ಉಡುಪಿ-ಚಿಕ್ಕಮಗಳೂರು 14.94 ಲಕ್ಷ ಮತದಾರರು
Team Udayavani, Mar 12, 2019, 1:00 AM IST
ಉಡುಪಿ: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಒಟ್ಟು 8 ವಿಧಾನಸಭಾ ಕ್ಷೇತ್ರಗಳಲ್ಲಿ 14,94,443 ಮತದಾರರು ಇದ್ದಾರೆ. ಇವರಲ್ಲಿ 7,30,288 ಪುರುಷರು, 7,64,105 ಮಹಿಳೆಯರು ಮತ್ತು 50 ಮಂದಿ ಇತರರು ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಎಸ್‌ಪಿ ನಿಶಾ ಜೇಮ್ಸ್, ಸ್ವೀಪ್ ಸಮಿತಿ ಅಧ್ಯಕ್ಷರಾದ ಜಿ.ಪಂ. ಸಿಇಒ ಸಿಂಧೂ ರೂಪೇಶ್, ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಉಪಸ್ಥಿತರಿದ್ದರು.
ಸಹಾಯಕ ಚುನಾವಣಾಧಿಕಾರಿಗಳು
ಕುಂದಾಪುರ- ಕುಂದಾಪುರ ಸಹಾಯಕ ಕಮಿಷನರ್ ಡಾ| ಎಸ್.ಎಸ್. ಮಧುಕೇಶ್ವರ, ಉಡುಪಿ – ಜಂಟಿ ಕೃಷಿ ನಿರ್ದೇಶಕ ಕೆಂಪೇಗೌಡ, ಕಾಪು- ಆಹಾರ ಇಲಾಖೆ ಉಪನಿರ್ದೇಶಕ ಡಾ| ನಾಗರಾಜ್, ಕಾರ್ಕಳ – ಸಂತೋಷ ಕುಮಾರ್, ಶೃಂಗೇರಿ – ಜಿ.ಪಂ. ಯೋಜನಾಧಿಕಾರಿ ನಾಗರಾಜ್, ಮೂಡಿಗೆರೆ- ಚಿಕ್ಕಮಗಳೂರು ಸಹಾಯಕ ಕಮಿಷನರ್ ಶಿವಕುಮಾರ್ ಕೆ.ಎಚ್., ಚಿಕ್ಕಮಗಳೂರು- ಜಿ.ಪಂ. ಉಪಕಾರ್ಯದರ್ಶಿ ವಿ.ಎಸ್. ಹಿರೇಮಠ, ತರಿಕೆರೆ- ತರಿಕೆರೆ ಸಹಾಯಕ ಕಮಿಷನರ್.
ಉಡುಪಿ ಜಿಲ್ಲೆಯ ಉಸ್ತುವಾರಿಯನ್ನು ಉಡುಪಿ ಜಿಲ್ಲಾಧಿಕಾರಿ, ಚಿಕ್ಕಮಗಳೂರು ಜಿಲ್ಲೆಯ ಉಸ್ತುವಾರಿಯನ್ನು ಚಿಕ್ಕಮಗಳೂರು ಜಿಲ್ಲಾಧಿಕಾರಿಯವರು ನೋಡಿಕೊಳ್ಳುತ್ತಾರೆ.
ನೀತಿ ಸಂಹಿತೆ ಜಾರಿ
ಚುನಾವಣಾ ಆಯೋಗದ ನಿರ್ದೇಶನದಂತೆ ಮಾ. 10ರಿಂದ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಜಿಲ್ಲೆಯ ಸಾಮಾಜಿಕ ಅರಣ್ಯ ಉಪಸಂರಕ್ಷಣಾಧಿಕಾರಿ ಭಾಸ್ಕರ ಬಿ. ಅವರನ್ನು ನೋಡಲ್ ಅಧಿಕಾರಿಯಾಗಿ ನಿಯೋಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.