320 ವಿದ್ಯಾರ್ಥಿಗಳಿರುವ ಶಾಲೆಗೆ ಇಬ್ಬರೇ ಖಾಯಂ ಶಿಕ್ಷಕರು !
8 ಮಂದಿ ಗೌರವ ಶಿಕ್ಷಕರ ನೇಮಕ; ಮನವಿಗೆ ಸ್ಪಂದಿಸದ ಸರಕಾರ
Team Udayavani, Aug 30, 2019, 5:55 AM IST
ಶತಮಾನ ಕಂಡ ಎಸ್‌ವಿಟಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ.
ಕಾರ್ಕಳ: ಶತಮಾನ ಕಂಡ ಎಸ್‌ವಿಟಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುನ್ನೂರ ಇಪ್ಪತ್ತು ವಿದ್ಯಾರ್ಥಿಗಳಿಗೆ ಬರೇ ಇಬ್ಬರು ಖಾಯಂ ಶಿಕ್ಷಕರು. ಒಂದನೇ ತರಗತಿಯಿಂದ 7ನೇ ತರಗತಿವರೆಗೆ ಹೊಂದಿರುವ ಈ ಶಾಲೆಗೆ ಕಳೆದ 25 ವರ್ಷಗಳಿಂದ ಶಿಕ್ಷಕರ ನೇಮಕವಾಗಿಲ್ಲ.
1934ರಲ್ಲಿ ಮೇಲ್ದರ್ಜೆಗೆ
1911ರಲ್ಲಿ ಕಾರ್ಕಳ ನಗರದ ಮಹಾಲಕ್ಷ್ಮೀ ದೇವಸ್ಥಾನದ ಸಮೀಪ ಸ್ವಂತ ಕಟ್ಟಡವನ್ನು ಹೊಂದಿ ಹಿಂದೂ ಬಾಲಿಕಾ ಶಾಲೆ ಎಂಬ ಹೆಸರಲ್ಲಿ ಕಾರ್ಯಾರಂಭ ಮಾಡಿದ್ದ ಈ ಶಾಲೆಯನ್ನು 1934ರಲ್ಲಿ ಹಿರಿಯ ಪ್ರಾಥಮಿಕ ಶಾಲೆಯಾಗಿ ಮೇಲ್ದರ್ಜೆಗೇರಿಸುವ ಮೂಲಕ ಎಸ್.ವಿ.ಟಿ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಎಂದು ಮರು ನಾಮಕರಣ ಮಾಡಲಾಗಿತ್ತು.
ಸಮವಸ್ತ್ರ ವಿತರಣೆ
ಅನುದಾನಿತ ಶಾಲೆಯಾಗಿರುವ ಕಾರಣ ಸರಕಾರದಿಂದ ದೊರೆಯುವ ಸೌಲಭ್ಯವಲ್ಲದೇ ಇಲ್ಲಿನ ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನು ಹಾಗೂ ನೋಟ್ ಪುಸ್ತಕವನ್ನು ಪ್ರತಿವರ್ಷ ಉಚಿತವಾಗಿ ನೀಡಲಾಗುತ್ತಿದೆ.
ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ದಾನಿಗಳ ಸಹಕಾರದೊಂದಿಗೆ ವಿಶೇಷ ವಿದ್ಯಾರ್ಥಿವೇತನ ಕೊಡಲಾಗುತ್ತಿದೆ. ಯಕ್ಷಗಾನ, ಯೋಗಾಸನ ಮೊದಲಾದ ಪಠ್ಯೇತರ ಚಟುವಟಿಕೆಗಳಿಗೆ ವಿಶೇಷ ಪ್ರೋತ್ಸಾಹ ನೀಡಲಾಗುತ್ತಿದೆ.
ಆದ್ಯತೆ ದೊರೆತಲ್ಲಿ ಅನುಕೂಲ
ತಾಲೂಕಿನ ಅನುದಾನಿತ ಶಾಲೆಗಳಲ್ಲಿ ಎಸ್‌ವಿಟಿಯಲ್ಲಿನ ವಿದ್ಯಾರ್ಥಿಗಳ ಸಂಖ್ಯೆ ಅತಿ ಹೆಚ್ಚು. ಹೀಗಾಗಿ ಹೆಚ್ಚುವರಿ ಶಿಕ್ಷಕರನ್ನು ನಿಯೋಜಿಸುವಾಗ ನಮ್ಮ ಶಾಲೆಗೂ ಆದ್ಯತೆ ದೊರೆತಲ್ಲಿ ಅನುಕೂಲ.
-ಎಂ. ಜಾನಕಿನಾಥ ರಾವ್,
ಮುಖ್ಯಶಿಕ್ಷಕರು, ಎಸ್‌ವಿಟಿ ಹಿರಿಯ ಪ್ರಾಥಮಿಕ ಶಾಲೆ
ಸರಕಾರ ಶಿಕ್ಷಕರನ್ನು ನೇಮಿಸಲಿ
ಸರಕಾರ ಅನುದಾನಿತ ಶಾಲೆಗಳಿಗೆ ಬೇಕಾಗಿರುವ ಶಿಕ್ಷಕರನ್ನು ಒದಗಿಸಬೇಕು. ಅನುದಾನಿತ ಶಾಲೆಗಳ ಶಿಕ್ಷಕರು ನಿವೃತ್ತಿಗೊಂಡಲ್ಲಿ ಮರುನೇಮಕವಾಗುತ್ತಿಲ್ಲ. ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಇಂತಹ ಶಾಲೆಗಳಿಗೂ ಶಿಕ್ಷಕರನ್ನು ನೇಮಕ ಮಾಡಬೇಕು ಎನ್ನುವುದು ಶಿಕ್ಷಣ ತಜ್ಞರ ಅಭಿಮತ.
ಮನವಿಗೆ ಸ್ಪಂದಿಸಿಲ್ಲ
ನೂರು ವರುಷ ಇತಿಹಾಸ ಹೊಂದಿರುವ ಎಸ್‌ವಿಟಿ ಕನ್ನಡ ಮಾಧ್ಯಮ ಶಾಲೆಯನ್ನು ಉತ್ತಮ ರೀತಿಯಲ್ಲಿ ಮುಂದುವರಿಸಿಕೊಂಡು ಹೋಗುವ ನಿಟ್ಟಿನಲ್ಲಿ ಸಾಕಷ್ಟು ಶ್ರಮವಹಿಸಲಾಗುತ್ತಿದೆ. ಶಿಕ್ಷಕರ ನೇಮಕಗೊಳಿಸುವಂತೆ ಸಾಕಷ್ಟು ಬಾರಿ ಸರಕಾರದ ಗಮನ ಸೆಳೆದರೂ ಯಾವುದೇ ಪ್ರಯೋಜನವಾಗಿಲ್ಲ. ಸರಕಾರ ಖಾಲಿ ಹುದ್ದೆ ತುಂಬಿಸುವಲ್ಲಿ ಅಥವಾ ಹೆಚ್ಚುವರಿ ಶಿಕ್ಷಕರನ್ನು ಅನುದಾನಿತ ಶಾಲೆಗಳಿಗೆ ನೀಡುವತ್ತ ಮುತುವರ್ಜಿ ವಹಿಸಬೇಕು.
-ಕೆ.ಪಿ. ಶೆಣೈ,
ಕಾರ್ಯದರ್ಶಿ, ಎಸ್‌ವಿಟಿ ಎಜುಕೇಶನ್ ಟ್ರಸ್ಟ್
24 ಲಕ್ಷ ರೂ. ಧನ ಸಹಾಯ
ಶಿಕ್ಷಕರ ಕೊರತೆ ನಿಭಾಯಿಸುವ ನಿಟ್ಟಿನಲ್ಲಿ ಶಾಲಾಡಳಿತ ನಿರ್ವಹಿಸುವ ಶ್ರೀ ವೆಂಕಟರಮಣ ಎಜುಕೇಶನ್ ಟ್ರಸ್ಟ್ ಹಾಗೂ ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮಂಡಳಿ 8 ಮಂದಿ ಗೌರವ ಶಿಕ್ಷಕರನ್ನು ನೇಮಿಸಿದೆ. ಗೌರವ ಶಿಕ್ಷಕರ ವೇತನ, ಮಕ್ಕಳ ಸಾರಿಗೆ ವೆಚ್ಚ, ಶಾಲಾ ಅಭಿವೃದ್ಧಿ ಚಟುವಟಿಕೆಗಳಿಗಾಗಿ ಪ್ರತಿವರ್ಷ ಸುಮಾರು 24 ಲಕ್ಷ ರೂ. ಧನ ಸಹಾಯವನ್ನು ಟ್ರಸ್ಟ್ ಭರಿಸುತ್ತಿದೆ.
-ರಾಮಚಂದ್ರ ಬರೆಪ್ಪಾಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Perfect: ಎಡ್ ಶಿರನ್ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್ ಆದ ಉಡುಪಿಯ ಹುಡುಗ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ
Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ
Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Perfect: ಎಡ್ ಶಿರನ್ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್ ಆದ ಉಡುಪಿಯ ಹುಡುಗ
Kadri: ಬೃಹತ್ ಗಾತ್ರದ ಚಿಟ್ಟೆ, ಜೀರುಂಡೆ !
Shimoga: ಮೊಬೈಲ್ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ
Pushpa 2: ಖಾಕಿಗೆ ಸವಾಲು ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.