Udupi; ಸಾಧಕ ಪತ್ರಕರ್ತರಿಗೆ ಅಭಿನಂದನಾ ಕಾರ್ಯಕ್ರಮ
Team Udayavani, Nov 29, 2024, 7:35 PM IST
ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸಾಧಕ ಪತ್ರಕರ್ತರಿಗೆ ಅಭಿನಂದನಾ ಕಾರ್ಯಕ್ರಮವನ್ನು ಶುಕ್ರವಾರ ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಈ ಬಾರಿಯ ಉಡುಪಿ ಜಿಲ್ಲಾ ರಾಜ್ಯೋತ್ಸವ ಸನ್ಮಾನ ಪಡೆದ ಹಿನ್ನೆಲೆಯಲ್ಲಿ ಕೇಕ್ ಕತ್ತರಿಸುವ ಮೂಲಕ ಸಂಭ್ರಮಾಚರಣೆ ಮಾಡಲಾಯಿತು. ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲಾ ರಾಜ್ಯೋತ್ಸವ ಸನ್ಮಾನ ಪುರಸ್ಕೃತ ಹಿರಿಯ ಪತ್ರಕರ್ತ ಪ್ರಭಾಕರ ಆಚಾರ್ಯ ಚಿತ್ತೂರು ಮತ್ತು ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಆಯ್ಕೆಯಾದ ಹಿರಿಯ ಪತ್ರಕರ್ತ ಯು.ಎಸ್.ಶೆಣೈ ಅವರನ್ನು ಸನ್ಮಾನಿಸಲಾಯಿತು.
ರಾಜ್ಯಮಟ್ಟದ ಪತ್ರಕರ್ತರ ಕ್ರೀಡಾಕೂಟದಲ್ಲಿ ಹಲವು ಪದಕಗಳನ್ನು ಗೆಲ್ಲುವ ಮೂಲಕ ಉಡುಪಿ ತಂಡಕ್ಕೆ ಸಮಗ್ರ ಪ್ರಶಸ್ತಿ ಪಡೆಯುವಲ್ಲಿ ಯಶಸ್ವಿಯಾದ ಪತ್ರಕರ್ತರಾದ ಅನಿಲ್ ಕೈರಂಗಳ, ಮುಹಮ್ಮದ್ ಶರೀಫ್, ಸುರೇಶ್ ಎರ್ಮಾಳು, ಉದಯ ಕುಮಾರ್ ಮುಂಡ್ಕೂರು, ಚೇತನ್ ಪೂಜಾರಿ ಮಟಪಾಡಿ ಅವರನ್ನು ಅಭಿನಂದಿಸಲಾಯಿತು. ಇದೇ ಸಂದರ್ಭದಲ್ಲಿ ತಂಡದ ನೇತೃತ್ವ ವಹಿಸಿದ್ದ ಸಂಘದ ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ಅವರನ್ನು ಗೌರವಿಸಲಾಯಿತು.
ಮುಖ್ಯ ಅತಿಥಿಗಳಾಗಿ ಉಡುಪಿ ಪಿತ್ರೋಡಿ ಯಶಸ್ವಿ ಫಿಶ್‌ಮಿಲ್ ನ ನಿರ್ದೇಶಕ ಉದಯ ಕುಮಾರ್, ಉಡುಪಿ ವಿಶ್ವ ಸಂಸ್ಕೃತಿ ಪ್ರತಿಷ್ಠಾನದ ಸ್ಥಾಪಕ ವಿಶ್ವನಾಥ ಶೆಣೈ, ಉಡುಪಿ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ವಹಿಸಿದ್ದರು.
ಸಂಘದ ಸದಸ್ಯ ಜನಾರ್ದನ ಕೊಡವೂರು ಕೊಡುಗೆಯಾಗಿ ನೀಡಿದ ರಾಜ್ಯೋತ್ಸವ ಪುರಸ್ಕೃತ ಸಂಘದ ಭಾವಚಿತ್ರವನ್ನು ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಅವರಿಗೆ ಹಸ್ತಾಂತರಿಸಲಾಯಿತು. ರಜತ ಮಹೋತ್ಸವ ಸಮಿತಿಯ ಸಂಚಾಲಕ ಮುಹಮ್ಮದ್ ಶರೀಫ್, ಸಂಘದ ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು ಉಪಸ್ಥಿತರಿದ್ದರು.
ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ರಜತ ಮಹೋತ್ಸವ ಸಮಿತಿಯ ಜತೆ ಕಾರ್ಯದರ್ಶಿ ದೀಪಕ್ ಜೈನ್ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Journalist:ಅಭಿವೃದ್ಧಿಪತ್ರಿಕೋದ್ಯಮ ಪ್ರಶಸ್ತಿ:ಗಿರೀಶ್ ಲಿಂಗಣ್ಣಗೆ ಸ್ವಾಮೀಜಿಗಳಿಂದ ಶ್ಲಾಘನೆ
Katpadi: ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ ; ಪ್ರಕರಣ ದಾಖಲು
ಭಾರತ ಮಾತೆಗೆ ಕಿರೀಟ ತೊಡಿಸಿದ ಸರಕಾರ:’ವಿಶ್ವಾರ್ಪಣಮ್’ನಲ್ಲಿ ಪಲಿಮಾರು ಶ್ರೀ ಅಭಿಮತ
Udupi;ಗೀತಾರ್ಥ ಚಿಂತನೆ 146: ಚಾರ್ವಾಕ ಬಿಟ್ಟು ಉಳಿದೆಲ್ಲ ಮತಗಳಲ್ಲಿ ಪುಣ್ಯಪಾಪ ಕಲ್ಪನೆ
Kaup: ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿಕ್ರಂ ಕಾಪು ನೇಮಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
UP: ವಿವಾಹದ ಮಧ್ಯೆ ಬಾತ್‌ರೂಮ್ ಹೋಗಿ ಬರುವುದಾಗಿ ಹೇಳಿ ಚಿನ್ನ – ನಗದು ಜತೆ ವಧು ಪರಾರಿ
ISRO: ಅಂತರಿಕ್ಷದಲ್ಲಿ ಅಲಸಂದೆ ಬೀಜ ಮೊಳಕೆ: ಇಸ್ರೋ ಪ್ರಯೋಗಕ್ಕೆ ಯಶಸ್ಸು
World Test Championship: ಭಾರತದ ಕನಸು ಛಿದ್ರ; ಆಸೀಸ್ ಫೈನಲ್ ಸ್ಥಾನ ಭದ್ರ
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.