UDUPI; ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಘಟನೆ: ವದಂತಿಗಳನ್ನು ನಂಬದಂತೆ ಎಸ್ ಪಿ ಮನವಿ
ಯಾವುದೇ ವಿಡಿಯೋ ಸಿಕ್ಕಿಲ್ಲ, ಬೇರೆ ಘಟನೆಗಳನ್ನು ಇದಕ್ಕೆ ಲಿಂಕ್ ಮಾಡಬೇಡಿ
Team Udayavani, Jul 25, 2023, 12:17 PM IST
ಉಡುಪಿ: ಕೆಲ ದಿನಗಳ ಹಿಂದೆ ಇಲ್ಲಿನ ಖಾಸಗಿ ಕಾಲೇಜೊಂದರ ಶೌಚಾಲಯದಲ್ಲಿ ಕ್ಯಾಮರಾ ಇಟ್ಟು ವಿಡಿಯೋ ಚಿತ್ರೀಕರಣ ಮಾಡಿದ ಘಟನೆಗೆ ಸಂಬಂಧಪಟ್ಟಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳಿಗೆ ಉಡುಪಿ ಎಸ್ ಪಿ ಅಕ್ಷಯ್ ಹಾಕೆ ಸ್ಪಷ್ಟನೆ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಘಟನೆಗೆ ಸಂಬಂಧಪಟ್ಟಂತೆ ಯಾವುದೇ ವಿಡಿಯೋ ನಮಗೆ ಸಿಕ್ಕಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಕೂಡಾ ನಮ್ಮ ಗಮನಕ್ಕೆ ಬಂದಿಲ್ಲ. ಹೀಗಾಗಿ ಸಾರ್ವಜನಿಕರು ಊಹಾಪೋಹದ ಮಾಹಿತಿಗಳನ್ನು ನಂಬಬಾರದು ಎಂದಿದ್ದಾರೆ.
ಎಸ್ ಪಿ ಹೇಳಿದ್ದೇನು?: ಘಟನೆಗೆ ಸಂಬಂಧಪಟ್ಟಂತೆ ಹಲವಾರು ವಿಡಿಯೋಗಳನ್ನು ಮಾಡಿ ಬ್ಲಾಕ್ ಮೇಲ್ ಮಾಡಲಾಗುತ್ತಿದೆ ಎಂದು ಸುದ್ದಿಯಾಗುತ್ತಿದೆ. ಆದರೆ ಇಲ್ಲಿಯ ತನಕ ನಮಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಸಾಮಾಜಿಕ ಜಾಲತಾಣಗಳ ಮೇಲೆ ನಾವೂ ನಿಗಾ ಇಟ್ಟಿದ್ದು ನಮಗೂ ಯಾವುದೇ ವಿಡಿಯೋ ಲಭ್ಯವಾಗಿಲ್ಲ. ಕೆಲವರು ಬೇರೆ ಕಡೆ ಆದ ವಿಡಿಯೋಗಳಿಗೆ ಧ್ವನಿ ಎಡಿಟ್ ಮಾಡಿ ಉಡುಪಿ ಘಟನೆ ಎಂದು ಬಿಂಬಿಸುವ ಪ್ರಸಂಗ ನಡೆದಿದ್ದು, ಅದಕ್ಕೆ ನಾವು ಸ್ಪಷ್ಟನೆ ನೀಡಿದ್ದೇವೆ. ಸಾಮಾಜಿಕ ಜಾಲತಾಣಗಳಲ್ಲಿ ಸತ್ಯಾಂಶ ತಿಳಿಯದೆ ಸುಮ್ಮನೆ ಮಾಹಿತಿ ಹರಡುವುದರಿಂದ ಜನರಿಗೆ ಗೊಂದಲ ಸೃಷ್ಟಿಯಾಗುತ್ತಿದೆ ಎಂದಿದ್ದಾರೆ.
ಘಟನೆ ಸಂಬಂಧಪಟ್ಟಂತೆ ಒಂದಷ್ಟು ಮಾಹಿತಿಗಳು ಹರಿದಾಡುತ್ತಿದೆ. ಆದರೆ ಪೊಲೀಸ್ ಇಲಾಖೆಗೆ ಘಟನೆಯ ವಿಡಿಯೋ ಸಿಕ್ಕಿಲ್ಲ. ಸಾಮಾಜಿಕ ಜಾಲತಾಣಗಳ ಮೇಲೂ ನಾವು ನಿಗಾ ಇಟ್ಟಿದ್ದು, ಅಲ್ಲೂ ನಮ್ಮ ಕಣ್ಣಿಗೆ ಬಿದ್ದಿಲ್ಲ. ಯಾರಾದರೂ ಸಿಕ್ಕಿದರೆ ನಮಗೆ ಮಾಹಿತಿ ತಿಳಿಸಿ ಎಂದಿದ್ದಾರೆ.
ಇದನ್ನೂ ಓದಿ:Geethika Sharma case: 11 ವರ್ಷಗಳ ಬಳಿಕ ಹರ್ಯಾಣ ಶಾಸಕ ಗೋಪಾಲ್ ಕಾಂಡ ಖುಲಾಸೆ
ಘಟನೆಯ ಬಗ್ಗೆ ಯಾವುದೇ ದೂರು ನೀಡಲಾಗಿಲ್ಲ. ನಾವು ಸುಮೋಟೋ ಕೇಸು ದಾಖಲಿಸಲು ಸಾಮಾಜಿಕ ಜಾಲತಾಣದಿಂದ ಯಾವುದೇ ಸಾಕ್ಷಿ ದಾಖಲೆಗಳು ಸಿಕ್ಕಿಲ್ಲ. ಮೊಬೈಲ್ ಪರಿಶೀಲನೆ ಮಾಡಲಾಗಿದೆ, ಅದರಲ್ಲಿಯೂ ಏನೂ ಸಿಕ್ಕಿಲ್ಲ ಎಂದು ಸ್ಪಷ್ಟನೆ ನೀಡಿದರು.
ಟ್ವೀಟ್ ವಿಚಾರಕ್ಕೆ ಮಾತನಾಡಿದ ಎಸ್ ಪಿ, ಟ್ವೀಟ್ ಮಾಡಿದವರು ಘಟನೆಯ ಸತ್ಯಾಸತ್ಯತೆಯ ಬಗ್ಗೆ ತಿಳಿದುಕೊಳ್ಳಬೇಕಿತ್ತು. ಅವರನ್ನು ಪೊಲೀಸರು ಸಂಪರ್ಕಿಸಿದ್ದು ಘಟನೆಯ ಮಾಹಿತಿ ನೀಡಲು ಹೊರತು ತೊಂದರೆ ಕೊಡಲು ಅಲ್ಲ ಎಂದರು.
ಸಾರ್ವಜನಿಕರಿಗೆ ಮನವಿ: ಜನರಿಗೆ ಮನವಿ ಮಾಡುತ್ತೇವೆ. ಸಾಮಾಜಿಕ ಜಾಲತಾಣಗಳಲ್ಲಿ ಬೇಡದ ವಿಚಾರಗಳನ್ನು ಈ ವಿಷಯಕ್ಕೆ ಲಿಂಕ್ ಮಾಡಿ ಜನರ ಮನಸ್ಸಿನಲ್ಲಿ ಆತಂಕ ಸೃಷ್ಟಿ ಮಾಡುವ ಅಥವಾ ಗೊಂದಲವುಂಟು ಮಾಡುವ ಪೋಸ್ಟ್ ಹಾಕಬೇಡಿ. ಏನಾದರೂ ಖಚಿತ ಮಾಹಿತಿ ಸಿಕ್ಕಿದರೆ ಶೇರ್ ಮಾಡುವ ಮೊದಲು ನಮಗೆ ತಿಳಿಸಿ. ಕಾನೂನು ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತೇವೆ. ವದಂತಿ ಹರಡಬೇಡ ಎಂದು ಎಸ್ ಪಿ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.