ಕಡಿಯಾಳಿ: ಶ್ರೀ ಮಹಿಷಮರ್ದಿನಿ ದೇಗುಲ: ಸುತ್ತುಪೌಳಿ ಲೋಕಾರ್ಪಣೆಗೊಳಿಸಿದ ಸಿಎಂ
Team Udayavani, Jun 2, 2022, 2:05 AM IST
ಉಡುಪಿ: ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನ ಬ್ರಹ್ಮಕಲಶೋತ್ಸವ ಕಾರ್ಯ ಕ್ರಮ ಗಳು ಬುಧವಾರ ಆರಂಭ ಗೊಂಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೇಗುಲದ ಸುತ್ತುಪೌಳಿಯನ್ನು ಲೋಕಾರ್ಪಣೆ ಗೊಳಿಸಿದರು.
ಈ ವೇಳೆ ರಾಜ್ಯದ ಒಳಿತಿಗಾಗಿ ವಿಶೇಷ ಪೂಜೆ ಸಲ್ಲಿಸಲಾಯಿತು. ಮುಖ್ಯಮಂತ್ರಿಯವರು ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ದರು. ಜೀರ್ಣೋದ್ಧಾರ ಕಾರ್ಯ ವನ್ನು ವೀಕ್ಷಿಸಿ ದೇವಸ್ಥಾನ ಮತ್ತು ಜೀರ್ಣೋದ್ಧಾರ ಸಮಿತಿ ಪ್ರಮುಖರಲ್ಲಿ ಚರ್ಚಿಸಿದರು.
ಇದೇ ಸಂದರ್ಭದಲ್ಲಿ ಕಾಷ್ಠ ಶಿಲ್ಪದಿಂದ ಕೂಡಿದ ರಾಜ್ಯದ ಪ್ರಥಮ ಸ್ವಯಂ ಚಾಲಿತ ತಿರುಗುವ ಮುಚ್ಚಿಗೆಯನ್ನು ಅನಾವರಣ ಗೊಳಿಸಿದರು.
ಸಚಿವರಾದ ಎಸ್. ಅಂಗಾರ, ಆರ್. ಅಶೋಕ್, ಸುನಿಲ್ ಕುಮಾರ್, ಗೋವಿಂದ ಕಾರಜೋಳ, ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಕೆ. ರಘುಪತಿ ಭಟ್, ಸುಕುಮಾರ ಶೆಟ್ಟಿ, ಮೀನುಗಾರಿಕೆ ಫೆಡರೇಶನ್ ಅಧ್ಯಕ್ಷ
ಯಶ್‌ಪಾಲ್ ಸುವರ್ಣ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹಗ್ಡೆ, ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶ್ರೀನಾಗೇಶ್ ಹೆಗ್ಡೆ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪಿ. ಪುರುಷೋತ್ತಮ ಶೆಟ್ಟಿ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾ| ಕಟ್ಟೆ ರವಿರಾಜ ವಿ. ಆಚಾರ್ಯ, ಜೀರ್ಣೋದ್ಧಾರ ಸಮಿತಿ ಪ್ರ. ಕಾರ್ಯದರ್ಶಿ ರಾಘವೇಂದ್ರ ಕಿಣಿ, ಬ್ರಹ್ಮಕಲಶೋತ್ಸವ ಸಮಿತಿ ಪ್ರ.
ಕಾರ್ಯದರ್ಶಿ ನಿತ್ಯಾನಂದ ಕಾಮತ್, ವ್ಯವಸ್ಥಾಪನ ಸಮಿತಿ ಸದಸ್ಯರಾದ ನಾಗರಾಜ ಶೆಟ್ಟಿ, ಸಂಧ್ಯಾ ಪ್ರಭು, ಶಶಿಕಲಾ ಭರತ್, ಮಂಜುನಾಥ್ ಹೆಬ್ಟಾರ್, ರಮೇಶ್ ಶೇರಿಗಾರ್, ಗಣೇಶ್ ನಾಯ್ಕ, ಕಾರ್ಯ ನಿರ್ವಹ ಣಾಧಿಕಾರಿ ಗಣೇಶ್ ರಾವ್, ಪ್ರಧಾನ ಅರ್ಚಕರಾದ ರಾಧಾಕೃಷ್ಣ ಉಪಾಧ್ಯ, ಶ್ರೀನಿಧಿ ಉಪಾಧ್ಯ ಉಪಸ್ಥಿತರಿದ್ದರು.
5 ಕೋ.ರೂ.ಗೆ ಬೇಡಿಕೆ
ಸುಮಾರು 8 ಕೋ. ರೂ. ವೆಚ್ಚದಲ್ಲಿ ಜೀರ್ಣೋದ್ಧಾರ ಕಾಮಗಾರಿ ನಡೆ ದಿದ್ದು, ಹೆಚ್ಚುವರಿಯಾಗಿ ನೂತನ ಭೋಜನಶಾಲೆ, ಪಿಲಿಚಂಡಿ ದೈವಸ್ಥಾನ, ಯಾಗಶಾಲೆ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ. ಇದಕ್ಕಾಗಿ ಸರಕಾರದಿಂದ 5 ಕೋ.ರೂ. ಅನುದಾನ ಒದಗಿಸುವಂತೆ ಮುಖ್ಯ ಮಂತ್ರಿಯವರಲ್ಲಿ ಸಮಿತಿಯಿಂದ ಬೇಡಿಕೆ ಇಡಲಾಯಿತು. ಅವರು ಸಕಾರಾತ್ಮಕವಾಗಿ ಸ್ಪಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.