Udupi ಚಿಟ್ಟಾಣಿ, ಟಿ.ವಿ. ರಾವ್ ಪ್ರಶಸ್ತಿ ಪ್ರದಾನ
Team Udayavani, Nov 12, 2023, 11:15 PM IST
ಉಡುಪಿ: ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಆಶ್ರಯದಲ್ಲಿ ಶ್ರೀ ವೀರಾಂಜನೇಯ ಯಕ್ಷ ಮಿತ್ರ ಮಂಡಳಿ ಬಂಗಾರಮಕ್ಕಿ ಮತ್ತು ಚಿಟ್ಟಾಣಿ ಅಭಿಮಾನಿ ಬಳಗ ಉಡುಪಿ ಸಹಯೋಗದೊಂದಿಗೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಶನಿವಾರ ನಡೆದ ಚಿಟ್ಟಾಣಿ ಸಂಸ್ಮರಣ ಯಕ್ಷಗಾನ ಸಪ್ತಾಹದ ಸಮಾರೋಪದಲ್ಲಿ “ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ ಪ್ರಶಸ್ತಿ’ಯನ್ನು ಹಿರಿಯ ಹವ್ಯಾಸಿ ಕಲಾವಿದ ಪ್ರೊ| ಎಂ.ಎಲ್. ಸಾಮಗ ಅವರಿಗೆ ಮತ್ತು “ಟಿ.ವಿ. ರಾವ್ ಪ್ರಶಸ್ತಿ’ಯನ್ನು ಹವ್ಯಾಸಿ ಕಲಾವಿದೆ ಬಿ.ಕೆ. ಸುಮತಿ ರಾವ್ ಅವರಿಗೆ ಪ್ರದಾನ ಮಾಡಲಾಯಿತು.
ಪರ್ಯಾಯ ಶ್ರೀ ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ಪ್ರಶಸ್ತಿ ಪ್ರದಾನಿಸಿ, ಯಕ್ಷಗಾನದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿ ಇತರರನ್ನು ಪ್ರೋತ್ಸಾಹಿಸಿದ ಚಿಟ್ಟಾಣಿ ಯವರ ಹೆಸರಿನಲ್ಲಿ ಇಂತಹ ಕಾರ್ಯಕ್ರಮಗಳನ್ನು ನಡೆಸುತ್ತಿರುವ ಅಭಿಮಾನಿಗಳು ಮತ್ತು ಪ್ರೇಕ್ಷಕರಿಗೂ ಭಗವಂತನ ಅನುಗ್ರಹವಾಗಲಿ ಎಂದು ಹಾರೈಸಿ ಆಶೀರ್ವಚನ ನೀಡಿದರು.
ಹೈಟೆಕ್ ಮೆಡಿಕೇರ್ ಆಸ್ಪತ್ರೆಯ ಡಾ| ಟಿ.ಎಸ್. ರಾವ್, ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಚಿಟ್ಟಾಣಿ ಅಭಿಮಾನಿ ಬಳಗದ ಅಧ್ಯಕ್ಷ ಡಾ| ತಲ್ಲೂರು ಶಿವರಾಮ ಶೆಟ್ಟಿ, ಕಾರ್ಯದರ್ಶಿ ಎಂ. ಗೋಪಿಕೃಷ್ಣ ರಾವ್, ಕಲಾವಿದ ಸುಬ್ರಹ್ಮಣ್ಯ ಚಿಟ್ಟಾಣಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.