Udupi: ಅಟಲ್‌ ಕೇಂದ್ರದಲ್ಲಿ 73,204 ಅರ್ಜಿ ವಿಲೇವಾರಿ

Team Udayavani, Nov 28, 2023, 12:06 AM IST

Udupi: ಅಟಲ್‌ ಕೇಂದ್ರದಲ್ಲಿ 73,204 ಅರ್ಜಿ ವಿಲೇವಾರಿ

ಉಡುಪಿ: ಜಿಲ್ಲೆಯಲ್ಲಿ ಕಂದಾಯ ಇಲಾಖೆ ಉತ್ತಮ ಸೇವೆ ನೀಡುವ ಮೂಲಕ ಕಳೆದ 6 ತಿಂಗಳಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಜನಪರ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಮುಂದಾಗಿದೆ ಜಿಲ್ಲಾಧಿಕಾರಿ ಎಂದು ಡಾ| ಕೆ. ವಿದ್ಯಾಕುಮಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಸೇವಾಸಿಂಧು ಪೋರ್ಟಲ್‌ ನಾಗರಿಕರಿಗೆ ಕಂದಾಯ ಸೇವೆ ಪಡೆಯಲು ಪ್ರಮುಖ ವೇದಿಕೆಯಾಗಿದೆ. ಜಿಲ್ಲೆಯಾದ್ಯಂತ ಒಟ್ಟು 10 ಅಟಲ್‌ ಜೀ ಜನಸ್ನೇಹಿ ಕೇಂದ್ರಗಳು ವ್ಯವಸ್ಥಿತವಾಗಿ ಕಾರ್ಯನಿರ್ವಹಿಸುತ್ತಿವೆ. ಆದಾಯ ಪ್ರಮಾಣ ಪತ್ರ, ವಾಸ್ತವ್ಯ ದೃಢಪತ್ರ, ವಂಶವೃಕ್ಷ, ಪಿಂಚಣಿ, ಸಂಧ್ಯಾ ಸುರಕ್ಷ ಯೋಜನೆ ಸೇರಿದಂತೆ ಮೊದಲಾದ ಯೋಜನೆಗಳ ಪ್ರಯೋಜನವನ್ನು ಜನಸಾಮಾನ್ಯರು ಪಡೆದುಕೊಳ್ಳುತ್ತಿದ್ದಾರೆ. ಅಟಲ್‌ ಜೀ ಜನಸ್ನೇಹಿ ಕೇಂದ್ರದಲ್ಲಿ ಒಟ್ಟು 76,870 ಅರ್ಜಿಗಳು ಸ್ವೀಕೃತವಾಗಿದ್ದು, 73,204 ಅರ್ಜಿಗಳನ್ನು ವಿಲೇವಾರಿ ಮಾಡಿ, ಶೇ. 95.23 ಸಾಧನೆ ಮಾಡಲಾಗಿದೆ.

ಜನರಿಗೆ ಶೀಘ್ರ ಮತ್ತು ಸರಳ ಆಡಳಿತ ನೀಡಲು ಇ-ಆಫೀಸ್‌ ಸಹಕಾರಿಯಾಗಿದ್ದು, ಎಲ್ಲ ಕಡತಗಳನ್ನು ಇ- ಆಫೀಸ್‌ನಲ್ಲಿ ಮಾಡಲಾಗುತ್ತಿದೆ. ಜಿಲ್ಲಾಧಿಕಾರಿಗಳ ಕಚೇರಿ, ಸಹಾಯಕ ಅಯುಕ್ತರ ಕಚೇರಿ, ತಹಶೀಲ್ದಾರ್‌ ಕಚೇರಿಗಳಲ್ಲಿ ಶೇ. 100ರಷ್ಟು ಇ-ಆಫೀಸ್‌ ಅನುಷ್ಠಾನಗೊಳಿಸಲಾಗಿದೆ. ಇ-ಆಫೀಸ್‌ ತಂತ್ರಾಂಶದ ಮೂಲಕ ಜಿಲ್ಲೆಯ ಕಂದಾಯ ಕಚೇರಿಗಳಲ್ಲಿ ಒಟ್ಟು 16,165 ಕಡತಗಳನ್ನು ಸೃಷ್ಟಿಸಿದ್ದು ಹಾಗೂ ಅಧೀನ ಇಲಾಖೆಯ ಇತರ ಇಲಾಖೆಗಳ 93,687 ಕಡತಗಳು ಸ್ವೀಕೃತಗೊಂಡಿದ್ದು, ಒಟ್ಟು 1,09,271 ಕಡತಗಳು ವಿಲೇವಾರಿಯಾಗಿದೆ.

ಭೂಕಂದಾಯ ಕಾಯ್ದೆ ಅಡಿಯಲ್ಲಿ ಸಾರ್ವಜನಿಕರು ಹಾಗೂ ರೈತರಿಗೆ ಮೇಲ್ಮನವಿ ಅಥವಾ ಪುನರ್‌ ಮೇಲ್ಮನವಿ ಸಲ್ಲಿಸಲು ಅವಕಾಶ ಕಲ್ಪಿಸಿದ್ದು, ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಒಟ್ಟು 154 ಪ್ರಕರಣಗಳು ಮತ್ತು ಕುಂದಾಪುರ ಸಹಾಯಕ ಆಯುಕ್ತರ ನ್ಯಾಯಾಲಯದಲ್ಲಿ ಒಟ್ಟು 765 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ. ಕಳೆದ 6 ತಿಂಗಳಲ್ಲಿ ಒಟ್ಟು 11,074 ಪೈಕಿ ಆರ್‌ಟಿಸಿ ಪ್ರಕರಣಗಳನ್ನು ಹಾಗೂ ಭೂಮಿ ತಂತ್ರಾಂಶದ ಮೂಲಕ ಒಟ್ಟು 84,407 ಪ್ಲಾಟ್‌ಗಳನ್ನು ಪ್ಲ್ಯಾಗ್‌ ಮಾಡಲಾಗಿದೆ.

ಭೂಮಿ ತಂತ್ರಾಂಶ 5,141 ವಿಲೇವಾರಿ
ಭೂಮಿ ತಂತ್ರಾಂಶದಡಿ ಮ್ಯುಟೇಶನ್‌ ನೋಟಿಸ್‌ ಇಲ್ಲದೆ ಒಂದು ದಿನದಲ್ಲಿ 42,234 ಪ್ರಕರಣ ವಿಲೇವಾರಿ ಮಾಡಿ, ಶೇ. 99.64ರಷ್ಟು ಪ್ರಗತಿ ಸಾಧಿಸಲಾಗಿದೆ. ಮ್ಯುಟೇಶನ್‌ ನೋಟಿಸ್‌ ಜತೆಗೆ 7 ದಿನದ ಒಳಗೆ 8,675 ಪ್ರಕರಣಗಳನ್ನು ವಿಲೇವಾರಿ ಮಾಡಿ ಶೇ. 96.26 ಪ್ರಗತಿ ಸಾಧಿಸಲಾಗಿದೆ. ಮ್ಯುಟೇಶನ್‌ ನೊಟೀಸ್‌ ಜತೆಗೆ 15 ದಿನದ ಒಳಗೆ ಒಟ್ಟು 5141 ಪ್ರಕರಣಗಳನ್ನು ವಿಲೇವಾರಿ ಮಾಡಿ, ಶೇ. 91.16ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ: ದಿಲ್ಲಿ ಸರಕಾರ

Delhi Government: ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

3

Udupi: ಕೂಲಿ ಕಾರ್ಮಿಕನ ಮೇಲೆ ಹಲ್ಲೆ; ಗಾಯ

Brahmavar

Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

4

Udupi: ಕೊಳಚೆಯಿಂದ ಕಂಗಾಲಾದ ನಿಟ್ಟೂರು, ಕಲ್ಮಾಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

ABV-Modi

A.B.Vajpayee Birth Century: ಭವಿಷ್ಯದ ಭಾರತಕ್ಕೆ ಅಟಲ್‌ ಬಿಹಾರಿ ವಾಜಪೇಯಿ ಭದ್ರ ಬುನಾದಿ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.