ಸರಕಾರಿ ಶಾಲಾ ಗೋಡೆಯಲ್ಲಿ ಸಂಚಾರ ಜಾಗೃತಿ ಪೋಸ್ಟರ್‌


Team Udayavani, Jul 18, 2019, 5:24 AM IST

traffic1

ತೆಕ್ಕಟ್ಟೆ: ಧಾವಂತದ ಬದುಕಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಅಪಘಾತದಲ್ಲಿ ಅದೆಷ್ಟೋ ಅಮಾಯಕ ಜೀವಗಳು ಬಲಿಯಾಗುತ್ತಿದೆ. ರಸ್ತೆ ಸುರಕ್ಷೆಯ ದೃಷ್ಟಿಯಿಂದ ಸಂಚಾರಿ ನಿಯಮಗಳನ್ನು ಕೂಡಾ ಕಟ್ಟುನಿಟ್ಟಾಗಿ ಪಾಲಿಸಬೇಕು ಎನ್ನುವ ಸುಪ್ರೀಂಕೋರ್ಟ್‌ ಆದೇಶದನ್ವಯ ಜಿಲ್ಲಾಧಿಕಾರಿಗಳ ಮಾರ್ಗದರ್ಶನದಂತೆ ರಾ.ಹೆ. 66ರ ಸಮೀಪ ಹಾಗೂ ಗ್ರಾಮೀಣ ಭಾಗದಲ್ಲಿರುವ ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ನಿಟ್ಟಿನಿಂದ ಶಾಲಾ ಗೋಡೆಗಳ ಮೇಲೆ ಸಂಚಾರಿ ಜಾಗೃತಿ ಪೋಸ್ಟರ್‌ಗಳ ಬಣ್ಣದ ಚಿತ್ತಾರಗಳನ್ನು ಚಿತ್ರಕಲಾ ಶಿಕ್ಷಕರ ತಂಡ ತಾಲೂಕಿನಾದ್ಯಂತ ಅನಾವರಣಗೊಳಿಸುತ್ತಿದ್ದಾರೆ.

ಅಮಾಯಕರು ಬಲಿಯಾಗದಿರಲಿ

ಜನರು ಸಂಚಾರಿ ನಿಯಮಗಳನ್ನು ಪಾಲಿಸದಿರುವುದೇ ಅಪಘಾತಗಳಿಗೆ ಮುಖ್ಯ ಕಾರಣ. ವಾಹನದಲ್ಲಿ ಸಂಚಾರ ಮಾಡುವ ಸಂದರ್ಭದಲ್ಲಿ ರಸ್ತೆ ನಿಯಮಗಳನ್ನು ಉಲ್ಲಂಘಿಸುವ ಪರಿಣಾಮವಾಗಿ ಇಂದು ಅದೆಷ್ಟೋ ಅಮಾಯಕರು ತಮ್ಮದಲ್ಲದ ತಪ್ಪಿಗೆ ದಾರುಣವಾಗಿ ಬಲಿಯಾಗುತ್ತಿರುವುದು ಆಘಾತಕಾರಿ ವಿಷಯ. ಇಂತಹ ಗಂಭೀರ ಸಮಸ್ಯೆಗಳಿಗೆ ಪರಿಹಾರ ಹುಡುಕುವ ನಿಟ್ಟಿನಿಂದ ಸುಪ್ರೀಂ ಕೋರ್ಟ್‌ ಗಂಭೀರವಾಗಿ ಪರಿಗಣಿಸಿ, ತೀವ್ರ ತರಾಟೆಗೆ ತೆಗೆದುಕೊಂಡ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಸರಕಾರ ಹಾಗೂ ಸಾರಿಗೆ ಇಲಾಖೆಗಳು ಪರಿಹಾರ ಹುಡುಕುವ ನಿಟ್ಟಿನಿಂದ ಶಿಕ್ಷಣ ಇಲಾಖೆಯ ಜತೆ ಕೈಜೋಡಿಸಿದೆ.

ಶಾಲಾ ಹಂತದಲ್ಲಿಯೇ ವಿದ್ಯಾರ್ಥಿಗಳಿಗೆ ರಸ್ತೆ ನಿಯಮ ಗಳು ಹಾಗೂ ಅದರ ಮಹತ್ವದ ಬಗೆಗೆ ಅರಿವು ಮೂಡಿಸುವ ನಿಟ್ಟಿನಿಂದ ಉಡುಪಿ ಜಿಲ್ಲೆಯ ಶಿಕ್ಷಕರ ತಂಡ ತಮ್ಮ ಕಲಾ ಕುಂಚದ ಮೂಲಕ ಆಕರ್ಷಕ ಚಿತ್ತಾರವನ್ನು ಅಭಿವ್ಯಕ್ತಗೊಳಿಸುತ್ತಿದ್ದಾರೆ.

ಈಗಾಗಲೇ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೇಳೂರು, ಕೆದೂರು, ತೆಕ್ಕಟ್ಟೆ, ಕುಂಭಾಸಿ, ವಕ್ವಾಡಿ, ನೂಜಿ, ಸಿದ್ದಾಪುರ, ಶಂಕರನಾರಾಯಣ ಸುತ್ತಮುತ್ತಲಿನ ಸರಕಾರಿ ಶಾಲೆಯ ಗೋಡೆಗಳ ಮೇಲೆ ತಾಲೂಕಿನ ಸರಕಾರಿ ಶಾಲಾ ಚಿತ್ರಕಲಾ ಶಿಕ್ಷಕರ ತಂಡವೊಂದು ರಸ್ತೆ ನಿಯಮಗಳು ಮಕ್ಕಳ ಮನಸ್ಸಿಗೆ ಇಳಿಯುವಂತೆ ಮಾಡುವ ವಿನೂತನ ಪ್ರಯತ್ನ ನಡೆಸುವಲ್ಲಿ ಕಾರ್ಯನಿರತರಾಗಿದ್ದಾರೆ.

ನಿಯಮ ಪಾಲಿಸಿ

ವಿದ್ಯಾರ್ಥಿಗಳಿಗೆ ಶಿಕ್ಷಣದೊಂದಿಗೆ ಸಂಚಾರಿ ನಿಯಮಗಳನ್ನು ಕೂಡ ಕಟ್ಟುನಿಟ್ಟಾಗಿ ಪಾಲಿಸಬೇಕು ಎನ್ನುವ ಅರಿವು ಮೂಡಿಸಿದಾಗ ಭವಿಷ್ಯದಲ್ಲಿ ಇಡೀ ಸಮಾಜ ಜಾಗೃತವಾಗುವುದು. ಪ್ರತಿಯೊಬ್ಬರಲ್ಲೂ ಸಂವಿಧಾನ ಹಾಗೂ ಕಾನೂನಿಗೆ ಗೌರವ ನೀಡುವ ಮನೋಭಾವ ಬೆಳೆದಾಗ ಮಾತ್ರ ಅಪರಾಧ ಪ್ರಕರಣಗಳು ಕಡಿಮೆಯಾಗಿ ಸದೃಢ ರಾಷ್ಟ್ರ ನಿರ್ಮಾಣವಾಗುವುದು.
– ಪುಷ್ಪಾ ,ಉಪ ನಿರೀಕ್ಷಕರು, ಸಂಚಾರಿ ಪೊಲೀಸ್‌ ಠಾಣೆ ಕುಂದಾಪುರ

ಅರಿವು ಕಾರ್ಯ

ರಸ್ತೆ ಸುರಕ್ಷಾ ಅರಿವು ಮೂಡಿಸಲು ಶಿಕ್ಷಣ ಇಲಾಖೆಗೆ ಜವಾಬ್ದಾರಿ ನೀಡಿದೆ. ತಾಲೂಕಿನಲ್ಲಿ ವಿದ್ಯಾರ್ಥಿಗಳಿಗೆ ಆರಕ್ಷಕ ರಿಂದ ಮಾಹಿತಿ, ಚಿತ್ರಕಲಾ ಶಿಕ್ಷಕರಿಂದ ಪೋಸ್ಟರ್‌ ರಚನೆ ಹಾಗೂ ವಿವಿಧ‌ ಸ್ಪರ್ಧೆಗಳ ಮೂಲಕ 3 ಹಂತದಲ್ಲಿ ಅರಿವು ಮೂಡಿಸುವ ಕಾರ್ಯವಾಗುತ್ತಿದೆ. ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಮುಂದಿನ ದಿನಗಳಲ್ಲಿ ಯಕ್ಷಗಾನ, ಗೊಂಬೆಯಾಟಗಳ ಮೂಲಕ ವಿದ್ಯಾರ್ಥಿಗಳಿಗೆ ರಸ್ತೆ ನಿಯಮಗಳು ಹಾಗೂ ಅದರ ಮಹತ್ವದ ಬಗೆಗೆ ಅರಿವು ಮೂಡಿಸುವ ಮಹತ್ವಾಕಾಂಕ್ಷಿ ಯೋಜನೆಗಳಿವೆೆ. ಈಗಾಗಲೇ ಸರಕಾರಿ ಶಾಲಾ ಚಿತ್ರಕಲಾ ಶಿಕ್ಷಕರು ಎರಡು ತಂಡ ತಾಲೂಕಿನ ಸರಕಾರಿ ಶಾಲಾ ಮುಂಭಾಗದ ಗೋಡೆಗಳ ಮೇಲೆ ಮಕ್ಕಳನ್ನು ಸೆಳೆಯುವ ರೀತಿಯಲ್ಲಿ ಕಲಾತ್ಮಕವಾಗಿ ಪೋಸ್ಟರ್‌ಗಳನ್ನು ರಚಿಸಿದ್ದಾರೆ.
– ಅಶೋಕ್‌ ಕಾಮತ್‌, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕುಂದಾಪುರ

ಉತ್ತಮ ಪ್ರತಿಕ್ರಿಯೆ

ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಕಾರದಿಂದ ತಾಲೂಕಿನ ಸರಕಾರಿ ಚಿತ್ರಕಲಾ ಶಿಕ್ಷಕರ ಎರಡು ತಂಡಗಳನ್ನು ರಚಿಸಿಕೊಂಡು ಈಗಾಗಲೇ ಗೋಡೆಗಳ ಮೇಲೆ ಅನಾವರಣಗೊಂಡ ಸಂಚಾರಿ ಜಾಗೃತಿ ಪೋಸ್ಟರ್‌ಗಳನ್ನು ತೈಲವರ್ಣದಿಂದ ರಚಿಸಿದ್ದೇವೆ. ಕಳೆದ ಹತ್ತು ದಿನಗಳಿಂದಲೂ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದು ವಿದ್ಯಾರ್ಥಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
– ಶಿವಾನಂದ ಸ್ವಾಮಿ,ಚಿತ್ರಕಲಾ ಶಿಕ್ಷಕರು, ಸರಕಾರಿ ಪ್ರೌಢಶಾಲೆ ಕೆದೂರು. (ತಂಡದ ಪ್ರಮುಖರು)
– ಟಿ. ಲೋಕೇಶ್ ಆಚಾರ್ಯ ತೆಕ್ಕಟ್ಟೆ

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.