Udupi ಮಹಿಳಾ ದೌರ್ಜನ್ಯಕ್ಕೆ ಕಡಿವಾಣ: ಡಿಸಿ ಸೂಚನೆ
233 ಮಹಿಳಾ ದೌರ್ಜನ್ಯ, 38 ಪೋಕ್ಸೋ, 73 ಕೌಟುಂಬಿಕ ಹಿಂಸೆ ಪ್ರಕರಣ
Team Udayavani, Sep 30, 2023, 12:23 AM IST
ಮಣಿಪಾಲ: ಕಳೆದೊಂದು ವರ್ಷದಲ್ಲಿ ಜಿಲ್ಲೆಯಲ್ಲಿ 233 ಮಹಿಳಾ ದೌರ್ಜನ್ಯ, 73 ಕೌಟುಂಬಿಕ ಹಿಂಸಾಚಾರ ಹಾಗೂ 38 ಪೋಕ್ಸೋ ಪ್ರಕರಣ ದಾಖಲಾಗಿದೆ. ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ವಿವಿಧ ಸಭೆಗಳ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಮಹಿಳೆ ಮತ್ತು ಮಕ್ಕಳ ರಕ್ಷಣೆಗೆ ಸರಕಾರ ಅನೇಕ ಕಾನೂನು ಹಾಗೂ ಅವರ ಕಲ್ಯಾಣಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇವುಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ನಿರ್ದೇಶಿಸಿದರು.
ನೊಂದ ಮಹಿಳೆಯರಿಗೆ ನೆರವು ನೀಡಲು ಜಿಲ್ಲೆಯಲ್ಲಿ ಸಖೀ ಒನ್ ಸ್ಟಾಪ್ ಸೆಂಟರ್ ಆರಂಭಿಸಲಾಗಿದ್ದು, ಸಂಕಷ್ಟದಲ್ಲಿರುವ ಮಹಿಳೆಯರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಮಹಿಳೆಯರ ಮೇಲಿನ ದೌರ್ಜನ್ಯದ 233 ಪ್ರಕರಣಗಳಲ್ಲಿ 181 ಪ್ರಕರಣಗಳು ಇತ್ಯರ್ಥಗೊಂಡಿವೆ. ಕೌಟುಂಬಿಕ ಹಿಂಸೆಗೆ ಸಂಬಂಧಿಸಿದ 73ರಲ್ಲಿ 49 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಪೋಕೊÕà ಕಾಯ್ದೆಯಡಿ 38 ಪ್ರಕರಣಗಳು ದಾಖಲಾಗಿದ್ದು, 23 ಪ್ರಕರಣಗಳು ನ್ಯಾಯಾಲಯದಲ್ಲಿವೆ. 10 ಪ್ರಕರಣಗಳು ತನಿಖೆಯ ಹಂತದಲ್ಲಿ ಇದೆ ಎಂದರು.
ಶಾಲೆಗಳಲ್ಲಿ ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕುರಿತು ಜಾಗೃತಿ ಮೂಡಿಸಬೇಕು. ಮಾತೃ ವಂದನ ಯೋಜನೆಯ ಬಗ್ಗೆ ಗರ್ಭಿಣಿಯವರಿಗೆ ಅಂಗನವಾಡಿಗಳ ಮೂಲಕ ಮಾಹಿತಿ ನೀಡಿ, ಅರ್ಹರಿಗೆ ಯೋಜನೆಯ ಫಲ ಸಿಗುವಂತೆ ಮಾಡಬೇಕು ಎಂದರು.
ಜಿ. ಪಂ. ಸಿಇಒ ಪ್ರಸನ್ನ ಎಚ್., ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್., ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ., ಡಿವೈಎಸ್‌ಪಿ ದಿನಕರ್ ಪಿ.ಕೆ., ತಾಲೂಕುಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ಸ್ವಯಂಸೇವಾ ಸಂಸ್ಥೆಯ ಮುಖ್ಯಸ್ಥರು ಉಪಸ್ಥಿತರಿದ್ದರು.
ಪರಿಶೀಲನೆ ನಡೆಸಿ
ದೇವಸ್ಥಾನಗಳಲ್ಲಿ ಮದುವೆ ಏರ್ಪಡಿಸುವ ಸಂದರ್ಭದಲ್ಲಿ ಬಾಲ್ಯ ವಿವಾಹದ ಅನುಮಾನ ಬಂದಲ್ಲಿ ಅರ್ಚಕರು ವಧು-ವರರ ಜನನ ಪ್ರಮಾಣ ಪತ್ರ ಪರಿಶೀಲಿಸಿ ಮದುವೆ ನಡೆಸಬೇಕು. ಇಲ್ಲವಾದಲ್ಲಿ ಅರ್ಚಕರನ್ನು ಶಿಕ್ಷೆಗೆ ಒಳಪಡಿಸಲಾಗುವುದು. ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಈ ಕುರಿತು ನಿಗಾ ವಹಿಸಬೇಕು. ಇಲ್ಲವಾದರೆ ಅವರನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು. ಬಾಲ್ಯ ವಿವಾಹ ಸಂಬಂಧ ಗ್ರಾ.ಪಂ.ಗಳಲ್ಲಿ ಆಗಾಗ್ಗೆ ಸಭೆ ನಡೆಸಬೇಕು. ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ, ಬಾಲ್ಯ ವಿವಾಹ ತಡೆಗಟ್ಟುವ ಕುರಿತು ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ| ವಿದ್ಯಾ ಕುಮಾರಿ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.