Udupi ಶೇ.60 ಕನ್ನಡ ಬಳಕೆ ಕಡ್ಡಾಯ: ಜಿಲ್ಲಾಧಿಕಾರಿ
Team Udayavani, Aug 20, 2024, 12:43 AM IST
ಉಡುಪಿ: ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಮಸೂದೆ ಅನ್ವಯ ನಾಮಫಲಕದಲ್ಲಿ ಕನ್ನಡವನ್ನು ಪ್ರಧಾನವಾಗಿ ಬಳಸುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ನಾಮಫಲಕದ ಮೇಲ್ಭಾಗದಲ್ಲಿ ಕನ್ನಡ ಭಾಷೆ ಶೇ.60ರಷ್ಟು ಪ್ರದರ್ಶಿಸದೆ ಇರುವುದು ಪರಿಶೀಲನೆ ವೇಳೆ ಕಂಡುಬಂದಿದ್ದು, ನಿಯಮವನ್ನು ಪಾಲಿಸದಿರುವ ಸಂಘ, ಸಂಸ್ಥೆ ಹಾಗೂ ಘಟಕಗಳಿಗೆ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ಮಸೂದೆ ಅನ್ವಯ ಮೊದಲನೇ ಅಪರಾಧಕ್ಕಾಗಿ 5 ಸಾ. ರೂ. ರವರೆಗೆ, ಎರಡನೇ ಅಪರಾಧಕ್ಕಾಗಿ ರೂ. 10ಸಾ. ರೂ. ರವರೆಗೆ, ಅನಂತರದ ಪ್ರತಿಯೊಂದು ಅಪರಾಧಕ್ಕಾಗಿ 20,000 ರೂ. ರವರೆಗೆ ದಂಡ ವಿಧಿಸಿ ಪರವಾನಿಗೆ ರದ್ದುಗೊಳಿಸಲಾಗುವುದು.
ಜಿಲ್ಲೆಯಲ್ಲಿ ನಾಮಫಲಕಗಳಲ್ಲಿ ಸಂಘ, ಸಂಸ್ಥೆ ಹಾಗೂ ಘಟಕದ ಹೆಸರು ಮತ್ತು ವಿಳಾಸ ಕನ್ನಡದಲ್ಲಿ ಫಲಕಗಳ ಮೇಲ್ಭಾಗದಲ್ಲಿ ಶೇ.60 ರಷ್ಟು ಪ್ರದರ್ಶಿಸುವ ಮೂಲಕ ಪರಿಷ್ಕೃತ ಫಲಕವನ್ನು ಆ. 30ರೊಳಗಾಗಿ ಅಳವಡಿಸಬೇಕು. ಅನಂತರದ ದಿನಗಳಲ್ಲಿ ತಪಾಸಣೆ ಸಂದರ್ಭ ನಾಮಫಲಕದಲ್ಲಿ ವ್ಯತ್ಯಾಸ ಕಂಡುಬಂದಲ್ಲಿ ಮೇಲೆ ವಿವರಿಸಿರುವ ದಂಡನೆಗೆ ಒಳಪಡಿಸಲಾಗುವುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ
ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ
Udupi: ಗೀತಾರ್ಥ ಚಿಂತನೆ-84: ಮಧುವಾದದ್ದನ್ನು ನಾಶಪಡಿಸುವವ ಮಧುಸೂದನ
Manipal: ಸಾಲದಿಂದ ಬೇಸತ್ತು ಮಹಿಳೆ ಆತ್ಮಹ*ತ್ಯೆ
AjekarCase: ತನಿಖೆ ದಿಕ್ಕು ತಪ್ಪುತ್ತಿದೆ: ದಿಲೀಪ್ ತಂದೆ ವಿರುದ್ದ ಬಾಲಕೃಷ್ಣ ಮನೆಯವರ ಆರೋಪ
MUST WATCH
ಹೊಸ ಸೇರ್ಪಡೆ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
ವಕ್ಫ್ ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.