Udupi; ಹೋಬಳಿ ಮಟ್ಟದಲ್ಲಿ ಲೋಕಾಯುಕ್ತ ಕಾಯ್ದೆ ಅರಿವು: ಉಪಲೋಕಾಯುಕ್ತ


Team Udayavani, Feb 4, 2024, 11:27 PM IST

Udupi; ಹೋಬಳಿ ಮಟ್ಟದಲ್ಲಿ ಲೋಕಾಯುಕ್ತ ಕಾಯ್ದೆ ಅರಿವು: ಉಪಲೋಕಾಯುಕ್ತ

ಉಡುಪಿ: ನ್ಯಾಯಾಧೀಶರು ಸಮಯ, ಸಂದರ್ಭಕ್ಕೆ ಅನುಗುಣವಾಗಿ ಕೆಲಸ ಮಾಡಬೇಕು. ಅವರ ಕರ್ತವ್ಯದಿಂದ ಜನರಿಗೆ ತೊಂದರೆ ಉಂಟಾಗಬಾರದು. ಯಾರ ಕರ್ತವ್ಯ ಲೋಪ ಆಗಿದೆ ಎಂಬುದನ್ನು ಪರಿಗಣಿಸಿ ಸರಕಾರಕ್ಕೆ ವರದಿ ಸಲ್ಲಿಸುವ ಅಧಿಕಾರ ಲೋಕಾಯುಕ್ತಕ್ಕಿದೆ.

ಲೋಕಾಯುಕ್ತ ಕಾಯ್ದೆಯನ್ನು ತಿಳಿದುಕೊಳ್ಳುವ ಮೂಲಕ ಹೋಬಳಿ ಮಟ್ಟದಲ್ಲಿಯೇ ಅರಿವು ಮೂಡಿಸುವ ಕೆಲಸವಾಗಬೇಕು ಎಂದು ಉಪಲೋಕಾಯುಕ್ತ ನ್ಯಾ| ಕೆ.ಎನ್‌. ಫ‌ಣೀಂದ್ರ ಹೇಳಿದರು.

ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಆವರಣದಲ್ಲಿ ರವಿವಾರ ನಡೆದ, “ಉತ್ತಮ ಸಾರ್ವಜನಿಕ ಆಡಳಿತದಲ್ಲಿ ರಾಜ್ಯ ಲೋಕಾಯುಕ್ತ ಸಂಸ್ಥೆ ಮತ್ತು ಕಾನೂನು ಸೇವಾ ಪ್ರಾಧಿಕಾರದ ಪಾತ್ರ’ ಕುರಿತು ಅರಿವು ಕಾರ್ಯಕ್ರಮ ಹಾಗೂ ಜಿಲ್ಲಾ ಲೋಕಾಯುಕ್ತ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಆಪಾದನೆಗಳು ಬಂದಾಗ ನ್ಯಾಯಾಧೀಶರು ಕಾಯ್ದೆಗಳ ಬಗ್ಗೆ ಸೂಕ್ತ ಅಧ್ಯಯನ ನಡೆಸಬೇಕು. ಆಡಳಿತಾತ್ಮಕವಾಗಿ ಕೆಲಸಗಳನ್ನು ತ್ವರಿತಗತಿಯಲ್ಲಿ ಮಾಡಿ ಜನರ ಸಮಸ್ಯೆಗಳಿಗೆ ನ್ಯಾಯ ಒದಗಿಸಬೇಕು. ಪ್ರಕರಣಗಳು ವಿಳಂಬವಾದಷ್ಟು ಲಂಚ ಹೆಚ್ಚಾಗುತ್ತದೆ. ಹಣ, ಪ್ರಭಾವ ಇಲ್ಲದೆ ಕಡತಗಳು ಮುಂದುವರಿಯುವುದಿಲ್ಲ ಎಂಬ ಭಾವನೆ ಜನರಲ್ಲಿ ಮೂಡಬಾರದು.ಕಾನೂನುಬಾಹಿರವಾಗಿಯೂ ಕೆಲಸ ಮಾಡಬಾರದು ಎಂದರು.

ಜನಸೇವೆಯಿಂದ ಆತ್ಮತೃಪ್ತಿ
ನ್ಯಾಯದಾನದ ಜತೆಗೆ ಜನಸೇವೆ ಮಾಡುವ ಕೆಲಸ ಉತ್ತಮವಾದುದು. ಜನಸೇವೆಯಿಂದ ಆತ್ಮತೃಪ್ತಿ ಸಿಗುತ್ತದೆ. ನ್ಯಾಯಾಂಗ ವ್ಯವಸ್ಥೆಯ ಮೇಲಿನ ನಂಬಿಕೆಯಿಂದ ಜನರು ನ್ಯಾಯಾಲಯಕ್ಕೆ ಬರುತ್ತಾರೆ. ಆ ನಂಬಿಕೆಯನ್ನು ಉಳಿಸುವ ಕೆಲಸವಾಗಬೇಕು. ಲೋಕಾಯುಕ್ತ ಹಾಗೂ ಕಾನೂನು ಸೇವಾ ಪ್ರಾಧಿಕಾರಕ್ಕೆ ಅವಿನಾಭಾವ ಸಂಬಂಧವಿದೆ. ಇಬ್ಬರೂ ಕೈಜೋಡಿಸಿದರೆ ಉತ್ತಮ ಕೆಲಸ ನಿರ್ವಹಿಸಲು ಸಾಧ್ಯವಿದೆ ಎಂದರು.

ಆರ್ಥಿಕ, ಸಾಮಾಜಿಕ, ನ್ಯಾಯಾಂಗ ವ್ಯವಸ್ಥೆಯನ್ನು ಬಲಪಡಿಸಬೇಕು. ಜನರ ಅಭಿವೃದ್ಧಿಯಿಂದ ದೇಶದ ಅಭಿವೃದ್ಧಿಯಾಗಲು ಸಾಧ್ಯವಿದೆ. ಸಾರ್ವಜನಿಕ ವ್ಯವಹಾರಗಳನ್ನು ಕಾನೂನಾತ್ಮಕವಾಗಿ ಪರಿಹರಿಸಬೇಕು ಎಂದು ಹೇಳಿದರು.

ಉಡುಪಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪ ಅಧ್ಯಕ್ಷತೆ ವಹಿಸಿದ್ದರು. ಉಪ ಲೋಕಾಯುಕ್ತರನ್ನು ಸಮ್ಮಾನಿಸಲಾಯಿತು.

ರಾಜ್ಯ ಲೋಕಾಯುಕ್ತ ವಿಚಾರಣೆಗಳ ಉಪನಿಬಂಧಕ ಎಂ.ವಿ. ಚೆನ್ನಕೇಶವ ರೆಡ್ಡಿ, ಲೋಕಾಯುಕ್ತ ಪ್ರಭಾರ ಸಹಾಯಕ ನಿಬಂಧಕ ರಂಗೇಗೌಡ, ಉಪ ಲೋಕಾಯುಕ್ತರ ಆಪ್ತ ಕಾರ್ಯದರ್ಶಿ ಕಿರಣ್‌ ಪಿ.ಎಂ. ಪಾಟೀಲ್‌, ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್‌., ಲೋಕಾಯುಕ್ತ ಪೊಲೀಸ್‌ ಅಧೀಕ್ಷಕ ಸಿ.ಎ. ಸೈಮನ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್‌ ದಾಳಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

puttige-5

Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.