ಎಸೆಸೆಲ್ಸಿಯಲ್ಲೂ ಟಾಪರ್, ಪಿಯುಸಿಯಲ್ಲೂ ಟಾಪರ್
Team Udayavani, May 1, 2018, 10:17 AM IST
ಕುಂದಾಪುರ: ತರಗತಿಯ ಪಾಠ ಮಾತ್ರ, ಯಾವುದೇ ಟ್ಯೂಶನ್‌ಗೆ ಹೋಗಿಲ್ಲ. ನಿರಂತರ ಓದೇ ಗರಿಷ್ಠ ಅಂಕ ಪಡೆಯಲು ಸಾಧ್ಯವಾಯ್ತು! ಇದು ವಾಣಿಜ್ಯ ವಿಭಾಗದಲ್ಲಿ 594 ಅಂಕ ಪಡೆದು ರಾಜ್ಯದಲ್ಲೇ ದ್ವಿತೀಯ ಸ್ಥಾನ ಪಡೆದ ಬಸ್ರೂರಿನ ವೆಂಕಟೇಶ ಪುರಾಣಿಕ್ ಬಿ. ಅವರ ಸಾಧನೆ.
ಎಸ್ಸೆಸ್ಸೆಲ್ಸಿಯಲ್ಲಿ 4ನೇ ಸ್ಥಾನಿ
ಬಸ್ರೂರಿನ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಯಾಗಿದ್ದ ವೆಂಕಟೇಶ ಎಸೆಸೆಲ್ಸಿ ಯಲ್ಲಿ 622 ಅಂಕ ಗಳಿಸಿ ರಾಜ್ಯಕ್ಕೆ 4 ನೇ ಸ್ಥಾನಿಯಾಗಿದ್ದ. ಈಗ ಕುಂದಾಪುರದ ಆರ್.ಎನ್. ಶೆಟ್ಟಿ ಪ.ಪೂ. ಕಾಲೇಜಿನ ವಿದ್ಯಾರ್ಥಿಯಾಗಿ ಅದಕ್ಕೂ ಮಿಕ್ಕ ಸಾಧನೆ ಮಾಡಿದ್ದಾರೆ.
ಉತ್ತಮ ಅಂಕದ ನಿರೀಕ್ಷೆಯಿತ್ತು
ವೃತ್ತಿಯಲ್ಲಿ ಅರ್ಚಕರಾಗಿರುವ ಸುಬ್ರ ಹ್ಮಣ್ಯ ಪುರಾಣಿಕ ಹಾಗೂ ಅನ್ನಪೂರ್ಣ ದಂಪತಿಯ ಪುತ್ರ ವೆಂಟಕೇಶ ಅವರ ಬಗ್ಗೆ ಹೆತ್ತವರು ಖುಷಿಯಾಗಿದ್ದಾರೆ. ಈ ಬಗ್ಗೆ ಮಾತನಾಡಿದ ಸುಬ್ರಹ್ಮಣ್ಯ ಪುರಾಣಿಕ್ ಅವರು, ಅವನ ಉತ್ತಮ ಪ್ರಯತ್ನ, ದೇವರ ಆಶೀರ್ವಾದದಿಂದ ಈ ಸಾಧನೆ ಒಲಿದಿದೆ. ತುಂಬಾ ಖುಷಿಯಾಗಿದೆ. ಎಸ್ಸೆಸ್ಸೆಲ್ಸಿಯಲ್ಲೂ ಒಳ್ಳೆ ಫಲಿತಾಂಶ ಬಂದಿತ್ತು. ಈ ಬಾರಿಯೂ ಚೆನ್ನಾಗಿ ಬರೆದಿದ್ದಾನೆ ಎಂದು ಹೇಳಿದ್ದ. ಉತ್ತಮ ಅಂಕ ಪಡೆಯುವ ವಿಶ್ವಾಸವಿತ್ತು. ಆದರೆ ರಾಜ್ಯಕ್ಕೆ ಎರಡನೇ ಸ್ಥಾನ ಬರುತ್ತದೆ ಎನ್ನುವ ನಿರೀಕ್ಷೆಯಿರಲಿಲ್ಲ ಎಂದರು. ಪ್ರಯತ್ನ ಫಲ ಕೊಟ್ಟಿದೆ ಎನ್ನುವುದು ತಾಯಿ ಅನ್ನಪೂರ್ಣ ಅವರ ಅಭಿಮಾನದ ಮಾತು.
ಸಿಎ ಮಾಡುವಾಸೆ
590 ಕ್ಕಿಂತ ಮೇಲೆ ಬರಬಹುದು ಅನ್ನುವ ನಿರೀಕ್ಷೆಯಿತ್ತು. ಆದರೆ ಇಷ್ಟು ಅಂಕಗಳ ನಿರೀಕ್ಷೆ ಇರಲಿಲ್ಲ. ಸತತ ಪರಿಶ್ರಮ ಫಲ ಕೊಟ್ಟಿರುವುದಕ್ಕೆ ತುಂಬಾ ಖುಷಿಯಾಗಿದೆ.
ವೆಂಕಟೇಶ ಪುರಾಣಿಕ, ಸಾಧಕ ವಿದ್ಯಾರ್ಥಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal: ಡಂಪಿಂಗ್ ಯಾರ್ಡ್ ಆದ ಮಣ್ಣಪಳ್ಳ!
Udupi: ಒಂದೇ ವೃತ್ತ; ಪೊಲೀಸ್ ಚೌಕಿ 5!; ಕಲ್ಸಂಕ ಜಂಕ್ಷನ್‌ನಲ್ಲಿ ಮುಗಿಯದ ಸಂಚಾರ ಸಮಸ್ಯೆ
Karkala: ಶಿರ್ಲಾಲು ಪರಿಸರದಲ್ಲಿ ಒಂದೇ ಟವರ್; ಮಾತನಾಡಲು ಮುಖ್ಯ ರಸ್ತೆಗೇ ಬರಬೇಕು!
Trasi: ಸಾಂಪ್ರದಾಯಿಕ ಮೀನುಗಾರರಿಂದ ಬೃಹತ್ ಪ್ರತಿಭಟನೆ; ಗಂಟಿಹೊಳೆ, ಗೋಪಾಲ ಪೂಜಾರಿ ಭಾಗಿ
Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
Power Prayers: ಡಿಸಿಎಂ ಟೆಂಪಲ್ ರನ್ ವಿಚಾರ; ಎಚ್‌ಡಿಕೆ ವ್ಯಂಗ್ಯ, ಡಿಕೆಶಿ ಪ್ರತ್ಯುತ್ತರ
BBK11: ದೈತ್ಯ ಸ್ಪರ್ಧಿಗಳನ್ನು ಸೋಲಿಸಿ ಫಿನಾಲೆಗೆ ಎಂಟ್ರಿ ಕೊಟ್ಟ ಹಳ್ಳಿಹೈದ ಹನುಮಂತು
Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ
POCO X7 5G; ಇದೀಗ ತಾನೆ ಬಿಡುಗಡೆಯಾದ ಫೋನ್ ನಲ್ಲಿ ಏನೇನಿದೆ?
Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.