ಡಿಸೆಂಬರ್ ಪೂರ್ತಿ ಕ್ಷಯರೋಗದ ಪತ್ತೆ, ಚಿಕಿತ್ಸೆ ಅಭಿಯಾನ
2025ರೊಳಗೆ ಕ್ಷಯರೋಗ ನಿರ್ಮೂಲನೆ ಸಂಕಲ್ಪ
Team Udayavani, Dec 1, 2020, 5:03 AM IST
ಉಡುಪಿ: ಕೇಂದ್ರ ಸರಕಾರ 2025ರೊಳಗೆ ಕ್ಷಯರೋಗ ನಿರ್ಮೂಲನೆ ಮಾಡುವ ಸಂಕಲ್ಪ ಮಾಡಿದ್ದು ಅದರಂತೆ ಸಾಮಾಜಿಕ ಹಾಗೂ ಆರ್ಥಿಕ ದುರ್ಬಲ ವರ್ಗದವರನ್ನು ಕೇಂದ್ರೀಕೃತವಾಗಿರಿಸಿಕೊಂಡು ಕ್ಷಯರೋಗ ಪ್ರಕರಣಗಳನ್ನು ಪತ್ತೆಹಚ್ಚಿ ಚಿಕಿತ್ಸೆ ನೀಡುವ ಆಂದೋಲನವನ್ನು ವರ್ಷಕ್ಕೆ ಜುಲೈ ಹಾಗೂ ಡಿಸೆಂಬರ್ ತಿಂಗಳಿನಲ್ಲಿ 15 ದಿನಗಳಂತೆ ಎರಡು ಬಾರಿ ಹಮ್ಮಿಕೊಳ್ಳಲಾಗುತ್ತದೆ. ಆದರೆ ಈಬಾರಿ ಕೊರೊನಾ ಕಾರಣದಿಂದಾಗಿ ಒಂದೇ ಬಾರಿ ಒಂದು ತಿಂಗಳುಗಳ ಕಾಲ ಹಮ್ಮಿಕೊಳ್ಳಲಾಗುತ್ತಿದೆ.
ಡಿ. 1ರಿಂದ ಆರಂಭಗೊಂಡು 31ರ ವರೆಗೆ ಆಂದೋಲನ ನಡೆಯಲಿದೆ. ಉಡುಪಿ ಜಿಲ್ಲೆಯಲ್ಲಿ ಮೊದಲ ವಾರದಲ್ಲಿ ಉಡುಪಿ ಮತ್ತು ಬ್ರಹ್ಮಾವರ ತಾಲೂಕು, ದ್ವಿತೀಯ ವಾರದಲ್ಲಿ ಕಾಪು ಮತ್ತು ಬೈಂದೂರು ತಾಲೂಕು, ತೃತೀಯ ವಾರದಲ್ಲಿ ಕಾರ್ಕಳ ಹಾಗೂ ನಾಲ್ಕನೇ ವಾರದಲ್ಲಿ ಕುಂದಾಪುರದಲ್ಲಿ ತಪಾಸಣೆ ನಡೆಯಲಿದೆ. ಜಿಲ್ಲೆಯಲ್ಲಿ 1,27,245 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗುತ್ತದೆ.
ತಪಾಸಣೆ ಯಂತ್ರ ಪೂರೈಕೆ
ಕ್ಷಯರೋಗದ ಪತ್ತೆ ಮತ್ತು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ರೋಗಪತ್ತೆ ಯಂತ್ರಗಳನ್ನು ಪೂರೈಸಲಾಗಿದೆ. ಈ ಮೊದಲು ಮೈಕ್ರೋಸ್ಕೋಪ್ ಯಂತ್ರದ ಮೂಲಕ ತಪಾಸಣೆ ನಡೆಸಲಾಗುತ್ತಿತ್ತು. ಈ ಬಾರಿ ಸಿಬಿಎನ್‌ಎಎಟಿ ಯಂತ್ರಗಳನ್ನು ಪೂರೈಸಲಾಗಿದೆ. ತಪಾಸಣೆಗಾಗಿ ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಸಹಾಯಕರನ್ನೊಳಗೊಂಡ ಸುಮಾರು 1002 ಮಂದಿ ಸಿಬಂದಿಯನ್ನು ಜಿಲ್ಲೆಯಲ್ಲಿ ಇದಕ್ಕಾಗಿ ಬಳಸಿಕೊಳ್ಳಲಾಗಿದೆ. ಒಂದು ತಂಡದಲ್ಲಿ ಇಬ್ಬರು ಸಿಬಂದಿ ಇರಲಿದ್ದಾರೆ. ಈ ಬಗೆಗಿನ ಎಲ್ಲ ರೀತಿಯ ತರಬೇತಿ ಪ್ರಕ್ರಿಯೆಗಳು ಈಗಾಗಲೇ ಪೂರ್ಣಗೊಂಡಿವೆ.
ಆಯಕಟ್ಟಿನ ಸ್ಥಳಗಳಲ್ಲಿ ಪರೀಕ್ಷೆ
ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಜನ ಸಂದಣಿ ಇರುವ ಪ್ರದೇಶ, ಕಾರ್ಖಾನೆಗಳು, ಕಟ್ಟಡ ನಿರ್ಮಾಣ ಪ್ರದೇಶಗಳು, ಸಹಿತ ಜನಸಂಖ್ಯೆ ಹೆಚ್ಚಿರುವ ಭಾಗಗಳನ್ನು ಗುರುತಿಸಿಕೊಂಡು ಆರೋಗ್ಯ ತಪಾಸಣೆ ಮಾಡಲಿದ್ದಾರೆ. ಕಫದ ಮಾದರಿಗಳನ್ನು ಸ್ಥಳದಲ್ಲಿಯೇ ಸಂಗ್ರಹಿಸಲಾಗುತ್ತದೆ. ಹೆಚ್ಚುವರಿ ಚಿಕಿತ್ಸೆ ಬೇಕಿದ್ದರೂ ಆಸ್ಪತ್ರೆಯಲ್ಲಿ ನೀಡಲಾಗುತ್ತದೆ ಎನ್ನುತ್ತಾರೆ ಜಿಲ್ಲಾ ನೋಡಲ್ ಅಧಿಕಾರಿಯಾದ ಸುಭಾಶ್ ಬಂಗೇರ ಅವರು.
ಅಂಟುರೋಗ
ಕ್ಷಯರೋಗ ಒಂದು ಅಂಟು ರೋಗವಾಗಿದ್ದು, ಮೈಕೋ ಬ್ಯಾಕ್ಟೀರಿಯಂ ಟ್ಯುಬರ್‌ಕ್ಯುಲೋಸಿಸ್ ಎಂಬ ಸೂಕ್ಷ್ಮ ರೋಗಾಣು ವಿನಿಂದ ಒಬ್ಬರಿಂದ ಒಬ್ಬರಿಗೆ ಅತೀವೇಗದಲ್ಲಿ ಹರಡುತ್ತದೆ. ಕ್ಷಯರೋಗಿ ಕೆಮ್ಮಿದಾಗ ಅಥವಾ ಸೀನಿದಾಗ ಹೊರಬರುವ ಈ ರೋಗಾಣುಗಳು ಗಾಳಿಯ ಮೂಲಕ ಆರೋಗ್ಯವಂತ ವ್ಯಕ್ತಿಯ ಶ್ವಾಸಕೋಶ ಸೇರಿ ಸೋಂಕು ಉಂಟಾಗುತ್ತದೆ. ನಿರಂತರ ಕೆಮ್ಮು, ಕಫದಲ್ಲಿ ರಕ್ತ ಬೀಳುವುದು, ಬಿಟ್ಟು ಬಿಟ್ಟು ಜ್ವರ ಬರುವುದು ಇವುಗಳು ಕ್ಷಯರೋಗದ ಲಕ್ಷಣವಾಗಿದೆ. ಇಂತಹ ಲಕ್ಷಣಗಳು ಕಂಡುಬಂದರೆ ವೈದ್ಯರನ್ನು ಭೇಟಿ ಮಾಡಿ ಸೂಕ್ತ ಚಿಕಿತ್ಸೆ ಪಡೆಯುವ ಮೂಲಕ ಔಷಧ ತೆಗೆದುಕೊಳ್ಳುವ ಮೂಲಕ ಕ್ಷಯರೋಗವನ್ನು ನಿಯಂತ್ರಿಸಬಹುದು.
ಮನೆಬಾಗಿಲಿಗೆ ಬಂದು ತಪಾಸಣೆ
2025ರೊಳಗೆ ಕ್ಷಯರೋಗ ನಿರ್ಮೂಲನೆ ಉದ್ದೇಶವನ್ನು ಕೇಂದ್ರ ಸರಕಾರ ಹೊಂದಿದೆ. ದೇಶಾದ್ಯಂತ ಈ ಅಭಿಯಾನ ನಡೆಯಲಿದೆ. ಉಡುಪಿ ಜಿಲ್ಲೆಯಲ್ಲಿ ಡಿ.1ರಿಂದ ಆರಂಭಗೊಳ್ಳಲಿದೆ. ಚಿಕಿತ್ಸೆ ಸಂಪೂರ್ಣ ಉಚಿತವಾಗಿದೆ. ಕಾರ್ಯಕರ್ತರು ಮನೆಬಾಗಿಲಿಗೆ ಬಂದು ತಪಾಸಣೆ ನಡೆಸಲಿದ್ದಾರೆ. ರೋಗ ಲಕ್ಷಣಗಳು ಇದ್ದವರು ಸ್ವತಃ ತಾವಾಗಿಯೇ ಬಂದು ತಪಾಸಣೆಯನ್ನೂ ಮಾಡಬಹುದು.
-ಡಾ| ಚಿದಾನಂದ ಸಂಜು, ಜಿಲ್ಲಾ ಕ್ಷಯರೋಗ ನಿರ್ಮೂಲನೆ ಅಧಿಕಾರಿ, ಉಡುಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್ ಫಿಕ್ಸ್
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.