![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 19, 2023, 12:45 AM IST
ಕಾಪು: ಇಲ್ಲಿನ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ಉಚ್ಚಿಲ ದಸರಾ ಪ್ರಯುಕ್ತ ಅ. 19ರಂದು ಲಲಿತಾ ಪಂಚಮಿ ಸಂಭ್ರಮ, ಸಾಮೂಹಿಕ ಕುಂಕುಮಾರ್ಚನೆ ಹಾಗೂ ಏಕಕಾಲದಲ್ಲಿ ನೂರೈವತ್ತೂಂದು ವೀಣೆಗಳ ವಾದನ ಕಾರ್ಯಕ್ರಮ ನಡೆಯಲಿದೆ.
ಗುರುವಾರ ಸಂಜೆ 4.30ರಿಂದ ವಿದುಷಿ ಪವನ ಬಿ. ಆಚಾರ್ ಮಣಿಪಾಲ ಇವರ ನಿರ್ದೇಶನದಲ್ಲಿ ಏಕಕಾಲದಲ್ಲಿ ನೂರ ಐವತ್ತೂಂದು ವೀಣಾ ವಾದಕರ ಸಹಭಾಗಿತ್ವದೊಂದಿಗೆ ಶತವೀಣಾವಲ್ಲರಿ ಸಾಂಸ್ಕೃತಿಕ ಕಾರ್ಯ ಕ್ರಮ ನಡೆಯಲಿದೆ.
ಧಾರ್ಮಿಕ ಕಾರ್ಯಕ್ರಮಗಳು
ಪೂರ್ವಾಹ್ನ 9ಕ್ಕೆ ನಿತ್ಯ ಚಂಡಿಕಾ ಹೋಮ, ಮಧ್ಯಾಹ್ನ 12ಕ್ಕೆ ಮಹಾ ಮಂಗಳಾರತಿ, 12.30ಕ್ಕೆ ಮಹಾಪೂಜೆ, ಅನ್ನಸಂತರ್ಪಣೆ, ರಾತ್ರಿ 7.30ಕ್ಕೆ ನವದುರ್ಗೆಯರಿಗೆ ರಾತ್ರಿ ಮಹಾಪೂಜೆ, 8.30ಕ್ಕೆ ಅಂಬಿಕಾ ಕಲೊಕ್ತ ಪೂಜೆ ನೆರವೇರಲಿದೆ.
ಝಗಮಗಿಸುತ್ತಿದೆ ಉಚ್ಚಿಲ
ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ನವದುರ್ಗೆಯರು ಮತ್ತು ಶಾರದಾ ಮಂಟಪ ಸಹಿತ ಉಚ್ಚಿಲ-
ಎರ್ಮಾಳು-ಕಾಪುವರೆಗಿನ 12 ಕಿ.ಮೀ. ಉದ್ದದವರೆಗೂ ಆಕರ್ಷಕ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ.
ಧಾರ್ಮಿಕ ಸಭೆ; ಗಣ್ಯರ ಭೇಟಿ
ಬುಧವಾರ ಭಾಸ್ಕರ ರೈ ಕುಕ್ಕುವಳ್ಳಿ ಧಾರ್ಮಿಕ ಉಪನ್ಯಾಸ ನೀಡಿದರು. ಮಾಹೆ ಸಹಕುಲಾಧಿಪತಿ ಡಾ| ಎಚ್. ಎಸ್. ಬಲ್ಲಾಳ್ ದಂಪತಿ, ಡಿವೈಎಸ್ಪಿ ಜೈಶಂಕರ್ ಕೆ., ಎಸ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ, ಕಾಪು ಹೊಸಮಾರಿಗುಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ವಾಸುದೇವ ಶೆಟ್ಟಿ ಮೊದಲಾದವವರನ್ನು ಡಾ| ಜಿ. ಶಂಕರ್ ಗೌರವಿಸಿದರು.
ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ವಾಸುದೇವ ಸಾಲ್ಯಾನ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗುಂಡು ಬಿ. ಅಮೀನ್, ಮಹಿಳಾ ಸಂಘದ ಅಧ್ಯಕ್ಷೆ ಉಷಾ ರಾಣಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಮತ್ತಷ್ಟು ಜನಾಕರ್ಷಣೆಗೆ ಒತ್ತು
ಉಚ್ಚಿಲ ದಸರಾ ಕೇವಲ ಪೂಜಾ ಕಾರ್ಯಕ್ರಮಗಳಿಗೆ ಮಾತ್ರಾ ಸೀಮಿತವಾಗಿರಿಸದೇ ನಿರಂತರ ಭಜನೆ, ಸಾಂಸ್ಕೃತಿಕ ವೈಭವ, ಊಟೋಪಚಾರಕ್ಕೂ ವಿಶೇಷ ಆದ್ಯತೆ ನೀಡಲಾಗಿದೆ. ಫಲಪುಷ್ಪ, ಪ್ರಾಣಿ, ಪಕ್ಷಿಗಳ ಪ್ರದರ್ಶನ, ಪುಸ್ತಕ ಮೇಳ, ಛಾಯಾಚಿತ್ರ ಪ್ರದರ್ಶನ, ಸಾಂಪ್ರದಾಯಿಕ ಮೀನುಗಾರಿಕಾ ಸಲಕರಣೆಗಳ ಪ್ರದರ್ಶನಕ್ಕೂ ಭಾರೀ ಸ್ಪಂದನೆ ವ್ಯಕ್ತವಾಗುತ್ತಿದ್ದು ಜನಾಕರ್ಷಣೆಗೆ ಕಾರಣವಾಗಲಿದೆ ಎಂದು ಡಾ| ಜಿ. ಶಂಕರ್ ತಿಳಿಸಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.