ಟೋಲ್ ಸಭೆ ಸಚಿವೆ ಜಯಮಾಲಾ ಬೇಜವಾಬ್ದಾರಿ ಹೇಳಿಕೆ: ಭಟ್
Team Udayavani, Dec 1, 2018, 10:02 AM IST
ಉಡುಪಿ: ಸ್ಥಳೀಯರಿಗೆ ಟೋಲ್ ವಿನಾಯಿತಿ ವಿಚಾರ ಕೇಂದ್ರ ಸರಕಾರದ ಕೈಯಲ್ಲಿದೆ ಎಂದು ಸಚಿವೆ ಜಯಮಾಲಾ ಅವರು ನೀಡಿರುವ ಪ್ರತಿಕ್ರಿಯೆ ಬೇಜವಾಬ್ದಾರಿತನದ್ದು ಎಂದು ಉಡುಪಿ ಶಾಸಕ ರಘುಪತಿ ಭಟ್ ಟೀಕಿಸಿದ್ದಾರೆ.
ಜಯಮಾಲಾ ಅವರು ಲೋಕೋಪಯೋಗಿ ಸಚಿವ ರೇವಣ್ಣ ಸಮಕ್ಷಮದಲ್ಲಿ ಕರೆದ ಟೋಲ್‌ಗೇಟ್ ಸಭೆ ವಿಫಲವಾಗಿದೆ. ರೇವಣ್ಣ ಅವರು ಕನಿಷ್ಠ 10 ಕಿ.ಮೀ. ವ್ಯಾಪ್ತಿಯ ಸ್ಥಳೀಯರಿಗೆ ವಿನಾಯಿತಿ ಕೊಡಿ ಎಂಬ ಬೇಡಿಕೆ ಸಲ್ಲಿಸುವ ಬದಲು ಕೇಂದ್ರ ಸರಕಾರವನ್ನು ದೂರಿದ್ದಾರೆ. ಗುತ್ತಿಗೆದಾರರ ಪರ ವಕಾಲತ್ತು ಮಾಡಿದ್ದಾರೆ. ರಾಜ್ಯದ ವಿವಿಧೆಡೆ ಸ್ಥಳೀಯರಿಗೆ ಟೋಲ್ ವಿನಾಯಿತಿ ನೀಡಿರುವುದನ್ನು ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಲ್ಲೇಖೀಸಿದಾಗ ಸಚಿವ ರೇವಣ್ಣ ಅಧಿಕಾರಿಯ ಮಾತನ್ನು ತಡೆದು “ನಿಮಗೆ ಅಧಿಕಾರ ಕೊಟ್ಟವರಾರು?’ ಎಂದು ಬೆದರಿಸಿದ್ದಾರೆ. ಟೋಲ್ ಸ್ಥಳೀಯ ಸಮಸ್ಯೆಯಾಗಿದೆ. ಉಡುಪಿ ಜಿಲ್ಲಾಡಳಿತ ನೂರಾರು ಪೊಲೀಸರನ್ನು ನಿಯೋಜಿಸಿ ಜನರ ಮೇಲೆ ದಬ್ಟಾಳಿಕೆ ಮಾಡುವುದನ್ನು ಸಹಿಸಲಾಗದು. ಜಿಲ್ಲಾಡಳಿತವೇ ಎದುರು ನಿಂತು ಸ್ಥಳೀಯರಿಂದ ಟೋಲ್ ಸಂಗ್ರಹ ಮುಂದುವರಿಸಿದರೆ ಸಂಸದರ ಜತೆಗೆ ಜಿಲ್ಲೆಯ ಎಲ್ಲ 5 ಶಾಸಕರು ಸೇರಿ ಹೋರಾಟ ನಡೆಸಲಿದ್ದೇವೆ ಎಂದು ಶಾಸಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.