ಮಹಿಳಾ ಕಾಂಗ್ರೆಸ್: ಆಟಿಡೊಂಜಿ ದಿನ
Team Udayavani, Jul 27, 2017, 7:20 AM IST
ಉಡುಪಿ: ಉಡುಪಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಹಾಗೂ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮವು ಬ್ರಹ್ಮಗಿರಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಬುಧವಾರ ನಡೆಯಿತು.
ಸಚಿವ ಪ್ರಮೋದ್ ಮಧ್ವರಾಜ್ ಅವರು ಕಾರ್ಯಕ್ರಮ ಉದ್ಘಾಟಿಸಿ, ಮಹಿಳೆಯರು ಕುಟುಂಬವನ್ನು ಶಾಂತಿಯಿಂದ ನಡೆಸುವುದರೊಂದಿಗೆ ಉತ್ತಮ ಸಮಾಜವನ್ನು ಕಟ್ಟುವ ಕೆಲಸ ಮಾಡುತ್ತಿರುವುದು ಸಂತೋಷ ಎಂದರು.
ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗೆÛ ಆಟಿಯ ವಿಶೇಷತೆ ಬಗ್ಗೆ ಮಾಹಿತಿ ನೀಡಿದರು. ವೆರೋನಿಕಾ ಕರ್ನೇಲಿಯೋ ಅವರು ಆಟಿಡೊಂಜಿ ದಿನ ಕಾರ್ಯಕ್ರಮಗಳಿಂದಾಗಿ ಮಹಿಳೆಯರು ಸಂಘಟಿತರಾಗುತ್ತಿದ್ದಾರೆ ಎಂದರು.
ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಬ್ಲಾಕ್ ಅಧ್ಯಕ್ಷರಾದ ಸಂಧ್ಯಾ ಶೆಟ್ಟಿ, ಮಮತಾ ಶೆಟ್ಟಿ, ಗೋಪಿ ನಾಯ್ಕ, ಜ್ಯೋತಿ ಪುತ್ರನ್, ಸುಜಾತಾ ಆಚಾರ್ಯ, ಗೌರಿ ದೇವಾಡಿಗ, ಮಲ್ಲಿಕಾ ಪೂಜಾರಿ,ಸುನೀತಾ ಶೆಟ್ಟಿ, ಜಾನಕಿ ನಾಯ್ಕ, ಜಯಶ್ರೀ ಕೃಷ್ಣರಾಜ್, ಪದ್ಮಾವತಿ, ರೋಶನಿ ಒಲಿವೆರಾ, ಕಾಂಗ್ರೆಸ್ ಮುಖಂಡರಾದ ಗಣೇಶ್ ನೆರ್ಗಿ, ರಮೇಶ್ ಕಾಂಚನ್, ಸತೀಶ್ ಅಮೀನ್ ಪಡುಕೆರೆ, ಹರೀಶ್ ಕಿಣಿ, ದಿವಾಕರ ಕುಂದರ್, ಪ್ರಶಾಂತ್ ಪೂಜಾರಿ ಉಪಸ್ಥಿತರಿದ್ದರು.
ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಚಂದ್ರಿಕಾ ಶೆಟ್ಟಿ ಸ್ವಾಗತಿಸಿದರು. ಜ್ಯೋತಿ ಹೆಬ್ಟಾರ್ ಕಾರ್ಯಕ್ರಮ ನಿರೂಪಿಸಿದರು. ಸೆಲಿನಾ ಕರ್ಕಡ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.