ಉಡುಪಿ: ಜಾಥಾ, ಮೆರವಣಿಗೆಗೆ ನಿಷೇಧ

Team Udayavani, Sep 5, 2017, 7:40 AM IST

bjp.jpg

ಉಡುಪಿ: ಮಂಗಳೂರು ಚಲೋ ಜಾಥಾಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ತಡೆ ಹೇರಿದ ಬೆನ್ನಲ್ಲಿಯೇ ಉಡುಪಿಯಲ್ಲೂ ಆ ರಾಲಿಗೆ ಸಂಬಂಧಿಸಿ ಜಾಥಾ, ಮೆರವಣಿಗೆ, ಪ್ರತಿಭಟನೆ ನಡೆಸುವುದನ್ನು ನಿಷೇಧಿಸಲಾಗಿದೆ.

ಉಡುಪಿ ಜಿಲ್ಲೆಯ ಕಾನೂನು ಸುವ್ಯವಸ್ಥೆಗೆ ಭಂಗವಾಗುವ ಸಾಧ್ಯತೆ ಹಾಗೂ ಶಾಂತಿಯುತ ಜನಜೀವನಕ್ಕೆ ತೊಂದರೆಯಾಗಬಾರದೆನ್ನುವ ನಿಟ್ಟಿನಲ್ಲಿ ಸೆ. 5ರ ಬೆಳಗ್ಗೆ ಗಂಟೆ 6ರಿಂದ ಸೆ. 9ರ ಬೆಳಗ್ಗೆ 6 ಗಂಟೆಯವರೆಗೆ ಜಿಲ್ಲೆಯಲ್ಲಿ ಬೈಕ್‌ ರ್ಯಾಲಿ ನಡೆಸುವುದನ್ನು ಅಥವಾ ಯಾವುದೇ ಬೈಕ್‌ ರ್ಯಾಲಿ ಜಿಲ್ಲೆ ಪ್ರವೇಶಿಸುವುದನ್ನು ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. 

ಈ ದಿನಗಳಲ್ಲಿ ಯಾವುದೇ ಸಂಘಟನೆಗಳ ವಾಹನ ಜಾಥಾ, ಪಾದಯಾತ್ರೆ, ಮೆರವಣಿಗೆ, ಪ್ರತಿಭಟನೆ, ಸಾರ್ವಜನಿಕ ಸಭೆ, ಸಮಾರಂಭಗಳನ್ನು ನಿಷೇಧಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

ರಾಲಿ ನಡೆದೇ ನಡೆಯುತ್ತದೆ: ಬಿಜೆಪಿ
ಉಡುಪಿ: ಮಂಗಳೂರು ಚಲೋಗೆ ಸಂಬಂಧಿಸಿ ಬಿಜೆಪಿ ಯುವ ಮೋರ್ಚಾ ರಾಲಿಯ ಮಾರ್ಗ, ಸಂಖ್ಯೆಯ ನಿರೀಕ್ಷೆ, ವಸತಿ ವ್ಯವಸ್ಥೆಗಳ ಬಗ್ಗೆ ಉಡುಪಿ ಜಿಲ್ಲಾ ಎಸ್ಪಿಯವರಿಗೆ ಸೋಮವಾರ ವಿವರಣೆ ನೀಡಲಾಗಿದೆ. 

“ನಮ್ಮ ರಾಲಿಗೆ ಈಗಾಗಲೇ ಭರದ ಸಿದ್ಧತೆ ನಡೆಸಲಾಗಿದೆ. ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಂಡರೂ ರಾಲಿ ನಡೆದೇ ನಡೆಯುತ್ತದೆ’ ಎಂದು ಮೋರ್ಚಾ ಜಿಲ್ಲಾಧ್ಯಕ್ಷ ಪೆರ್ಣಂಕಿಲ ಶ್ರೀಶ ನಾಯಕ್‌ ತಿಳಿಸಿದ್ದಾರೆ. 

ಹುಬ್ಬಳ್ಳಿ, ಶಿವಮೊಗ್ಗದಿಂದ ಆಗಮಿಸುವ ಬೈಕ್‌ ರಾಲಿ ಸೆ. 6-7ರಂದು ಉಡುಪಿ ಜಿಲ್ಲೆಯಲ್ಲಿ ಸಂಚರಿಸಿ ಮಂಗಳೂರಿಗೆ ತೆರಳುವ ಕಾರ್ಯಕ್ರಮವಿದೆ ಎಂದಿದ್ದಾರೆ.

ರಾಲಿಗೆ ಕಾರ್ಕಳದಿಂದ 1,000 ಬೈಕ್‌
ಕಾರ್ಕಳ
: ಮಂಗಳೂರು ಚಲೋ ಕಾರ್ಯಕ್ರಮದಲ್ಲಿ ಕಾರ್ಕಳದಿಂದ 1,000 ಬೈಕ್‌ಗಳಲ್ಲಿ ಕಾರ್ಯಕರ್ತರು ಭಾಗವಹಿಸುವರೆಂದು ಬಿಜೆಪಿ ತಿಳಿಸಿದೆ.

ಯಾವುದೇ ಅಡ್ಡಿ ಆತಂಕಗಳು ಎದುರಾದರೂ ಬೆ„ಕ್‌ ರಾಲಿಗೆ ಯುವ ಮೋರ್ಚಾ ಸಿದ್ಧ ಎಂದು ತಾಲೂಕು ಯುವಮೋರ್ಚಾ ಅಧ್ಯಕ್ಷ ಕರುಣಾಕರ ಎಸ್‌. ಕೋಟ್ಯಾನ್‌, ಬಿಜೆಪಿ ನಗರಾಧ್ಯಕ್ಷ ಆರ್‌. ಅನಂತ ಕೃಷ್ಣ ಶೆಣೆ„ ತಿಳಿಸಿದ್ದಾರೆ.
ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಸೆ.6ರ ಸಂಜೆ 4 ಗಂಟೆಗೆ ಕಾರ್ಕಳ ಪ್ರವೇಶಿಸಲಿದ್ದಾರೆ. ಹೆಬ್ರಿ ಶಕ್ತಿ ಕೇಂದ್ರದ ಕಾರ್ಯಕರ್ತರು 1,000 ಬೈಕ್‌ಗಳಲ್ಲಿ ಶಿವಮೊಗ್ಗದಿಂದ ಬಂದ ಕಾರ್ಯಕರ್ತರನ್ನು ಬರಮಾಡಿಕೊಂಡು ಹೆಬ್ರಿಯ ಬಸ್‌ಸ್ಟಾಂಡ್‌ನ‌ಲ್ಲಿ ಸಭೆ ನಡೆಸಲಿದ್ದಾರೆ. ಕಾರ್ಕಳದಲ್ಲಿ ಶಿವಮೊಗ್ಗದ ಕಾರ್ಯಕರ್ತರು ವಾಸ್ತವ್ಯ ಹೂಡಲಿದ್ದು ಸೆ. 7ರಂದು ಬೆಳಗ್ಗೆ 8.30ಕ್ಕೆ ವಿವಿಧ ಗ್ರಾಮಗಳಿಂದ 1,000 ಬೆ„ಕ್‌ಗಳಲ್ಲಿ ಕಾರ್ಯಕರ್ತರು ಕಾರ್ಕಳ ಬಸ್‌ಸ್ಟಾಂಡ್‌ನ‌ಲ್ಲಿ ಪ್ರತಿಭಟನ ಸಭೆಯನ್ನು ನಡೆಸಿ ಶಿವಮೊಗ್ಗದ ಕಾರ್ಯಕರ್ತರೊಂದಿಗೆ ಮೂಡಬಿದಿರೆಯ ಮೂಲಕ ಮಂಗಳೂರಿಗೆ ತೆರಳಲಿದ್ದಾರೆ ಎಂದವರು ತಿಳಿಸಿದ್ದಾರೆ.

ರಾಲಿಗೆ ಅವಕಾಶ ಬೇಡ:ಯುವ ಕಾಂಗ್ರೆಸ್‌
ಉಡುಪಿ: ಕರ್ನಾಟಕ ರಾಜ್ಯ ಬಿಜೆಪಿ ಯುವ ಮೋರ್ಚಾ ವತಿಯಿಂದ ಸೆ.5ರಿಂದ ಸೆ. 7ರ ವರೆಗೆ ಜರಗಲಿರುವ ಮಂಗಳೂರು ಚಲೋ ಬೈಕ್‌ ರ್ಯಾಲಿಗೆ ಅವಕಾಶ ಕೊಡಬಾರದೆಂದು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್‌ ಆಗ್ರಹಿಸಿದೆ.
ಜಿಲ್ಲೆಯ ಜನರು ಶಾಂತಿ ಸೌಹಾರ್ದತೆಯಿಂದ ಬಾಳುತ್ತಿದ್ದು, ಇಂತಹ ಸಂದರ್ಭದಲ್ಲಿ ಜನರಲ್ಲಿ ಕೋಮು ದ್ವೇಷ ಹಾಗೂ ಜನರ ಭಾವನೆಗಳನ್ನು ಕೆರಳಿಸುವ ಮೂಲಕ ಜಿಲ್ಲೆಯ ಶಾಂತಿಯನ್ನು ಕದಡುವ ಪ್ರಯತ್ನವನ್ನು ಬಿಜೆಪಿ ನಾಯಕರು ಮಾಡುತ್ತಿದ್ದಾರೆ ಎಂದೂ ಕಾಂಗ್ರೆಸ್‌ ಹೇಳಿದೆ.

ಈ ಬಗ್ಗೆ ಉಡುಪಿ ಡಿಸಿ ಹಾಗೂ ಎಸ್‌ಪಿಗೆ ಮನವಿಯನ್ನು ನೀಡಲಾಗುತ್ತಿದೆ ಎಂದು ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ವಿಶ್ವಾಸ್‌ ವಿ. ಅಮೀನ್‌ ತಿಳಿಸಿದ್ದಾರೆ.

ರಾಜ್ಯ ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಅಬ್ದಲ್‌ ಅಜೀಜ್‌, ರವಿಶಂಕರ್‌ ಶೇರಿಗಾರ್‌, ಮೊಹ್ಮದ್‌ ಇಮ್ರಾನ್‌, ಮೆಲ್ವಿನ್‌ ಡಿ’ಸೋಜಾ, ಪ್ರಶಾಂತ್‌ ಪೂಜಾರಿ, ದೀಪಕ್‌ ಕೋಟ್ಯಾನ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Udupi: ಜ. 9-15: ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ

Udupi: ಜ. 9-15: ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ

Malpe: ಹೊಡೆದಾಟ ಪ್ರಕರಣ: ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

Malpe: ಹೊಡೆದಾಟ ಪ್ರಕರಣ: ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.