Udupi: ಸಾಂಕ್ರಾಮಿಕ ರೋಗಗಳ ಬಗ್ಗೆ ಮುಂಜಾಗ್ರತೆಗೆ ಸೂಚನೆ
Team Udayavani, Aug 16, 2024, 5:27 PM IST
ಉಡುಪಿ: ಜಿಲ್ಲಾದ್ಯಂತ ಕಳೆದ ಕೆಲವು ದಿನಗಳಿಂದ ಮಳೆ ಕಡಿಮೆಯಾಗಿರುವ ಹಿನ್ನೆಲೆ ಡೆಂಗ್ಯೂ, ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳ ಭೀತಿ ಹರಡುವ ಸಂಭವ ಹೆಚ್ಚಾಗಿದೆ.
ಈ ನೆಲೆಯಲ್ಲಿ ನಗರಸಭೆ ವ್ಯಾಪ್ತಿಯ ಸಾರ್ವಜನಿಕರು ಸುತ್ತಮುತ್ತಲಿನ ಪರಿಸರವನ್ನು ಸ್ವತ್ಛವಾಗಿ ಇಟ್ಟುಕೊಳ್ಳುವುದು, ಗೂಡಂಗಡಿ ಮಾಲಕರು ಎಳನೀರು ಬೊಂಡವನ್ನು ಅಂದೇ ವಿಲೇವಾರಿ ಮಾಡುವುದು, ಚರಂಡಿಗೆ ಕಸ ಕಡ್ಡಿ, ಪ್ಲಾಸ್ಟಿಕ್ ತ್ಯಾಜ್ಯ ಹಾಗೂ ಇತರೆ ಯಾವುದೇ ತ್ಯಾಜ್ಯಗಳನ್ನು ಎಸೆಯದಂತೆ ಸೂಚಿಸಲಾಗಿದೆ.
ಅಂಗಡಿ ಸುತ್ತಮುತ್ತಲಿರುವ ಕಸ ತ್ಯಾಜ್ಯಗಳನ್ನು ಸಂಗ್ರಹಿಸಿ ನಗರಸಭೆಗೆ ವಿಲೇ ಮಾಡಲು ಸೂಚಿಸಲಾಗಿದೆ. ಇದರ ಹೊರತಾಗಿಯೂ ಯಾವುದೇ ಉದ್ದಿಮೆ, ಹೋಟೆಲ್, ಫಾಸ್ಟ್‌ಫುಡ್ ಸ್ಟಾಲ್, ಗೂಡಂಗಡಿಗಳಲ್ಲಿ ಈ ಬಗ್ಗೆ ಕ್ರಮ ವಹಿಸದೇ ಇದ್ದಲ್ಲಿ ನೋಟಿಸ್ ನೀಡಿ 5,000 ರೂ. ದಂಡ ವಿಧಿಸುವುದರೊಂದಿಗೆ ಅಂತಹ ಉದ್ದಿಮೆಗಳ ಉದ್ದಿಮೆ ಪರವಾನಿಗೆ ರದ್ದುಪಡಿಸಲಾಗುವುದು ಎಂದು ಪೌರಾಯುಕ್ತರ ಕಚೇರಿ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.