Udupi; ಯುವಕನನ್ನು ಅಟ್ಟಾಡಿಸಿ ಮಾರಣಾಂತಿಕ ಹಲ್ಲೆ; ದೂರು
Team Udayavani, Mar 26, 2024, 12:33 AM IST
ಉಡುಪಿ: ಯುವಕನನ್ನು ಅಟ್ಟಾಡಿಸಿ 6 ಮಂದಿಯ ತಂಡವೊಂದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮಣಿಪಾಲದ ಸರಳೇಬೆಟ್ಟು ಬಳಿ ನಡೆದಿದೆ.
ಮುಂಬಯಿ ಮೂಲದ ಆರುಶ್ ಕುಮಾರ್ (21) ಹಲ್ಲೆಗೊಳಗಾದ ಯುವಕ. ಆರುಷ್ ಕುಮಾರ್ ಮೇಲೆ ಹಲ್ಲೆ ನಡೆಸುತ್ತಿರುವ ಸಂಪೂರ್ಣ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಯುವಕರ ತಂಡ ರೆಸ್ಟೋರೆಂಟ್ನಲ್ಲಿನಲ್ಲಿದ್ದ ವೇಳೆ ಆ ತಂಡದ ಓರ್ವನಿಗೆ ಆರುಶ್ ಕುಮಾರ್ನ ಕಾಲು ತಾಗಿತ್ತು. ಈ ಹಿನ್ನೆಲೆಯಲ್ಲಿ ತಗಾದೆ ತೆಗೆದ ಯುವಕರ ತಂಡ ರೆಸ್ಟೋರೆಂಟ್ನಲ್ಲಿ ಹಲ್ಲೆ ನಡೆಸಿದೆ. ಮಾತ್ರವಲ್ಲದೆ ಆರುಶ್ ವಾಸಿಸುತ್ತಿದ್ದ ಅಪಾರ್ಟ್ಮೆಂಟ್ವರೆಗೆ ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಆರುಷ್ ಒಬ್ಬನೇ ಅಪಾರ್ಟ್ಮೆಂಟ್ನಲ್ಲಿ ವಾಸಿಸುತ್ತಿದ್ದು, ಯುವಕರ ತಂಡ ಆತನ ಕೊಠಡಿಯವರೆಗೆ ಅಟ್ಟಾಡಿಸಿಕೊಂಡು ಹೋಗಿದ್ದರು.ಆತನನ್ನು ಕೊಠಡಿಯೊಳಗೆ ಹೋಗಲು ಬಿಡದೆ ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವಿಚಾರ ತಿಳಿದ ಆರುಶ್ ಸ್ನೇಹಿತರು ಆತನನ್ನು ರಕ್ಷಿಸಲು ಬಂದಿದ್ದಾರೆ. ಆ ಬಳಿಕ ಯುವಕರ ತಂಡ ಆರುಶ್ಗೆ ಮತ್ತೊಮ್ಮೆ ಹಲ್ಲೆ ನಡೆಸುವುದಾಗಿ ಬೆದರಿಕೆ ಹಾಕಿದೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಿಸಿ ಟಿವಿ ಹಾಗೂ ಯುವಕರ ಮೊಬೈಲ್ ಸಂಖ್ಯೆ ಆಧಾರದ ಮೇಲೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಆರು ಮಂದಿ ವಶಕ್ಕೆ
ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಗಳಾದ ರಿಷಿತ್, ಗಗನ್, ದಿಲೀಪ್, ತನಿಷ್, ಅಂಕಿತ್ ಮತ್ತು ಓರ್ವ ಬಾಲಕನನ್ನು ವಶಕ್ಕೆ ಪಡೆಯ ಲಾಗಿದ್ದು, ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಎಸ್ಪಿ ಡಾ| ಕೆ. ಅರುಣ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.