ಉಡುಪಿ ಮಕ್ಕಳ ಸ್ನೇಹಿ ಜಿಲ್ಲೆಯಾಗಲಿ: ಜಿ.ಪಂ. ಅಧ್ಯಕ್ಷರ ಆಶಯ

ಮಕ್ಕಳ ದಿನಾಚರಣೆ; ಚೈಲ್ಡ್‌ ಲೈನ್‌ ಸೇ ದೋಸ್ತಿ ಸಪ್ತಾಹ

Team Udayavani, Nov 15, 2019, 5:51 AM IST

1CHILD

ಉಡುಪಿ: ಉಡುಪಿ ಜಿಲ್ಲೆಯನ್ನು ಮಕ್ಕಳ ಸ್ನೇಹಿ ಜಿಲ್ಲೆಯನ್ನಾಗಿ ರೂಪಿಸಲು ಜಿಲ್ಲಾಡಳಿತದೊಂದಿಗೆ ವಿವಿಧ ಸ್ವಯಂ ಸೇವಾ ಸಂಘಟನೆಗಳು ಸೇರಿದಂತೆ ಎಲ್ಲರ ಸಹಕಾರ ಅತ್ಯಗತ್ಯ ಎಂದು ಜಿ.ಪಂ. ಅಧ್ಯಕ್ಷ ದಿನಕರ ಬಾಬು ಹೇಳಿದ್ದಾರೆ.

ಅವರು ಗುರುವಾರ ಜಿಲ್ಲಾಡಳಿತ, ಜಿ. ಪಂ., ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ರೋಟರಿ ಉಡುಪಿ ಮತ್ತು ಚೈಲ್ಡ್‌ ಹೆಲ್ಪ್ಲೈನ್‌ ಸಹಯೋಗದಲ್ಲಿ ವಳಕಾಡು ಪ್ರೌಢಶಾಲೆಯಲ್ಲಿ ನಡೆದ ಮಕ್ಕಳ ದಿನಾಚರಣೆ ಮತ್ತು ಚೈಲ್ಡ್‌ ಲೈನ್‌ ಸೇ ದೋಸ್ತಿ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಮಕ್ಕಳ ಹಕ್ಕು ಮತ್ತು ಸ್ವಾತಂತ್ರ್ಯಕ್ಕೆ ಧಕ್ಕೆ ಬಾರದ ಸಮಾಜ ನಿರ್ಮಾಣ ಮಾಡುವ ಮೂಲಕ ಹಾಗೂ ಚೈಲ್ಡ್‌ ಹೆಲ್ಪ್ ಲೈನ್‌ನ ಕಾರ್ಯಗಳಿಗೆ ಎÇÉ ರೀತಿಯ ಬೆಂಬಲ ನೀಡುವ ಮೂಲಕ ಜಿಲ್ಲೆಯನ್ನು ಮಕ್ಕಳ ಸ್ನೇಹಿ ಜಿಲ್ಲೆಯಾಗಿಸಲು ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ. ಮಕ್ಕಳಿಗೆ ನೀಡುವ ಶಿಕ್ಷಣ ಮಟ್ಟದಲ್ಲಿ ಇನ್ನಷ್ಟು ಸುಧಾರಣೆ ಆಗಬೇಕಿದೆ ಹಾಗೂ ಮಕ್ಕಳಲ್ಲಿನ ಬುದ್ಧಿವಂತಿಕೆಯನ್ನು ಬಳಸಿಕೊಳ್ಳಲು ಸೂಕ್ತ ಯೋಜನೆ ರೂಪಿಸುವ ಅಗತ್ಯವಿದೆ ಎಂದು ಹೇಳಿದರು.

ಪ್ರತಿಜ್ಞಾವಿಧಿ ಬೋಧನೆ
ಮಕ್ಕಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದ ಜಿಲ್ಲಾಧಿಕಾರಿ ಜಗದೀಶ್‌, ಜವಾಹರ ಲಾಲ್‌ ನೆಹರೂ ಅವರಿಗೆ ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ಇದ್ದು, ಇಂದಿನ ಮಕ್ಕಳೇ ಮುಂದಿನ ಭಾರತ, ಭಾರತ ಸದೃಢವಾಗಲು ಮಕ್ಕಳನ್ನು ಸದೃಢರನ್ನಾಗಿ ಮಾಡಬೇಕು ಎಂದು ಹೇಳಿದ್ದರು, ಮಕ್ಕಳಿಗೆ ಶಿಸ್ತು ಕಲಿಸುವುದು ಮಾತ್ರವಲ್ಲ ಅವರ ಭಾವನೆಗಳನ್ನು ಅರಿಯುವುದರ ಬಗ್ಗೆ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸುವವರು ತಿಳಿದಿರಬೇಕು, ಶಿಸ್ತಿನ ಹೆಸರಲ್ಲಿ ಮಕ್ಕಳನ್ನು ಕಟ್ಟಿಹಾಕಬೇಡಿ, ಮಕ್ಕಳ ದಿನಾಚರಣೆ, ಮಕ್ಕಳ ಹುಟ್ಟುಹಬ್ಬದ ದಿನವಾದರೂ ಮಕ್ಕಳಿಗೆ ಅವರ ಇಷ್ಟದ ಉಡುಪು ಧರಿಸಿ ಶಾಲೆಗೆ ಬರಲು ಅವಕಾಶ ನೀಡಿ, ಶಿಕ್ಷಣ ಎಂಬುದು ಮಕ್ಕಳಿಗೆ ಪಠ್ಯ ಮಾತ್ರವಾಗದೆ ಅವರ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿರಲಿ. ಮಕ್ಕಳಲ್ಲಿನ ಕ್ರೀಡಾ ಮತ್ತು ಸಾಂಸ್ಕೃತಿಕ ಪ್ರತಿಭೆಯನ್ನು ಗುರುತಿಸಿ ಪೋ›ತ್ಸಾಹಿಸಬೇಕು ಎಂದು ಹೇಳಿದರು.

ಶಾಲೆಯಲ್ಲಿ ನೀರು ಕುಡಿಯಲು ಬೆಲ್‌
ಕೇರಳದಲ್ಲಿ ಮಕ್ಕಳಿಗೆ ನೀರು ಕುಡಿಯಲು ದಿನದಲ್ಲಿ 3 ಬಾರಿ ಶಾಲಾ ಬೆಲ್‌ ಬಾರಿಸುವ ಪದ್ಧತಿ ಇದ್ದು ಇದರಿಂದ ಮಕ್ಕಳ ಆರೋಗ್ಯದಲ್ಲಿ ಮಹತ್ತರ ಸುಧಾರಣೆಯಾಗಿರುವುದು ಕಂಡು ಬಂದಿದೆ. ಮಕ್ಕಳ ಆರೋಗ್ಯದ ದೃಷ್ಟಿಯಿಂದ ಹೆಚ್ಚು ನೀರು ಕುಡಿಯುವುದು ಅಗತ್ಯವಾಗಿದೆ. ಉಡುಪಿ ಜಿಲ್ಲೆಯಲ್ಲೂ ಸಹ ಈ ಯೋಜನೆಯನ್ನು ಜಾರಿಗೊಳಿಸುವ ಕುರಿತಂತೆ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಸೂಚಿಸುವುದಾಗಿ ತಿಳಿಸಿದ ಡಿಸಿ ಜಗದೀಶ್‌, ಮಕ್ಕಳ ಸುರಕ್ಷತೆ ಮತ್ತು ರಕ್ಷಣೆಗೆ ಸಂಬಂಧಿಸಿ ಇಡೀ ಜಿಲ್ಲಾಡಳಿತ ಮಕ್ಕಳೊಂದಿಗಿದೆ ಎಂದು ತಿಳಿಸಿದರು.

ಅಧಿಕಾರಿಗಳೊಂದಿಗೆ ಸಂವಾದ
ಅಧಿಕಾರಿಗಳೊಂದಿಗೆ ನಡೆದ ಸಂವಾದ ಕಾರ್ಯ ಕ್ರಮದಲ್ಲಿ ಮಾತನಾಡಿದ ವಿದ್ಯಾರ್ಥಿನಿ ರಕ್ಷಿತಾ, ವಿವಿಧ ಆ್ಯಪ್‌ಗ್ಳ ಮೂಲಕ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ ಮತ್ತು ಗ್ರಾಮೀಣ ಪ್ರದೇಶದ ಶಾಲೆಗಳಲ್ಲಿ ಕಂಪ್ಯೂಟರ್‌ ಶಿಕ್ಷಣ ಸ್ಥಗಿತಗೊಂಡಿದ್ದು ಈ ನೆರವನ್ನು ಒದಗಿಸುವಂತೆ ಜಿಲ್ಲಾಧಿಕಾರಿ ಅವರನ್ನು ಕೋರಿದರು.

ವಿವಿಧ ಆ್ಯಪ್‌ಗ್ಳಲ್ಲಿ ಪಾಠ ಮಾಡುವ ಹೆಚ್ಚಿನ ಶಿಕ್ಷಕರು ಉಡುಪಿ ಮತ್ತು ದ.ಕ ಜಿಲ್ಲೆಯ ಶಿಕ್ಷಕರೇ ಇದ್ದಾರೆ, ಸರಕಾರಿ ಶಾಲೆಗಳಲ್ಲಿ ಆ್ಯಪ್‌ಗ್ಳ ಮೂಲಕ ಬೋಧನೆ ವಿಧಾನ ಕುರಿತಂತೆ ಸರಕಾರದ ಮಟ್ಟದಲ್ಲಿ ತೀರ್ಮಾನ ನಡೆಯಬೇಕು ಹಾಗೂ ಶಾಲೆಗಳಲ್ಲಿ ಕಂಪ್ಯೂಟರ್‌ ಶಿಕ್ಷಣ ಕುರಿತಂತೆ ಹಲವು ಕಡೆಗಳಲ್ಲಿ ಎಸ್‌.ಡಿ.ಎಂ.ಸಿ.ಗಳ ಮತ್ತು ವಿವಿಧ ಸಿ.ಎಸ್‌.ಆರ್‌. ನಿಧಿ ಮೂಲಕ ಕಂಪ್ಯೂಟರ್‌ ನೀಡಲಾಗುತ್ತಿದೆ. ಉಳಿದಂತೆ ಎಲ್ಲ ಶಾಲೆಗಳಲ್ಲಿ ಕಂಪ್ಯೂಟರ್‌ ಶಿಕ್ಷಣ ನೀಡುವುದು ಸಹ ಸರಕಾರದ ಮಟ್ಟದಲ್ಲಿ ತೀರ್ಮಾನ ನಡೆಯಬೇಕು. ತಾವು ಸಲ್ಲಿಸಿರುವ ಈ ಅಹವಾಲನ್ನು ಶಿಕ್ಷಣ ಇಲಾಖೆ ಮೂಲಕ ಸರಕಾರಕ್ಕೆ ಸಲ್ಲಿಸಲಾಗುವುದು ಎಂದರು.

ವಳಕಾಡು ಶಾಲೆಯಲ್ಲಿ 700 ವಿಧ್ಯಾರ್ಥಿಗಳಿದ್ದು ಒಬ್ಬರೇ ದೈಹಿಕ ಶಿಕ್ಷಕರಿದ್ದಾರೆ ಎಂಬ ಪ್ರಶ್ನೆಗೆ ಹೆಚ್ಚವರಿ ದೈಹಿಕ ಶಿಕ್ಷಕರ ನೇಮಕಕ್ಕೆ ಸೂಚಿಸಲಾಗುವುದು ಎಂದು ಡಿಸಿ ತಿಳಿಸಿದರು.

ತೊಂದರೆಗೆ ಒಳಗಾದ ಮಕ್ಕಳು 1098 ಗೆ ಕರೆ ಮಾಡಲು ಎÇÉ ಸಂದರ್ಭದಲ್ಲಿ ಸಾಧ್ಯವಾಗದ ಕಾರಣ ಪ್ರತ್ಯೇಕ ಸಹಾಯವಾಣಿ ಕೇಂದ್ರ ತೆರೆದು ಅಲ್ಲಿಗೆ ತೆರಳಿ ಸಮಸ್ಯೆ ತಿಳಿಸಲು ಕ್ರಮ ಕೈಗೊಳ್ಳಲು ಸಾಧ್ಯವಿಲ್ಲವೇ ಎಂದ ವಿದ್ಯಾರ್ಥಿನಿ ದಿವ್ಯಶ್ರೀ ಪ್ರಶ್ನೆಗೆ ಉತ್ತರಿಸಿದ ಎಸ್‌.ಪಿ. ನಿಶಾ ಜೇಮ್ಸ್‌, ಜಿಲ್ಲೆಯ ಎÇÉ ಪೊಲೀಸ್‌ ಠಾಣೆಯಲ್ಲಿ ಮಕ್ಕಳ ಸಮಸ್ಯೆ ಆಲಿಸಲು ಅಧಿಕಾರಿ ಮತ್ತು ಮಹಿಳಾ ಸಿಬಂದಿ ನೇಮಕ ಮಾಡಿದ್ದು, ಅವರಿಗೆ ಮಕ್ಕಳ ಸಮಸ್ಯೆ ಆಲಿಸುವ ಕುರಿತು ವಿಶೇಷ ತರಬೇತಿಯನ್ನೂ ನೀಡಲಾಗಿದೆ. ಮಕ್ಕಳು ಅವರಲ್ಲಿ ತಮ್ಮ ಸಮಸ್ಯೆ ತಿಳಿಸಿದ್ದಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಬಾಲ್ಯ ವಿವಾಹ ನಿಷೇಧ ಕುರಿತು ಭಿತ್ತಿಪತ್ರವನ್ನು ಎಸ್‌.ಪಿ. ನಿಶಾ ಜೇಮ್ಸ್‌ ಬಿಡುಗಡೆಗೊಳಿಸಿದರು.

ಭಾಗವಹಿಸಿದ್ದ ವಿವಿಧ ಇಲಾಖೆಗಳ ಎಲ್ಲ ಅಧಿಕಾರಿ ಗಳಿಗೆ ಮಕ್ಕಳ ರಕ್ಷಣೆ ಕುರಿತು ರಕ್ಷಾಬಂಧನವನ್ನು ಶಾಲಾ ಮಕ್ಕಳು ಕಟ್ಟಿದರು.

ಜಿ. ಪಂ. ಸಿಇಒ ಪ್ರೀತಿ ಗೆಹೊÉàಟ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್‌, ಜಿಲ್ಲಾ ಕಾರ್ಮಿಕ ಅಧಿಕಾರಿ ಬಾಲಕೃಷ್ಣ, ಶಿಕ್ಷಣ ಇಲಾಖೆಯ ಜಾಹ್ನವಿ, ಬಾಲ ಕಲ್ಯಾಣ ಸಮಿತಿ ಅಧ್ಯಕ್ಷ ರೋನಾಲ್ಡ್‌ ಬಿ. ಫ‌ುರ್ಟಾಡೋ, ಮಾಜಿ ಅಧ್ಯಕ್ಷ ಬಿ.ಕೆ. ನಾರಾಯಣ ಉಪಸ್ಥಿತರಿದ್ದರು.

ಉಡುಪಿ ರೋಟರಿ ಅಧ್ಯಕ್ಷ ಜನಾರ್ದನ ಭಟ್‌ ಸ್ವಾಗತಿಸಿ, ಚೈಲ್ಡ್‌ ಹೆಲ್ಪ್ ಲೈನ್‌ನ ಅಧ್ಯಕ್ಷ ರಾಮಚಂದ್ರ ಉಪಾಧ್ಯಾಯ ಪ್ರಾಸ್ತಾವಿಕವಾಗಿ ಮಾತುಗಳ ನ್ನಾಡಿದರು. ವಳಕಾಡು ಶಾಲೆಯ ಮುಖ್ಯೋ ಪಾಧ್ಯಾಯಿನಿ ನಿರ್ಮಲಾ ವಂದಿಸಿದರು.

ಟೋಲ್‌ಫ್ರೀ ನಂಬರ್‌ 1098
ಅಧ್ಯಕ್ಷತೆ ವಹಿಸಿದ್ದ ಹಿರಿಯ ಸಿವಿಲ್‌ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ ಮಾತನಾಡಿ, ಮಕ್ಕಳು ಯಾವುದೇ ಸಮಸ್ಯೆಗೆ ಒಳಗಾದಲ್ಲಿ ಅಥವಾ ಸಮಸ್ಯೆಗಳಿಂದ ಬಳಲುತ್ತಿದ್ದ ಮಕ್ಕಳು ಕಂಡು ಬಂದಲ್ಲಿ ಟೋಲ್‌ ಫ್ರೀ ಸಂಖ್ಯೆ 1098ಗೆ ಕರೆ ಮಾಡಿ ನೆರವು ಪಡೆಯುವಂತೆ ತಿಳಿಸಿದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.