ಉಡುಪಿ ನಗರ: ಇನ್ನು 15 ದಿನಕ್ಕೆ ಮಾತ್ರ ನೀರು

Team Udayavani, May 6, 2017, 1:18 PM IST

water.jpg

ಉಡುಪಿ: ಉಡುಪಿ ನಗರಕ್ಕೆ ನೀರು ಪೂರೈಸುವ ಬಜೆ ಜಲಾಶಯದಲ್ಲಿ ನೀರಿನ ಮಟ್ಟ ಡೆಡ್‌ ಸ್ಟೋರೇಜ್‌ಗೆ ತಲುಪಿದ್ದು, ಈಗ ಅಲ್ಲಲ್ಲಿ ಡ್ರೆಜ್ಜಿಂಗ್‌ ಮಾಡಿ ನೀರು ಪೂರೈಸಲಾಗುತ್ತಿದೆ. ಸುಮಾರು 15 ದಿನಗಳ ವರೆಗೆ ಅಂದರೆ ಮೇ 20ರ ವರೆಗೆ ದಿನ ಬಿಟ್ಟು ದಿನ ನೀರು ಪೂರೈಸಲಾಗುವುದು ಎಂದು ಸಚಿವ ಪ್ರಮೋದ್‌ ಮಧ್ವರಾಜ್‌ ಅಧ್ಯಕ್ಷತೆಯಲ್ಲಿ ಶುಕ್ರವಾರ ನಗರಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತ ನಡೆದ ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿದರು.

ಮಾಯ ಗುಂಡಿ, ಶೀರೂರು ಮಠದ ಬಳಿ ಡ್ರೆಜ್ಜಿಂಗ್‌ ಮಾಡಲಾಗಿದ್ದು, ಅಲ್ಲಿಂದ ಭಂಡಾರಿ ಬೆಟ್ಟುವಿಗೆ ಅಲ್ಲಿಂದ ಪುತ್ತಿಗೆಯಲ್ಲಿ ಡ್ರೆಜ್ಜಿಂಗ್‌ ಮಾಡಿ ಅಲ್ಲಿಂದ ಬಜೆ ಜಲಾಶಯಕ್ಕೆ ನೀರು ಪಂಪಿಂಗ್‌ ಮಾಡಲಾಗುತ್ತಿದೆ. ಈಗ ಮಾಣಾಯಿ ಯಲ್ಲಿ ಡ್ರೆಜ್ಜಿಂಗ್‌ ಮಾಡಲಾಗುತ್ತಿದೆ. ನಗರಕ್ಕೆ ಒಟ್ಟು 23 ದಶಲಕ್ಷ ಲೀಟರ್‌ ನೀರು ಅಗತ್ಯವಿದ್ದು, ಈಗ 10 ಗಂಟೆ ಪಂಪಿಂಗ್‌ ಮಾಡಿ 10 ದಶಲಕ್ಷ ಲೀಟರ್‌ ನೀರು ಪೂರೈಸಲಾಗುತ್ತಿದೆ. ಡ್ರೆಜ್ಜಿಂಗ್‌ ಮಾಡಿ 300ರಿಂದ 350 ಲೀಟರ್‌ ನೀರು ಸಿಗಲಿದ್ದು, ದಿನಕ್ಕೆ ಸುಮಾರು 10 ದಶಲಕ್ಷ ಲೀಟರ್‌ ಹಾಗೆ ಜೂ. 5ರ ವರೆಗೂ ಮಳೆ ಬರದಿದ್ದರೆ ಕೊಡುವ ಪ್ರಯತ್ನ ಮಾಡಲಾಗುವುದು ಎಂದು ಅಧಿ ಕಾರಿಗಳು ತಿಳಿಸಿದರು. 

ನೀರಿನ ಗುಣಮಟ್ಟ ಪರಿಶೀಲಿಸಿ: ಟ್ಯಾಂಕರ್‌ಗಳಿಂದ ಪೂರೈಕೆ ಮಾಡುತ್ತಿರುವ ನೀರಿನ ಗುಣಮಟ್ಟ ಪರಿಶೀಲಿಸಿ. ಪ್ರತಿಯೊಂದು ಟ್ಯಾಂಕರ್‌ಗೂ ಒಬ್ಬ ಅಧಿಕಾರಿ ನೇಮಿಸಿ. ನೀರು ಪೂರೈಕೆ ಸರಿಯಾಗುತ್ತಿದೆಯೇ ಎನ್ನುವುದರ ಕುರಿತು ನಿಗಾವಹಿಸಿ. ಸದ್ಯ ನಗರಸಭೆ ಟೆಂಡರ್‌ ಮೂಲಕ 13 ಟ್ಯಾಂಕರ್‌ಗಳ ಮೂಲಕ ನೀರು ಪೂರೈಸಲಾಗು ತ್ತಿದ್ದು, ಅಗತ್ಯ ಬಿದ್ದಲ್ಲಿ ಇನ್ನೂ ಹೆಚ್ಚಿನ ಟ್ಯಾಂಕರ್‌ ಬಳಸಿ. ಈ ವರ್ಷ 12 ಸಾವಿರ ಲೀ.ನ ಒಂದು ಟ್ಯಾಂಕರ್‌ಗೆ 1,400 ರೂ. ಹಣ ನೀಡಲಾಗುತ್ತಿದೆ. ಕೊಳವೆ ಮೂಲಕ ನೀರು ಪೂರೈಕೆ ಮಾಡ ಲಾಗದ ಕಡೆಗೆ ಟ್ಯಾಂಕರ್‌ನಲ್ಲಿ ಸರಬರಾಜು ಮಾಡಲು ಕ್ರಮ ಕೈಗೊಳ್ಳಿ ಎಂದು ಸಚಿವರು ಸೂಚನೆ ನೀಡಿದರು. 

ಬಜೆ ಅಣೆಕಟ್ಟಿನಲ್ಲಿ ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಈ ಬಾರಿ ಸುಮಾರು 1.5 ಮೀ. ನಷ್ಟು ಕಡಿಮೆ ನೀರು ಸಂಗ್ರಹ ಮಟ್ಟ ತಲುಪಿದೆ. ಹಾಗಾಗಿ ಹೆಚ್ಚಿನ ಮುತುವರ್ಜಿಯಿಂದ ಅಗತ್ಯವಿರುವೆಡೆ ನೀರು ಪೂರೈಸಲಾಗುತ್ತಿದೆ. ನೀರು ಪೂರೈಕೆಗೆ ಹಣದ ಸಮಸ್ಯೆ ಇಲ್ಲ. ಕುಡಿಯುವ ನೀರಿಗಾಗಿ ತಮ್ಮ ಸರಕಾರ ಪ್ರಥಮ ಆದ್ಯತೆ ನೀಡುತ್ತಿದೆ ಎಂದರು. 

ಎ, ಬಿ, ಸಿ. ಯಂತೆ ವಿಂಗಡಿಸಿ ನಗರಕ್ಕೆ ತೀವ್ರತರದ ಕುಡಿಯುವ ನೀರಿನ ತೊಂದರೆ ಎದುರಾಗಿರುವುದರಿಂದ ಈ ಸಮಸ್ಯೆ ನಿವಾರಿಸಲು ಪೂರಕವಾಗುವಂತೆ ನೀರಿನ ತೀವ್ರ ಅಭಾವಕ್ಕೆ ಅನುಸಾರವಾಗಿ ನಗರಸಭಾ ವಾರ್ಡ್‌ಗಳನ್ನು ಎ, ಬಿ ಮತ್ತು ಸಿ ಎಂದು ವಿಂಗಡಣೆ ಮಾಡಿ, ಟ್ಯಾಂಕರ್‌ ಮೂಲಕ ನೀರು ಪೂರೈಸಿ. ಅದಕ್ಕಾ ಗಿಯೇ ವಾರ್ಡ್‌ಗೊಬ್ಬ ನೋಡಲ್‌ ಅಧಿಕಾರಿ ನೇಮಕ ಮಾಡಲಾಗಿದೆ. ಅವರ ಮೊಬೈಲ್‌ 24 ಗಂಟೆ ಕೂಡ ಚಾಲ್ತಿಯಲ್ಲಿರಲಿ ಎಂದು ಸೂಚನೆ ನೀಡಿದರು. ನಗರಸಭಾಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಪೌರಾಯುಕ್ತ ಡಿ. ಮಂಜುನಾಥಯ್ಯ, ಉಪಾಧ್ಯಕ್ಷೆ ಸಂಧ್ಯಾ ತಿಲಕ್‌ರಾಜ್‌, ಸ್ಥಾಯಿ ಸಮಿತಿ ಅಧ್ಯಕ್ಷೆ ಶೋಭಾ, ಸದಸ್ಯರು ಉಪಸ್ಥಿತರಿದ್ದರು. 

ವಾರಾಹಿ ಅಥವಾ ಶಿಂಬ್ರಾ ಅಣೆಕಟ್ಟು ನಿರ್ಮಾಣ
ಸ್ವರ್ಣ ನದಿಯಲ್ಲಿ ವರ್ಷಪೂರ್ತಿ ನೀರು ಸಿಗುವುದು ಕಷ್ಟ. ಹೀಗಾಗಿ 102 ಕೋ. ರೂ. ಕುಡ್ಸೆಂಪ್‌ ಯೋಜನೆಯಡಿ ಶಿಂಬ್ರಾ ಅಣೆಕಟ್ಟು ನಿರ್ಮಿಸಿ ಅಲ್ಲಿ ಹಾಗೂ ಬಜೆ ಅಣೆಕಟ್ಟಿನಲ್ಲಿ ನೀರು ನಿಲ್ಲುವ ಯೋಜನೆ ಇದೆ. 6 ಓವರ್‌ ಹೆಡ್‌ ಟ್ಯಾಂಕ್‌ ನಿರ್ಮಾಣವಾಗಲಿದೆ. ಅದಲ್ಲದೆ ವರ್ಷ ಪೂರ್ತಿ ನೀರಿರುವ ವಾರಾಹಿ ಯೋಜನೆ ಈಗ ಉಡುಪಿ ನಗರದ ಸಮೀಪದ ವರೆಗೆ ಬಂದಿದ್ದು, ಅದನ್ನು ತೆಂಕನಿಡಿಯೂರು ಹಾಗೂ ಚಾಂತಾರು ಗ್ರಾ.ಪಂ.ನ ಬಹುಗ್ರಾಮ ಯೋಜನೆ 82 ಕೋ. ರೂ. ಹಾಗೂ ಕುಡ್ಸೆಂಪ್‌ವಿನ 102 ಕೋ. ರೂ. ಒಟ್ಟು ಸೇರಿಸಿ ನಗರಕ್ಕೆ ನೀರು ಪೂರೈಸುವ ಯೋಜನೆಯಿದೆ. ಈಗ ನೀರಿನ ಸಮಸ್ಯೆ ಇರುವ 110 ದಿನಗಳಿಗೆ ಈ 2 ಯೋಜನೆಗಳಲ್ಲಿ ಯಾವುದು ಹೆಚ್ಚು ಅನುಕೂಲ ಅದನ್ನು ಹೈಡ್ರೋಲಾಜಿಕಲ್‌ ಸರ್ವೇ ಮಾಡಿ ನಿರ್ಧರಿಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

purushotham-bilimale

Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!

Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!

Suilla

Padubidri: ಸಾಲಬಾಧೆ; ನೇಣು ಬಿಗಿದುಕೊಂಡು ವ್ಯಕ್ತಿ ಸಾವು

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

missing

Malpe: ಆಯತಪ್ಪಿ ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.