ಸಂಸತ್ ಗ್ರಂಥಾಲಯಕ್ಕೆ ಉಡುಪಿಯ ಗ್ರಂಥ
Team Udayavani, Nov 11, 2020, 1:21 AM IST
ಮಹಾಭಾರತದ ಪ್ರತಿಯನ್ನು ಪೇಜಾವರ ಶ್ರೀಗಳು ಸಚಿವ ಪ್ರಹ್ಲಾದ ಜೋಷಿ ಅವರಿಗೆ ಹಸ್ತಾಂತರಿಸಿದರು.
ಉಡುಪಿ: ಸುಮಾರು 100 ವರ್ಷಗಳ ಬಳಿಕ ದೇಶದಲ್ಲಿ ಪ್ರಕಟವಾದ ಮಹಾಭಾರತ ಕೃತಿಯ ಪರಿಷ್ಕೃತ ಆವೃತ್ತಿಯ (ಸಂಸ್ಕೃತದ 24 ಸಂಪುಟ) ಪ್ರತಿಯನ್ನು ಭಾರತದ ಶಕ್ತಿ ಕೇಂದ್ರವಾದ ಸಂಸತ್ತಿನ ಗ್ರಂಥಾಲಯಕ್ಕೆ ಸಲ್ಲಿಸಲಾಗಿದೆ. ಉಡುಪಿ ಪಲಿಮಾರು ಮಠದ ತಣ್ತೀ ಸಂಶೋಧನ ಸಂಸತ್ ವತಿಯಿಂದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರ ನೇತೃತ್ವದಲ್ಲಿ ಸಂಪುಟ ಪ್ರಕಟಗೊಂಡಿತ್ತು. ಇದು ಪೇಜಾವರ ಶ್ರೀ ವಿಶ್ವೇಶತೀರ್ಥರೂ ಸಹಿತ ಅನೇಕ ಪೀಠಾಧೀಶರು ಸಮ್ಮುಖದಲ್ಲಿ ಕೃಷ್ಣಮಠದಲ್ಲಿ ಲೋಕಾರ್ಪಣೆ ಗೊಂಡಿತ್ತು.
ಮಂಗಳವಾರ ದಿಲ್ಲಿಯಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಷಿ ಅವರ ನಿವಾಸದಲ್ಲಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಗ್ರಂಥ ಪ್ರತಿಯನ್ನು ಹಸ್ತಾಂತರಿಸಿದರು.
ತುಳು ಲಿಪಿ ಪ್ರವೇಶ
ಮಹಾಭಾರತ ಗ್ರಂಥಕ್ಕೆ ಪಲಿಮಾರು ಮಠದ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು ತುಳು ಹಸ್ತಾಕ್ಷರವನ್ನು ಹಾಕಿರುವುದರಿಂದ ಸಂಸತ್ ಗ್ರಂಥಾಲಯಕ್ಕೆ ತುಳು ಲಿಪಿ ಪ್ರವೇಶ ಪಡೆದಂತಾಯಿತು. ಪೇಜಾವರ ಮಠದ ವಿಷ್ಣುಮೂರ್ತಿ ಆಚಾರ್ಯ, ಅನಂತ, ಕೃಷ್ಣ ಭಟ್, ವಾಸುದೇವ ಭಟ್ ಪೆರಂಪಳ್ಳಿ, ಪೇಜಾವರ ಮಠದ ದಿಲ್ಲಿ ಶಾಖೆ ವ್ಯವಸ್ಥಾಪಕ
ದೇವಿಪ್ರಸಾದ ಭಟ್ ಉಪಸ್ಥಿತರಿದ್ದರು.
ವಿತ್ತ ಸಚಿವೆಗೆ ಉಡುಪಿ ಸೀರೆ
ಉಡುಪಿಯ ನೇಕಾರರು ತಯಾರಿಸಿದ ಕೈಮಗ್ಗದ ಎರಡು ಸೀರೆಗಳನ್ನು ದೀಪಾವಳಿ ಹಬ್ಬದ ಉಡುಗೊರೆಯಾಗಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾ ರಾಮನ್ ಅವರಿಗೆ ಮಂಗಳವಾರ ಪೇಜಾವರ ಶ್ರೀಪಾದರು ಹಸ್ತಾಂತ ರಿಸಿದರು. ರಜತ ಬಟ್ಟಲಲ್ಲಿ ಶುಭಲಕ್ಷಣವಾದ ಕುಂಕುಮವನ್ನು ಇರಿಸಿ ಕೃಷ್ಣದೇವರ ಪ್ರಸಾದ, ಮಂತ್ರಾಕ್ಷತೆಯನ್ನು ನೀಡಿ ರಾಷ್ಟ್ರದ ಒಳಿಗಾಗಿ ಸಮರ್ಥವಾಗಿ ಕಾರ್ಯನಿರ್ವಹಿಸುವ ಶಕ್ತಿ ದೊರೆಯಲೆಂದು ಹಾರೈಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.