ಮುಂದಿನ ವರ್ಷ ಪದವಿ ತರಗತಿಗಳಿಗೂ ತುಳು
Team Udayavani, Feb 28, 2019, 1:00 AM IST
ಉಡುಪಿ: ಮುಂದಿನ ವರ್ಷದಿಂದ ಪದವಿ ತರಗತಿಗಳಲ್ಲಿಯೂ ತುಳು ಭಾಷೆಯನ್ನು ಐಚ್ಛಿಕ ವಿಷಯವಾಗಿ ಅಧ್ಯಯನ ಮಾಡಲು ಕರ್ನಾಟಕ ತುಳು ಅಕಾಡೆಮಿ ಅವಕಾಶ ಮಾಡಿಕೊಡಲಿದೆ ಎಂದು ಅಕಾಡೆಮಿಯ ಅಧ್ಯಕ್ಷ ಎ.ಸಿ. ಭಂಡಾರಿ ತಿಳಿಸಿದ್ದಾರೆ.
ಫೆ. 27ರಂದು ಅಕಾಡೆಮಿ ಮತ್ತು ಎಜಿಎಂ ಕಾಲೇಜು ಸಹಭಾಗಿತ್ವದಲ್ಲಿ ಕಾಲೇಜಿನ ಮುದ್ದಣ ಮಂಟಪದಲ್ಲಿ ಜರಗಿದ ತುಳು ಸಂಸ್ಕೃತಿಯ ಹಬ್ಬ “ತುಳು ಐಸಿರಿ-2019’ನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಯುವಜನರಲ್ಲಿ ಜಾಗೃತಿ
1.50 ಕೋಟಿ ಜನ ಮಾತನಾಡುವ ತುಳು ಭಾಷೆ ಉಳಿದರೆ ಮಾತ್ರ ತುಳು ಸಂಸ್ಕೃತಿ ಉಳಿಯುತ್ತದೆ. ತುಳು ಭಾಷೆ ಉಳಿಯಬೇಕಾದರೆ ಯುವಜನತೆಯಲ್ಲಿ ಜಾಗೃತಿ ಮೂಡಿಸಬೇಕಾಗಿದೆ. ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿರುವ ಅಕಾಡೆಮಿ ಕರಾವಳಿಯ ಎಲ್ಲ ಕಾಲೇಜುಗಳಲ್ಲಿಯೂ ತುಳು ಭಾಷೆ, ಸಂಸ್ಕೃತಿಗೆ ಸಂಬಂಧಿಸಿದ ಚಟುವಟಿಕೆಗಳನ್ನು ನಡೆಸಲು ಯೋಜನೆ ಹಾಕಿಕೊಂಡಿದೆ. ತುಳುವಿನ ಕೃತಿಗಳನ್ನು ಬೇರೆ ಭಾಷೆಗಳಿಗೆ, ಬೇರೆ ಭಾಷೆಗಳ ಕೃತಿಯನ್ನು ತುಳುವಿಗೆ ಅನುವಾದಿಸುವ ಕೆಲಸಗಳು ಕೂಡ ನಡೆಯುತ್ತಿವೆ ಎಂದು ಭಂಡಾರಿ ಹೇಳಿದರು.
ಆಂಗ್ಲ ಭಾಷೆ ಇರಲಿ, ಸಂಸ್ಕೃತಿ ಬೇಡ
ಇಂಗ್ಲಿಷ್ ಭಾಷೆಯ ಜ್ಞಾನ ಅಗತ್ಯ. ತುಳುವರು ಕೂಡ ಇಂಗ್ಲಿಷ್ ಅಧ್ಯಯನ ಮಾಡುವುದರಲ್ಲಿ ತಪ್ಪಿಲ್ಲ. ಆದರೆ ಇಂಗ್ಲಿಷ್ ಸಂಸ್ಕೃತಿಯ ಅನುಕರಣೆ ಬೇಡ. ಒಂದು ಕಾಲದಲ್ಲಿ ತುಳುವರ ಅಸಡ್ಡೆಯಿಂದಾಗಿ ತುಳುವರನ್ನು ತಾತ್ಸಾರದಿಂದ ನೋಡುವಂತಾಗಿತ್ತು. ಶಾಲೆಗಳಲ್ಲಿ ತುಳು ಮಾತನಾಡುವವರನ್ನು ಶಿಕ್ಷಿಸುವ ಕ್ರಮವೂ ಇತ್ತು. ಆದರೆ ಇಂದು ಪರಿಸ್ಥಿತಿ ಬದಲಾಗಿದೆ. ತುಳು ಗೊತ್ತಿಲ್ಲದವರಿಗೆ ತುಳು ಕಲಿಸುವ ವ್ಯವಸ್ಥೆ ಶಾಲೆಗಳಲ್ಲಿ ಆರಂಭಗೊಂಡಿದೆ. ತುಳುವನ್ನು ಸಂವಿಧಾನದ 8ನೇ ಪರಿಚ್ಛೇಧಕ್ಕೆ ಸೇರಿಸಲು ಪ್ರಬಲ ರಾಜಕೀಯ ಇಚ್ಛಾಶಕ್ತಿಯ ಅವಶ್ಯಕತೆ ಇದೆ ಎಂದು ಎ.ಸಿ.ಭಂಡಾರಿ ಹೇಳಿದರು.
ಫಲಿತಾಂಶ ಉತ್ತಮ
ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಉಡುಪಿ ತುಳುಕೂಟದ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಅವರು ಮಾತನಾಡಿ, “ಎಸ್‌ಎಸ್‌ಎಲ್‌ಸಿಯಲ್ಲಿ ತುಳುವನ್ನು ತೃತೀಯ ಭಾಷೆಯಾಗಿ ಅಧ್ಯಯನ ಮಾಡುವ ವಿದ್ಯಾರ್ಥಿಗಳು ಶೇ.90ರಿಂದ 100 ಅಂಕಗಳನ್ನು ಪಡೆಯುತ್ತಿದ್ದಾರೆ. ಶಾಲೆಗಳ ಒಟ್ಟಾರೆ ಫಲಿತಾಂಶವೇ ಬದಲಾಗುತ್ತಿದೆ’ ಎಂದು ಹೇಳಿದರು.
ಚಿಂತಕ ಕಲ್ಲೂರ್ ನಾಗೇಶ್ ಅವರು ಮಾತನಾಡಿ “ತುಳುನಾಡು, ಸಂಸ್ಕೃತಿಯನ್ನು ಕಾವ್ಯ, ಪುರಾಣಗಳ ಹಿನ್ನೆಲೆ ಜತೆಗೆ ವೈಜ್ಞಾನಿಕ ಮತ್ತು ವೈಚಾರಿಕ ದೃಷ್ಟಿಯಿಂದಲೂ ಅಧ್ಯಯನ ಮಾಡುವ ಅವಶ್ಯಕತೆ ಇದೆ’ ಎಂದು ಹೇಳಿದರು.
ಎಂಜಿಎಂ ಪದವಿ ಕಾಲೇಜು ಪ್ರಾಂಶುಪಾಲ ಡಾ| ಎಂ.ಜಿ.ವಿಜಯ, ಪ.ಪೂ. ಕಾಲೇಜು ಪ್ರಾಂಶುಪಾಲೆ ಮಾಲತಿ ದೇವಿ ಉಪಸ್ಥಿತರಿದ್ದರು. ಕಾಲೇಜಿನ ತುಳು ಸಂಘದ ಸಂಚಾಲಕ ಡಾ| ಪುತ್ತಿ ವಸಂತ ಕುಮಾರ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾನತಾಡಿದರು. ಕಾರ್ಯದರ್ಶಿ ರಕ್ಷಿತಾ ವಂದಿಸಿದರು. ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಮಂಜುನಾಥ ಕಾಮತ್ ಅವರು ಅತಿಥಿಗಳನ್ನು ಪರಿಚಯಿಸಿದರು. ಉಪನ್ಯಾಸಕ ಸುಚಿತ್ ಕೋಟ್ಯಾನ್ ಕಾರ್ಯಕ್ರಮ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Udupi: ಗೀತಾರ್ಥ ಚಿಂತನೆ-94: ದುಗುಡಗಳನ್ನು ಕೇಳುವುದೂ ಚಿಕಿತ್ಸೆ
Udupi: ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡು ವ್ಯಕ್ತಿ ಸಾವು
MUST WATCH
ಹೊಸ ಸೇರ್ಪಡೆ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.