ಗಾಳಿ ಮಳೆ: ಕಾಪು – ಶಿರ್ವ ರಸ್ತೆಗೆ ಮರ ಬಿದ್ದು ಸಂಚಾರ ಸ್ಥಗಿತ
Team Udayavani, Jun 15, 2021, 9:13 AM IST
ಕಾಪು: ಕಾಪು- ಶಿರ್ವ ರಸ್ತೆಗೆ ಮರ ಬಿದ್ದು ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡ ಘಟನೆ ಮಂಗಳವಾರ ಮುಂಜಾನೆ ನಡೆದಿದೆ.
ಮಂಗಳವಾರ ಮುಂಜಾನೆ ಬೀಸಿದ ಭಾರೀ ಗಾಳಿ ಮಳೆಯಿಂದಾಗಿ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ಸಮೀಪದಲ್ಲಿ ರಸ್ತೆಗೆ ಮರ ಬಿದ್ದಿದ್ದು, ಕಾಪು – ಶಿರ್ವ ನಡುವಿನ ಸಂಚಾರಕ್ಕೆ ತಡೆಯುಂಟಾಗಿದೆ.
ಇದನ್ನೂ ಓದಿ:ಮರವೂರು ಸೇತುವೆ ಬಿರುಕು: ಬಜಪೆ ವಿಮಾನ ನಿಲ್ದಾಣಕ್ಕೆ ಹೋಗುವವರಿಗೆ ಇಲ್ಲಿದೆ ರಸ್ತೆ ಮಾಹಿತಿ
ಇದರಿಂದಾಗಿ ಕಾಪು – ಶಿರ್ವ ರಸ್ತೆಯಲ್ಲಿ ಸಂಚರಿಸುವ ಮತ್ತು ಮಜೂರು, ಮಲ್ಲಾರು, ಚಂದ್ರನಗರ, ಬೆಳಪು, ಕಳತ್ತೂರು ಸಹಿತ ವಿವಿಧೆಡೆಗಳಿಂದ ಕಾಪುವಿಗೆ ಆಗಮಿಸುವ ನಾಗರಿಕರಿಗೆ ಭಾರೀ ತೊಂದರೆಯುಂಟಾಗಿದೆ.
ಮರಬಿದ್ದು, ಸಂಚಾರಕ್ಕೆ ತಡೆಯುಂಟಾಗಿರುವ ಬಗ್ಗೆ ಮಾಹಿತಿ ಪಡೆದ ಸ್ಥಳೀಯ ಸಮಾಜ ಸೇವಕ ಪ್ರಶಾಂತ್ ಪೂಜಾರಿ ಕೊಂಬಗುಡ್ಡೆ, ಉಮೇಶ್ ಶೆಟ್ಟಿ, ನಾಗೇಶ್ ಭಂಡಾರಿ ಸಹಿತ ಸ್ಥಳೀಯರು ಮರವನ್ನು ತೆರವುಗೊಳಿಸಿ, ಸಂಚಾರಕ್ಕೆ ಅನುವು ಮಾಡಿ ಕೊಡಲು ಶ್ರಮಿಸುತ್ತಿದ್ದಾರೆ.
ಇದನ್ನೂ ಓದಿ:ಬಿರುಕು ಬಿಟ್ಟ ಮರವೂರು ಸೇತುವೆ: ಸಂಚಾರ ನಿರ್ಬಂಧ; ಬದಲಿ ರಸ್ತೆ ವ್ಯವಸ್ಥೆ
ಅರಣ್ಯ ರಕ್ಷಕ ಮಂಜುನಾಥ ಸ್ಥಳಕ್ಕೆ ಭೇಟಿ ನೀಡಿದ್ದು, ಕಾಪು ಪೊಲೀಸರು ಸಂಚಾರ ನಿಯಂತ್ರಣದಲ್ಲಿ ಸಹಕರಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.