋಪಾಧ್ಯಾಯಿನಿ ಸುಲೋಚನಾ ಬಾಯಿ ಉಪಸ್ಥಿತರಿದ್ದರು.
ಜಗದೀಶ್ ಅಮೀನ್ ಸ್ವಾಗತಿದರು. ಕಾರ್ಯದರ್ಶಿ ಫಾರೂಕ್ ಅಹಮದ್ ನಿರೂಪಿಸಿ, ನವಸುಮದ ಅಧ್ಯಕ್ಷ ಬಾಲಕೃಷ್ಣ ಕೊಡವೂರು ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ
Malpe: ಆಯತಪ್ಪಿ ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ
Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್
MUST WATCH
ಹೊಸ ಸೇರ್ಪಡೆ
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.