ಉದ್ಯಾವರ: ರಸ್ತೆಗೆ ಬಿದ್ದ ಸಮುದ್ರದ ಮರಳು ತೆರವು
Team Udayavani, Jun 19, 2019, 5:36 AM IST
ಕಟಪಾಡಿ: ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡುಕರೆ, ಕನಕೋಡ ಭಾಗದಲ್ಲಿ ಕಳೆದ ಕೆಲ ದಿನಗಳಲ್ಲಿ ನಿರಂತರವಾಗಿದ್ದ ಕಡಲ ತೆರೆಗಳ ಅಬ್ಬರದಿಂದ ಸಮುದ್ರದ ಅಲೆಗಳೊಂದಿಗೆ ರಸ್ತೆಯು ಮರಳಿನಿಂದಾವ್ರತಗೊಂಡಿತ್ತು.
ಸದಾ ವಾಹನ ದಟ್ಟಣೆಯಿಂದ ಕೂಡಿರುವ ಕೈಪುಂಜಾಲು-ಮಟ್ಟು-ಮಲ್ಪೆ ಸಂಪರ್ಕದ ಪ್ರಮುಖ ರಸ್ತೆ ಇದಾಗಿದೆ. ನಿಗದಿತ ಸಮಯದ ಅಂತರದಲ್ಲಿ ಸರಕಾರಿ ಬಸ್ಸುಗಳ ಓಡಾಟವೂ ಈ ರಸ್ತೆಯಲ್ಲಿದೆ. ಮಲ್ಪೆಗೆ ಅತೀ ಹತ್ತಿರದ ಸಂಪರ್ಕ ರಸ್ತೆ ಇದಾಗಿದ್ದು ಸ್ಥಳೀಯವಾಗಿ ಹೆಚ್ಚಿನ ಮಂದಿ ಈ ರಸ್ತೆಯನ್ನೇ ಅವಲಂಬಿತರಾಗಿರುತ್ತಾರೆ.
ಅಂತಹ ಪ್ರಮುಖ ರಸ್ತೆಯು ಕಡಲಬ್ಬರದ ಸಂದರ್ಭ ಮರಳಿನಿಂದಾವೃತ ಗೊಂಡಿದ್ದು, ರಸ್ತೆಯಲ್ಲಿ ವಾಹನಗಳ ಅದರಲ್ಲೂ ದ್ವಿಚಕ್ರ ವಾಹನ ಸವಾರರು ಸಂಚಾರಕ್ಕೆ ತುಸು ಕಷ್ಟ ಪಡಬೇಕಿತ್ತು.
ಇದನ್ನು ಮನಗಂಡ ಉದ್ಯಾವರ ಗ್ರಾಮ ಪಂಚಾಯತ್ ಸ್ಥಳೀಯರ ಕೋರಿಕೆಯ ಮೇರೆಗೆ ರಸ್ತೆಯ ಮೇಲೇರಿದ್ದ ಮರಳಿನ ರಾಶಿಯನ್ನು ತೆರವುಗೊಳಿಸುವ ಕೆಲಸವನ್ನು ನಡೆಸುತ್ತಿದೆ. ಆ ಮೂಲಕ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.