Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡರ್ ಸ್ಫೋ*ಟ: ಅಪಾರ ಹಾನಿ
Team Udayavani, Nov 4, 2024, 11:02 PM IST
ಉಡುಪಿ: ಪಾರ್ಟಿ ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಅಪಾರ ಪ್ರಮಾಣದ ಹಾನಿ ಉಂಟಾದ ಘಟನೆ ಉಡುಪಿ ಕಲ್ಸಂಕ ಸಮೀಪದ ಬಡಗುಪೇಟೆ ರಸ್ತೆಯ ಅಪಾರ್ಟ್ ಮೆಂಟ್ ವೊಂದರಲ್ಲಿ ಸೋಮವಾರ(ನ4) ರಾತ್ರಿ ನಡೆದಿದೆ.
ಗ್ಯಾಸ್ ಸಿಲಿಂಡರ್ ಲೀಕ್ ಆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಮೂರು ಅಂತಸ್ತಿನ ಅಪಾರ್ಟ್ ಮೆಂಟ್ ನ ಮೂರನೇ ಮಹಡಿಯಲ್ಲಿ ಪಶ್ಚಿಮ ಬಂಗಾಳ ಮೂಲದ ಕಾರ್ಮಿಕರು ಪಾರ್ಟಿ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಗ್ಯಾಸ್ ಸಿಲಿಂಡರ್ ಲೀಕ್ ಆಗಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಕೊಠಡಿಯಲ್ಲಿ ಪಾರ್ಟಿ ಮಾಡುತ್ತಿದ್ದವರು ಹೊರಗೆ ಓಡಿ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಬಳಿಕ ಅಗ್ನಿ ಶಾಮಕ ಇಲಾಖೆಗೆ ಮಾಹಿತಿ ನೀಡಿದ್ದಾರೆ. ತತ್ ಕ್ಷಣವೇ ಸ್ಥಳಕ್ಕೆ ಬಂದ ಅಗ್ನಿಶಾಮಕ ಇಲಾಖೆಯ ಸಿಬಂದಿ ಕಾರ್ಯಾಚರಣೆ ನಡೆಸಿ ಸಂಭವನೀಯ ಅನಾಹುತವೊಂದನ್ನು ತಪ್ಪಿಸಿದ್ದಾರೆ.
ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಮನೆಯಲ್ಲಿದ್ದ ಸೊತ್ತುಗಳು ಸುಟ್ಟು ಕರಕಲಾಗಿದ್ದು, ಅಪಾರ ಪ್ರಮಾಣದ ಹಾನಿಯುಂಟಾಗಿದೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal: ಕೇಂದ್ರ ಸರಕಾರದ ಯೋಜನೆ ಫಲಾನುಭವಿಗಳಿಗೆ ಸಾಲ ನೀಡಲು ಸತಾಯಿಸಬೇಡಿ: ಸಂಸದ ಕೋಟ
Udupi; ಗೀತಾರ್ಥ ಚಿಂತನೆ 132: ತಣ್ತೀವಿರುವುದು ಉಪದೇಶಕ್ಕಲ್ಲ, ಅಭ್ಯಾಸಕ್ಕೆ
Udupi: ವಿಶ್ವಶಾಂತಿಗೆ ಭಗವದ್ಗೀತೆಯೇ ಮೂಲಾಧಾರ: ಪುತ್ತಿಗೆ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಕುದ್ರು ನೆಸ್ಟ್ ರೆಸಾರ್ಟ್‌ನಲ್ಲಿ ಬೆಂಕಿ ಅವಘಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.