‘ಉದಯವಾಣಿ’ ಉಡುಪಿ ತಾಲೂಕು ಚಿಣ್ಣರ ಬಣ್ಣ ಸ್ಪರ್ಧೆ

ಚಿಣ್ಣರ ಕನಸಿಗೆ ಬಣ್ಣ ತುಂಬಬೇಕು: ಡಾ. ನೀ. ಬಿ. ವಿಜಯ ಬಲ್ಲಾಳ್

Team Udayavani, Oct 30, 2022, 7:39 PM IST

1-asdaad

ಉಡುಪಿ: ಸಂಸ್ಕೃತಿ, ಸಂಸ್ಕಾರದ ಮೂಲಕ ಮಕ್ಕಳ ಕನಸಿಗೆ ಬಣ್ಣ ತುಂಬವ ಕಾರ್ಯ ಆಗಬೇಕು ಎಂದು ಅಂಬಲಪಾಡಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ ನೀ. ಬಿ.ವಿಜಯ ಬಲ್ಲಾಳ್ ಅವರು ಹೇಳಿದರು.

‘ಉದಯವಾಣಿ’ವತಿಯಿಂದ ಅಂಬಲಪಾಡಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದಲ್ಲಿ ರವಿವಾರ ನಡೆದ ಉಡುಪಿ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ ‘ಚಿಣ್ಣರ ಬಣ್ಣ’ ಉದ್ಘಾಟಿಸಿ ಅವರು ಮಾತನಾಡಿದರು.

ಚಿನ್ನಣ್ಣ ಬಣ್ಣದಂತಹ ಚಿತ್ರಕಲಾ ಸ್ಪರ್ಧೆಯು ಮಕ್ಕಳಲ್ಲಿ ಸಂಸ್ಕಾರವನ್ನು ಬೆಳೆಸಲು ಅನುಕೂಲವಾಗುತ್ತದೆ. ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳು ಮಕ್ಕಳ ಸರ್ವತೋಮುಖ ಏಳ್ಗೆಗೆ ಅತ್ಯಾವಶ್ಯಕ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿ. ನ ಅಧ್ಯಕ್ಷ ಕೆ. ಉದಯ್ ಕುಮಾರ್ ಶೆಟ್ಟಿ ಮಾತನಾಡಿ, ಮಕ್ಕಳ ಪ್ರತಿಭೆಯ ಶೋಧಕ್ಕೆ ಉದಯವಾಣಿಯ ಚಿನ್ನಣ ಬಣ್ಣ ಸ್ಪರ್ಧೆ ಪೂರಕವಾಗಿದೆ. ಉದಯವಾಣಿ ಸದಾ ಸಮಾಜದ ದನಿಯಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದರು.

ಅಂಬಲಪಾಡಿ ಗೋಪಾಲ್ ಬಂಗೇರ ಫ್ಯಾಮಿಲಿ ಚಾರಿಟೆಬಲ್ ಟ್ರಸ್ಟ್ ನ ಡಾ. ಸುಶ್ಮಿತಾ ಅಶ್ವತ್ಥ್ ರಾಜ್, ಉಡುಪಿ ಆರ್ಟಿಸ್ಟ್ಸ್ ಫಾರಂ ಅಧ್ಯಕ್ಷ ರಮೇಶ್ ರಾವ್, ಉದಯವಾಣಿ ಸಂಪಾದಕ ಅರವಿಂದ ನಾವಡ, ಮಾರುಕಟ್ಟೆೆ ವಿಭಾಗದ ಉಪಾಧ್ಯಕ್ಷ(ಮ್ಯಾಗಜಿನ್ಸ್ ಆ್ಯಂಡ್ ಸ್ಪೆೆಶಲ್‌ ಪ್ರಾಜೆಕ್ಟ್ಸ್‌) ರಾಮಚಂದ್ರ ಮಿಜಾರು, ಫೈನಾನ್ಸ್ ವಿಭಾಗದ ಜಿಎಂ ಸುದರ್ಶ‌ನ ಶೇರಿಗಾರ್ ಉಪಸ್ಥಿತರಿದ್ದರು. ತಲ್ಲೂರು ಗ್ರೂಪ್ಸ್ ನ ಶಿವಪ್ರಸಾದ್ ಶೆಟ್ಟಿ ಭೇಟಿ ನೀಡಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.

ಆರ್ಟಿಸ್ಟ್ಸ್ ಫೋರಂ ಉಡುಪಿ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ದ.ಕ. ಹಾಲು ಉತ್ಪಾದಕರ ಒಕ್ಕೂಟ, ಹ್ಯಾಂಗ್ಯೂ ಐಸ್‌ಕ್ರೀಂ, ಮಾಡರ್ನ್ ಕಿಚನ್ಸ್, ಕ್ಯಾಂಪ್ಕೊ, ಅಂಬಲಪಾಡಿ ಗೋಪಾಲ್ ಬಂಗೇರ ಫ್ಯಾಾಮಿಲಿ ಚಾರಿಟೆಬಲ್‌ ಟ್ರಸ್ಟ್ , ಜಯಲಕ್ಷ್ಮೀ ಸಿಲ್ಕ್ಸ್ ಉದ್ಯಾವರ, ಅದಾನಿ ಉಡುಪಿ ಪವರ್ ಕಾರ್ಪೊರೇಶನ್ ಲಿ., ತಲ್ಲೂರ್ಸ್ ತಾಂಬುಲಮ್ಸ್ ಸಹಕಾರದೊಂದಿಗೆ ಕಾರ್ಯಕ್ರಮ ನಡೆಯಿತು.

ಉಡುಪಿ ಉಪ ಮುಖ್ಯ ವರದಿಗಾರ ರಾಜು ಖಾರ್ವಿ ಸ್ವಾಗತಿಸಿ, ಕುಂದಾಪುರ ಮಾರುಕಟ್ಟೆ ವಿಭಾಗದ ಹಿರಿಯ ಪ್ರತಿನಿಧಿ ಕೃಷ್ಞಮೂರ್ತಿ ವಂದಿಸಿದರು. ಪ್ರಸರಣ ವಿಭಾಗದ ಸಹಾಯಕ ವ್ಯವಸ್ಥಾಪಕ ಪ್ರಕಾಶ್ ನಾಯಕ್ ನಿರೂಪಿಸಿದರು. ಆರ್ಟಿಸ್ಟ್ಸ್ ಫಾರಂನ ಸಕು ಪಾಂಗಾಳ ನಿರ್ವಹಿಸಿದರು.

1ರಿಂದ 3, 4ರಿಂದ 7ನೇ ತರಗತಿ ವಿಭಾಗದ ವಿದ್ಯಾಾರ್ಥಿಗಳು ಐಚ್ಛಿಕ ವಿಷಯದಲ್ಲಿ ಚಿತ್ರ ಬಿಡಿಸಿದರು. 8ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಸ್ಥಳದಲ್ಲೇ ಚೀಟಿ ಎತ್ತುವ ಮೂಲಕ ಆದರ್ಶ ಗ್ರಾಮ, ಗೃಹ ಕೈಗಾರಿಕೆ ಮತ್ತು ದೊಂಬರಾಟ ಎನ್ನುವ ವಿಷಯಗಳನ್ನು ನೀಡಲಾಯಿತು. ತಾಲೂಕಿನ ವಿವಿಧ ಭಾಗದ ಶಾಲೆಗಳ 1200ಕ್ಕೂ ಅಧಿಕ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೂ ಪ್ರಮಾಣಪತ್ರದ ಜತೆಗೆ ಗಿಫ್ಟ್ ಹ್ಯಾಂಪರ್, ಐಸ್ ಕ್ರೀಂ ನೀಡಲಾಯಿತು.

ಟಾಪ್ ನ್ಯೂಸ್

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

court

Kasaragod; ಯುವಕನ ಕೊಲೆ: 6 ಮಂದಿಗೆ ಜೀವಾವಧಿ

death

Puttur: ಅಪಘಾತದಲ್ಲಿ ಗಾಯಾಳಾಗಿದ್ದ ಬೈಕ್‌ ಸಹ ಸವಾರ ಸಾವು

arrested

BC Road; ಎರಡು ತಂಡಗಳ ಮಧ್ಯೆ ಮಾರಾಮಾರಿ: ಇಬ್ಬರ ಬಂಧನ

1-bhatru

Subrahmanya: ಅರ್ಚಕರ ಮನೆಯಿಂದ ನಗ-ನಗದು ಕಳವು

police crime

Gangolli, Ajekaru; ಮಹಿಳೆಯರಿಗೆ ಜೀವ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.