Udupi; “ತಾಲಾ ಖೋಲೋ’ ಘೋಷಿತ ಸ್ಥಳದಲ್ಲಿ ಪ್ರತಿಷ್ಠಾಭಿನಂದನೆ


Team Udayavani, Mar 17, 2024, 6:40 AM IST

Udupi; “ತಾಲಾ ಖೋಲೋ’ ಘೋಷಿತ ಸ್ಥಳದಲ್ಲಿ ಪ್ರತಿಷ್ಠಾಭಿನಂದನೆ

ಉಡುಪಿ: ನಾಲ್ಕು ದಶಕಗಳ ಹಿಂದೆ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ರಾಮಮಂದಿರಕ್ಕೆ ಸಂಬಂಧಿಸಿ ಆರಂಭಗೊಂಡ ನಿಶ್ಚಿತ ಗುರಿಯ ಆಂದೋಲನ ಬಾಲರಾಮನ ಮೂರ್ತಿಯ ಪ್ರತಿಷ್ಠಾಪನೆಗೊಂಡು ರಾಜಾಂಗಣದಲ್ಲಿಯೇ ಕೃಷ್ಣಾರ್ಪಣಗೊಳ್ಳುತ್ತಿದೆ.

ಅದು ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಮೂರನೆಯ ಪರ್ಯಾಯ ಕಾಲ. 1985ರ ಅಕ್ಟೋಬರ್‌ 31- ನವೆಂಬರ್‌ 1ರಂದು ರಾಜಾಂಗಣದಲ್ಲಿ ವಿಶ್ವ ಹಿಂದೂ ಪರಿಷದ್‌ನ 2ನೇ ಧರ್ಮಸಂಸದ್‌ ಅಧಿವೇಶನ ಆಯೋಜನೆಗೊಂಡಿತ್ತು. ಆಗ ಅಯೋಧ್ಯೆ ರಾಮಮಂದಿರಕ್ಕೆ ಬೀಗವಿತ್ತು. ಅಧಿವೇಶನದಲ್ಲಿ “ತಾಲಾ ಖೋಲೋ’ ಮತ್ತು “ಮಂದಿರ್‌ ವಹೀ ಬನಾಯೇಂಗೇ’ ಎಂಬೆರಡು ಉದ್ಘೋಷಗಳು ನಿರ್ಣಯ ರೂಪದಲ್ಲಿ ಹೊರಬಿದ್ದವು. “ಮಂದಿರ್‌ ವಹೀ ಬನಾಯೇಂಗೇ’ ಘೋಷಣೆ ಇಡೀ ದೇಶದಲ್ಲಿ ಅನುರಣಿಸಿತು. ರಾಜೀವ್‌ ಗಾಂಧಿ ನೇತೃತ್ವದ ಕೇಂದ್ರ ಸರಕಾರ ಮಂದಿರದ ಬೀಗವನ್ನು ತೆರೆಸಿತು.

ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಐದನೆಯ ಪರ್ಯಾಯ ಅವಧಿಯಲ್ಲಿ 2017ರ ನವೆಂಬರ್‌ 24ರಿಂದ 26ರ ವರೆಗೆ ಮತ್ತೆ ಧರ್ಮಸಂಸದ್‌ನ 12ನೆಯ ಅಧಿವೇಶನ ನಡೆಯಿತು. ನ. 2ರಂದು ಆಶಯ ಭಾಷಣ ಮಾಡಿದ ಶ್ರೀಪಾದರು “2019ರ ಒಳಗೆ ಸಮಸ್ಯೆ ಇತ್ಯರ್ಥವಾಗಲಿದೆ’ ಎಂದು ಭವಿಷ್ಯ ನುಡಿದಿದ್ದರು. 2019ರ ನವೆಂಬರ್‌ 9ರಂದು ಸರ್ವೋಚ್ಚ ನ್ಯಾಯಾಲಯದ ಪೀಠ ಮಂದಿರ ನಿರ್ಮಾಣಕ್ಕೆ ಪೂರಕವಾದ ತೀರ್ಪು ನೀಡಿದಾಗ ಅದನ್ನು ಟಿವಿಯಲ್ಲಿ ನೋಡಿ ಶ್ರೀಪಾದರು ಸಂತಸಗೊಂಡರು. ಡಿಸೆಂಬರ್‌ 19ರಂದು ಅಸ್ವಸ್ಥಗೊಂಡ ಅವರು 29ರಂದು ಇಹಲೋಕ ತ್ಯಜಿಸಿದರು. ಅವರ ಶಿಷ್ಯರಾಗಿ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಅಯೋಧ್ಯೆ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ಟ್ರಸ್ಟಿಯಾಗಿ ನೇಮಕಗೊಂಡು ಮಂದಿರ ನಿರ್ಮಾಣದಲ್ಲಿ ಸಕ್ರಿಯರಾದರು.

1992ರ ಡಿಸೆಂಬರ್‌ 6ರಂದು ನಡೆದ ಕರಸೇವೆಯ ಸಮಯದಲ್ಲಿ ಪಾಲ್ಗೊಂಡಿದ್ದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಮರುದಿನ (ಡಿ.7) ಬೆಳಗ್ಗೆ ಅಚಾನಕ್ಕಾಗಿ ರಾಮಲಲ್ಲಾ ಮೂರ್ತಿಯನ್ನು ತುರ್ತು ಪ್ರತಿಷ್ಠೆ ಮಾಡಿದ್ದರು. ಆಗ ಶ್ರೀಕೃಷ್ಣ ಮಠದಲ್ಲಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ 2ನೇ ಪರ್ಯಾಯ ಅವಧಿ. ಈಗ 2024ರ ಜನವರಿ 18ರಂದು ಪುತ್ತಿಗೆ ಮಠಾಧೀಶರ 4ನೇ ಪರ್ಯಾಯ ಪೂಜೆ ಆರಂಭದ ದಿನವೇ ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರತಿಷ್ಠೆ ಆರಂಭಗೊಂಡು ಜ. 22ರಂದು ಮೂರ್ತಿಯನ್ನು ಪ್ರಧಾನಿ ಮೋದಿ ಪ್ರತಿಷ್ಠಾಪಿಸಿದರೆ, ಪೇಜಾವರ ಮಠದ ಶ್ರೀವಿಶ್ವಪ್ರಸನ್ನತೀರ್ಥ ಶ್ರೀಪಾದರು ಪ್ರಾಣಪ್ರತಿಷ್ಠೆ ನೆರವೇರಿಸಿದರು.

ಇಂದು ಪೇಜಾವರ ಶ್ರೀ ಉಡುಪಿಗೆ
ಅಯೋಧ್ಯೆಯಲ್ಲಿ 48 ದಿನಗಳ ಮಂಡಲೋತ್ಸವ ಪೂರ್ಣಗೊಳಿಸಿದ ಪೇಜಾವರ ಶ್ರೀಪಾದರು ಮಾ. 17ರಂದು ಉಡುಪಿಗೆ ಆಗಮಿಸುತ್ತಿದ್ದಾರೆ. ಬೆಳಗ್ಗೆ 11ಕ್ಕೆ ಜೋಡುಕಟ್ಟೆಯಿಂದ ತೆರೆದ ವಾಹನದಲ್ಲಿ 100ಕ್ಕೂ ಅಧಿಕ ದ್ವಿಚಕ್ರ ವಾಹನಗಳ ಜಾಥಾದೊಂದಿಗೆ ಶ್ರೀ ಕೃಷ್ಣಮಠಕ್ಕೆ ಬರಲಿದ್ದಾರೆ. ನಾಲ್ಕು ದಶಕಗಳ ಹಿಂದೆ ಚಳವಳಿ ಆರಂಭಗೊಂಡ ರಾಜಾಂಗಣದಲ್ಲಿಯೇ ಪುತ್ತಿಗೆ ಶ್ರೀಗಳು ಪೇಜಾವರ ಶ್ರೀಗಳನ್ನು ಅಭಿನಂದಿಸಲಿದ್ದಾರೆ.

ಟಾಪ್ ನ್ಯೂಸ್

Anmol Buffalo: The price of this Buffalo weighing 1500 kg is Rs 23 crore!

Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!

13-BBK-11

BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!

12-gundya

Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು

ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಲ್ಕರ್ ಹತ್ಯೆ ಆರೋಪಿ: ಮೂಲಗಳು

Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ

Kiwi player will be away from Test cricket after the England series

Test: ಇಂಗ್ಲೆಂಡ್‌ ಸರಣಿಯ ಬಳಿಕ ಟೆಸ್ಟ್‌ ಕ್ರಿಕೆಟ್‌ ನಿಂದ ದೂರವಾಗಲಿದ್ದಾರೆ ಕಿವೀಸ್‌ ಆಟಗಾರ

Shimoga; Congress – Statement against Muslims: Sumoto case against KS Eshwarappa

Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ

Karkala: ತಿಂಗಳ ಹಿಂದೆ ಮೃತಪಟ್ಟಿದ್ದ ಪತಿ, ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿಯೂ ವಿದ್ಯುತ್ ಆಘಾತದಿಂದ ಮೃ*ತ್ಯು

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು

Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ

Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ

ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ

ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

14-bng

Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು

Anmol Buffalo: The price of this Buffalo weighing 1500 kg is Rs 23 crore!

Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!

13-BBK-11

BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!

Daali dhananjay starrer Zebra movie

Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್‌ ಸಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.