ಉಚ್ಚಿಲ : ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ : ನಾಲ್ವರು ವಶ, ಓರ್ವ ಪರಾರಿ
Team Udayavani, Jun 2, 2022, 8:21 PM IST
ಪಡುಬಿದ್ರಿ : ಉಚ್ಚಿಲ ಭಾಸ್ಕರ ನಗರ ಜುಮ್ಮಾ ಮಸೀದಿ ಬಳಿಯ ಮನೆಯೊಂದರಲ್ಲಿ ನಡೆಯುತ್ತಿದ್ದ ಅಕ್ರಮ ಕಸಾಯಿಖಾನೆಗೆ ಪಡುಬಿದ್ರಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ನಾಲ್ವರು ಆರೋಪಿಗಳು, ಒಂದು ಜೀವಂತ ಹಸು, ಮಾಂಸಕ್ಕೆ ಕಡಿಯಲಾದ ಹಸು ಹಾಗೂ ಮಾರಾಟಕ್ಕೆ ತಯಾರಾಗಿ ಇರಿಸಲಾಗಿದ್ದ ಮಾಂಸವನ್ನು ಗುರುವಾರ ಸಂಜೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಉಚ್ಚಿಲ ಭಾಸ್ಕರ ನಗರದಲ್ಲಿ ಸಬಾನ್ ಎಂಬವರ ಮನೆಯಲ್ಲಿ ಈ ಕಸಾಯಿಖಾನೆ ಇತ್ತು. ಖಚಿತ ಮಾಹಿತಿ ಪಡೆದ ಪೊಲೀಸರು ಈ ಅಕ್ರಮ ಅಡ್ಡೆಗೆ ದಾಳಿ ನಡೆಸಿದ್ದಾರೆ.
ಈ ಪ್ರಕರಣದಲ್ಲಿ ಆರೋಪಿಗಳಾದ ಮಹಮ್ಮದ್ ರಫೀಕ್, ಇಲಿಯಾಸ್, ಮಹಮ್ಮದ್ ಮೊಹಿಯುದ್ದೀನ್, ಮೊಯ್ದಿನಬ್ಬ ಎಂಬ ನಾಲ್ವರನ್ನು ಪೊಲೀಸರು ಬಂಽಸಿದ್ದಾರೆ, ಪ್ರಮುಖ ಆರೋಪಿ ದಿಯು ರಫೀಕ್ ಎಂಬಾತ ಪರಾರಿಯಾಗಿದ್ದಾನೆ. ಈ ಕಾರ್ಯಾಚರಣೆಯಲ್ಲಿ ಕಾಪು ವೃತ್ತ ನಿರೀಕ್ಷಕ ಪ್ರಕಾಶ್, ಪಡುಬಿದ್ರಿ ಪಿಎಸ್‌ಐ ಪುರುಷೋತ್ತಮ ಹಾಗೂ ಪಡುಬಿದ್ರಿ ಮತ್ತು ಕಾಪು ವೃತ್ತ ನಿರೀಕ್ಷಕರ ಕಚೇರಿ ಸಿಬಂದಿ ಭಾಗವಹಿಸಿದ್ದರು.
ಇದನ್ನೂ ಓದಿ : ಅಫ್ಘಾನಿಸ್ತಾನಕ್ಕೆ ಭಾರತದ ನಿಯೋಗ ಭೇಟಿ : ಹಿರಿಯ ತಾಲಿಬಾನ್ ನಾಯಕರ ಭೇಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.