Udupi; ರಾಮಮಂದಿರಕ್ಕೆ ಕಾಂಗ್ರೆಸ್ ವಿರೋಧ: ಶೋಭಾ ಕರಂದ್ಲಾಜೆ
Team Udayavani, Dec 31, 2023, 10:51 PM IST
ಉಡುಪಿ: ಕಾಂಗ್ರೆಸ್ ಕಳೆದ 70 ವರ್ಷಗಳಿಂದ ಅಯೋಧ್ಯೆಯ ವಿರುದ್ಧ ಹೋರಾಟ ಮಾಡಿತ್ತು. ಕಾಂಗ್ರೆಸ್‌ನ ಕಪಿಲ್ ಸಿಬಲ್ ಅಯೋಧ್ಯೆಯ ವಿರುದ್ಧ ನ್ಯಾಯಾಲಯದಲ್ಲಿ ವಾದ ಮಾಡಿದ್ದರು. ಅಯೋಧ್ಯೆಯಲ್ಲಿ ರಾಮಮಂದಿರ ಆಗಬಾರದು ಎಂದು ಕಾಂಗ್ರೆಸ್ ಉದ್ದೇಶವಾಗಿತ್ತು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದರು.
ಇಂದ್ರಾಳಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ,ಅಲ್ಪಸಂಖ್ಯಾಕರಿಗೆ ನೋವಾಗಬಾರ ದೆಂದು ಕಾಂಗ್ರೆಸ್ ರಾಮ ಮಂದಿರದ ವಿರುದ್ಧ ನಿಲುವು ಹೊಂದಿತ್ತು. ಆದರೆ 2014ರ ಅನಂತರ ನ್ಯಾಯಾಲಯಕ್ಕೆ ರಾಮ ಮಂದಿರದ ಕುರಿತಾದ ಎಲ್ಲ ಮಾಹಿತಿಯನ್ನು ಒದಗಿಸಲಾಯಿತು. ನ್ಯಾಯಾಲಯದಲ್ಲಿ ಜಯ ಆಗಿದೆ. ಈಗ ಭವ್ಯವಾದ ಮಂದಿರ ನಿರ್ಮಾಣವಾಗುತ್ತಿದೆ ಎಂದರು.
ಬಿಜೆಪಿ, ವಿಶ್ವಹಿಂದೂ ಪರಿಷತ್ ಯಾವುದೇ ರಾಜಕೀಯವನ್ನು ಮನಸ್ಸಿನಲ್ಲಿಟ್ಟುಕೊಂಡಿಲ್ಲ. ರಾಮಮಂದಿರದ ಪ್ರತಿಷ್ಠಾಪನೆಯಲ್ಲಿ ಎಲ್ಲರೂ ಭಾಗವಹಿಸಬೇಕು, ಎಲ್ಲರೂ ರಾಮನ ದರ್ಶನ ಮಾಡಬೇಕು. ಇದು ನಮ್ಮ ಅಸ್ಮಿತೆಯ ಪ್ರಶ್ನೆ. ಕಾಂಗ್ರೆಸ್‌ನವರು ಗೈರಾದರೆ ದೇಶಕ್ಕೆ ಮತ್ತು ನಮ್ಮ ಶ್ರದ್ಧೆಗೆ ಮಾಡಿದ ಅವಮಾನವಾಗಲಿದೆ. ಕಾಂಗ್ರೆಸ್ ನಾಯಕರು ಬರುತ್ತಾರೆ ಎಂಬ ವಿಶ್ವಾಸವಿದೆ ಎಂದರು.
ರಾಜ್ಯ ಸರಕಾರದ ವಿರುದ್ಧ ಹಲವಾರು ಮಂದಿ ಹೋರಾಟದ ಮೂಡ್‌ನಲ್ಲಿದ್ದಾರೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರ ದಮನ ನೀತಿಯ ಮೂಲಕ ಅವರ ಬಾಯಿ ಮುಚ್ಚಿಸುತ್ತಿದೆ ಎಂದು ಆರೋಪಿಸಿದರು.
ಹೋರಾಟಗಾರರ ಮಾತುಗಳನ್ನು ನಿಲ್ಲಿಸುವ ಕೆಲಸಕ್ಕೆ ಕೈ ಹಾಕಿದೆ. ಕನ್ನಡದ ಹೋರಾಟಗಾರರು ಹಲವಾರು ವರ್ಷಗಳಿಂದ ಹೋರಾಟ ಮಾಡುತ್ತ ಬಂದಿದ್ದಾರೆ. ತಪ್ಪು, ಸರಿಗಳು ಎಲ್ಲ ಸಂದರ್ಭಗಳಲ್ಲೂ ನಡೆಯುತ್ತವೆ. ಹೋರಾಟಗಾರರನ್ನು 15 ದಿನ ಬಂಧಿಸಿ ಜೈಲಿನಲ್ಲಿ ಇಡುವುದು ಖಂಡಿತವಾಗಿಯೂ ಸರಿಯಲ್ಲ, ಸರಕಾರ ಹೋರಾಟಗಾರಿಗೆ ಯಾಕೆ ಹೆದರುತ್ತಿದೆ? ರಾಜ್ಯ ಸರಕಾರ ಕನ್ನಡ ಹೋರಾಟಗಾರರ ನೆರವಿಗೆ ಧಾವಿಸಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ
Thekkatte: ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ
Shirva: ಏಷ್ಯನ್ ಜೂನಿಯರ್ ವೇಟ್‌ಲಿಫ್ಟಿಂಗ್ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್.ಕೆ
Malpe: ಮೀಟಿಂಗ್ ರೂಮ್‌ಗೆ ಬೆಂಕಿ, ಭಸ್ಮವಾದ ಕಚೇರಿ ಕಡತಗಳು
Udupi: ಗೀತಾರ್ಥ ಚಿಂತನೆ-128: ರಾಮನ ವನವಾಸ, ಪಾಂಡವರ ಅಜ್ಞಾತವಾಸದ ಹಿಂದಿನ ತರ್ಕ
MUST WATCH
ಹೊಸ ಸೇರ್ಪಡೆ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.